“ಘೋಸ್ಟ್‌” ಚಿತ್ರದ ಮೊದಲ ಹಂತದ ಚಿತ್ರೀಕರಣ ಪೂರ್ಣ.

ghost kannada movie first schedule complete

ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯದ ಈ ಚಿತ್ರಕ್ಕೆ ಅಪಾರ ವೆಚ್ಚದಲ್ಲಿ ನಿರ್ಮಾಣವಾಗಿದೆ ಅದ್ದೂರಿ ಸೆಟ್ ಗಳು.

ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ, ಸಂದೇಶ್ ನಾಗರಾಜ್ (MLC) ಅರ್ಪಿಸುವ, ಸಂದೇಶ್ ಎನ್ ನಿರ್ಮಿಸುತ್ತಿರುವ ಹಾಗೂ ಶ್ರೀನಿ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ಅಭಿನಯಿಸುತ್ತಿರುವ “ಘೋಸ್ಟ್‌” ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ.ghost kannada movie first schedule complete

ಬೆಂಗಳೂರಿನ ಮಿನರ್ವ ಮಿಲ್ ನಲ್ಲಿ ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಿಸಲಾಗಿರುವ ಹದಿನೈದಕ್ಕೂ ಅಧಿಕ ಸೆಟ್ ಗಳಲ್ಲಿ 28ದಿನಗಳ ಚಿತ್ರೀಕರಣ ನಡೆದಿದೆ. ಶಿವರಾಜಕುಮಾರ್, ಜಯರಾಮ್, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್ ಮುಂತಾದ ಕಲಾವಿದರು ಈ ಹಂತದ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು.ghost kannada movie first schedule complete

ಮೋಹನ್ ಬಿ ಕೆರೆ ಈ ಚಿತ್ರದ ಕಲಾ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ದ್ವಿತೀಯ ಹಂತದ ಚಿತ್ರೀಕರಣ ಡಿಸೆಂಬರ್ ನಲ್ಲಿ ಮೈಸೂರಿನಲ್ಲಿ ಆರಂಭವಾಗಲಿದೆ.ghost kannada movie first schedule complete
ನಿರ್ದೇಶಕ ಶ್ರೀನಿ ಅವರೆ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಸಂಭಾಷಣೆ ಮಾಸ್ತಿ ಹಾಗೂ ಪ್ರಸನ್ನ ಅವರದು. ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಹಾಗೂ ಮಹೇಂದ್ರ ಸಿಂಹ ಛಾಯಾಗ್ರಹಣ “ಘೋಸ್ಟ್‌ ” ಚಿತ್ರಕ್ಕಿದೆ. ಐದು ಸಾಹಸ ಸನ್ನಿವೇಶಗಳು ಈ ಚಿತ್ರದಲ್ಲಿದೆ.ghost kannada movie first schedule complete

ಶಿವರಾಜಕುಮಾರ್, ಜಯರಾಂ, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್, ದತ್ತಣ್ಣ, ಅಭಿಜಿತ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.ghost kannada movie first schedule complete

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…