ಭೂಗತ ಜಗತ್ತಿನ ಕಥೆಯ ಜೊತೆಗೆ ಪ್ರೇಮ ಕಥಾನಕವನ್ನು ಹೊಂದಿರುವ “ಗನ್ಸ್ ಅಂಡ್ ರೋಸಸ್” Guns and Roses ಚಿತ್ರಕ್ಕೆ ಉದ್ಯಾನನಗರಿ ಬೆಂಗಳೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಬೆಂಗಳೂರಿನ ಕೆಂಗೇರಿ ಸುತ್ತಮುತ್ತ, ಕಂಠೀರವ ಸ್ಟುಡಿಯೋ, ಉಲ್ಲಾಳದ ವಿಶ್ವೇಶ್ವರಯ್ಯ ಲೇಔಟ್ ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ಬೆಂಗಳೂರು ನಗರದಲ್ಲೇ ನಡೆಯುವ ಕಥೆಯಾಗಿರುವುದರಿಂದ ಬೆಂಗಳೂರಿನಲ್ಲೇ ಚಿತ್ರೀಕರಣ ನಡೆಯುತ್ತಿದೆ. ಈವರೆಗೂ ಮಾತಿನ ಭಾಗದ ಚಿತ್ರೀಕರಣ, ಸಾಹಸ ಸನ್ನಿವೇಶದ ಚಿತ್ರೀಕರಣ ನಡೆದಿದೆ. ಥ್ರಿಲ್ಲರ್ ಮಂಜು ಈ ಚಿತ್ರದ ಸಾಹಸ ನಿರ್ದೇಶಕರು.
ರಾಜಕೀಯದಲ್ಲಿ ಸಕ್ರಿಯರಾಗಿರುವ ಉದ್ಯಮಿ ಹೆಚ್ ಆರ್ ನಟರಾಜ್ ನಿರ್ಮಾಣ ಮಾಡುತ್ತಿರುವ ಈ ಚಿತ್ರವನ್ನು ಹೆಚ್ ಎಸ್ ಶ್ರೀನಿವಾಸ್ ಕುಮಾರ್ ನಿರ್ದೇಶಿಸುತ್ತಿದ್ದಾರೆ. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಶರತ್ ಎಸ್ ಅವರದು. ಶಶಿಕುಮಾರ್ ಸಂಗೀತ ನಿರ್ದೇಶನ, ಆರ್ ಜನಾರ್ದನ್ ಛಾಯಾಗ್ರಹಣ, ಸಂಜೀವ ರೆಡ್ಡಿ ಸಂಕಲನ ಹಾಗೂ ಥ್ರಿಲ್ಲರ್ ಮಂಜು ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.
Actress
ಖ್ಯಾತ ಕಥೆಗಾರರಾದ ಅಜಯ್ ಕುಮಾರ್ ಅವರ ಪುತ್ರ ಅರ್ಜುನ್ ನಾಯಕನಾಗಿ ನಟಿಸುತ್ತಿರುವ ಈ ಚಿತ್ರದ ನಾಯಕಿ ಯಶ್ಚಿಕ ನಿಷ್ಕಲ. ಶೋಭ್ ರಾಜ್, ಅವಿನಾಶ್, ಅಶ್ವಥ್ ನೀನಾಸಂ, ಹರೀಶ್, ಜೀವನ್ ರಿಚಿ, ಅರುಣಾ ಬಾಲರಾಜ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.