“ಗಿರ್ಕಿ” ಗೆ ಸಿಗುತ್ತಿದೆ ನೋಡುಗರಿಂದ ಉತ್ತಮ ಪ್ರೋತ್ಸಾಹ. ನಿರ್ಮಾಪಕರಿಗೆ ಮತ್ತೊಂದು ಸಿನಿಮಾ ಆರಂಭಿಸುವ ಉತ್ಸಾಹ.

ಕಿರುತೆರೆ ಹಾಗೂ ಹಿರಿತೆರೆಯಲ್ಲಿ ಜನರನ್ನು ತಮ್ಮ ಪಾತ್ರದ ಮೂಲಕ ನಕ್ಕುನಗಿಸುವ ತರಂಗ ವಿಶ್ವ ನಿರ್ಮಿಸಿರುವ, ವೀರೇಶ್ ಪಿ.ಎಂ ನಿರ್ದೇಶಿಸಿರುವ “ಗಿರ್ಕಿ” ಚಿತ್ರ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ನಿರ್ಮಾಣದಲ್ಲಿ ವಿಶ್ವ ಅವರಿಗೆ ವಾಸುಕಿ ಭುವನ್ ಸಾಥ್ ನೀಡಿದ್ದಾರೆ.WhatsApp Image 2022 07 14 at 10.12.37 PM 1

ಈ ಸಂತಸವನ್ನು ಚಿತ್ರತಂಡ ಮಾಧ್ಯಮದವರ ಮುಂದೆ ಹಂಚಿಕೊಂಡರು.

ನಟನಾಗಿದ್ದ ನಾನು, ಈ ಚಿತ್ರದಿಂದ ನಿರ್ಮಾಪಕನಾದೆ. ನಟನೆ ಕೂಡ ಮಾಡಿದ್ದೇನೆ. ಕಳೆದವಾರ ಚಿತ್ರ ತೆರೆ ಕಂಡಿದೆ. ನಮ್ಮ ಚಿತ್ರಕ್ಕೆ ರಾಜ್ಯಾದ್ಯಂತ ಸಿಗುತ್ತಿರುವ ಮೆಚ್ಚುಗೆಗೆ ಮನ ತುಂಬಿ ಬಂದಿದೆ. ಕನಕಪುರ ಸೇರಿ ಹಲವು ಕಡೆ ಭೇಟಿ ನೀಡಿದ್ದೇನೆ. ಜನ ಸಿನಿಮಾ ಬಗ್ಗೆ ಉತ್ತಮ ಮಾತುಗಳಾಡುತ್ತಿದ್ದಾರೆ. ಚಿತ್ರದ ಹಿಂದಿ ರೈಟ್ಸ್ ಕೂಡ ಮಾರಾಟವಾಗುವ ಬಗ್ಗೆ ಮಾತುಕತೆ ನಡೆಯುತ್ತಿದೆ. ಸದ್ಯದಲ್ಲೇ ನಾನು ಮತ್ತೊಂದು ಚಿತ್ರ ಸಹ ಆರಂಭಿಸಲಿದ್ದೇನೆ. ಚಿತ್ರದ ಗೆಲುವಿಗೆ ಕಾರಣರಾದ ನನ್ನ ಚಿತ್ರತಂಡಕ್ಕೆ ಹಾಗೂ ಕನ್ನಡ ಕಲಾರಸಿಕರಿಗೆ ನನ್ನ ಧನ್ಯವಾದ ಎಂದರು ನಿರ್ಮಾಪಕ ಹಾಗೂ ನಟ ತರಂಗ ವಿಶ್ವ.girki film press meet 164965920630

ನಾನು ಅಸೋಸಿಯೇಟ್ ಆಗಿದ್ದಾಗ ಚಿತ್ರಮಂದಿರಕ್ಕೆ ಭೇಟಿ ನೀಡುತ್ತಿದೆ. ಆಗ ಅಲ್ಲಿ ಜನರು ಆ ನಿರ್ದೇಶಕನ ಬಗ್ಗೆ ಆಡುತ್ತಿದ್ದ ಪ್ರಶಂಸೆಯ ಮಾತುಗಳನ್ನು ಕೇಳಿ ನನಗೂ‌ ನಿರ್ದೇಶಕನಾಗುವ ಅಸೆ ಹೆಚ್ಚುತ್ತಿತ್ತು. ಈಗ ನಾನು ಆ ಸಂತೋಷವನ್ನು ‌ಅನುಭವಿಸುತ್ತಿದ್ದೇನೆ. ನಮ್ಮ ಚಿತ್ರಕ್ಕೆ ಹೋದ ಕಡೆ ಎಲ್ಲಾ ಉತ್ತಮ ಪ್ರಶಂಸೆ ಸಿಗುತ್ತಿದೆ. ಅವಕಾಶ ನೀಡಿದ ನಿರ್ಮಾಪಕರಿಗೆ‌ ಹಾಗೂ ನನ್ನ ತಂಡಕ್ಕೆ ಧನ್ಯವಾದ ಎಂದರು ನಿರ್ದೇಶಕ ವೀರೇಶ್ ಪಿ.ಎಂ.girki film press meet 164965920620

ತಮ್ಮ ಚಿತ್ರಕ್ಕೆ ಸಿಗುತ್ತಿರುವ ಯಶಸ್ಸಿನ ಬಗ್ಗೆ ನಟ ವಿಲೋಕ್ ರಾಜ್, ಆನಂದಭರಿತ ಮಾತುಗಳನ್ನಾಡುವ ಮೂಲಕ ಸಂಭ್ರಮಿಸಿದರು. ಯಶಸ್ಸನ್ನು ಸಂಭ್ರಿಮಿಸುವುದು ಒಬ್ಬೊಬ್ಬರು ಬೇರೆ ಬೇರೆ ರೀತಿ. ನಾನು ಥಿಯೇಟರ್ ಗೆ ಹೋದಾಗ ಜನ‌‌ ಸಿಳ್ಳೆ ಹೊಡೆಯುತ್ತಾರಲ್ಲಾ? ಎದುರಿಗೆ ಸಿಕ್ಕಾಗ ಆ ಪಾತ್ರ ಮಾಡಿರುವುದು ನೀವೇ ಅಲ್ಲವಾ? ಅಂತಾರಲ್ಲ. ಅದೇ ನನಗೆ ನಿಜವಾದ ಯಶಸ್ಸು ಎಂದರು ದಿವ್ಯ ಉರುಡಗ.girki et00331278 16 06 2022 11 17 08

ಪರಿಮಳ ಎಂಬ ಪಾತ್ರದ ಹೆಸರಿನ ಮೂಲಕ ನನ್ನ ಹೋದ ಕಡೆ ಗುರುತಿಸುತ್ತಿದ್ದಾರೆ. ಸಂತೋಷವಾಗಿದೆ ಎಂದರು ರಾಶಿ ಮಹದೇವ್. ಸಂಗೀತ ನಿರ್ದೇಶಕ ವೀರಸಮರ್ಥ್, ವಿತರಕ ರಾಜು ಮುಂತಾದವರು “ಗಿರ್ಕಿ” ಬಗ್ಗೆ ಮಾತನಾಡಿದರು.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…