ಗುರು ದೇಶಪಾಂಡೆ ನಿರ್ಮಾಣದ ಹಾಗೂ ಬಿ.ಎಂ ಗಿರಿರಾಜ್ ನಿರ್ದೇಶನದ ನೂತನ ಚಿತ್ರಕ್ಕೆ ಬಿ.ಜೆ.ಭರತ್ ಸಾರಥ್ಯದಲ್ಲಿ ಹಾಡುಗಳ ಧ್ವನಿಮುದ್ರಣ ಆರಂಭ .

ನಿರ್ದೇಶಕ ಹಾಗೂ ನಿರ್ಮಾಪಕ ಗುರು ದೇಶಪಾಂಡೆ ತಮ್ಮ ಜಿ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣ ಮಾಡುತ್ತಿರುವ “ಪ್ರೊಡಕ್ಷನ್ ನಂ 4” ಚಿತ್ರದ ಹಾಡುಗಳ ಧ್ವನಿಮುದ್ರಣ (ಸಾಂಗ್ ರೆಕಾರ್ಡಿಂಗ್) ಪೂಜೆ ನಾಗರಭಾವಿಯ ಲೂಪ್ ಸ್ಟುಡಿಯೋಸ್ ನಲ್ಲಿ ನೆರವೇರಿತು. “ಜಟ್ಟ”, “ಮೈತ್ರಿ” ಚಿತ್ರಗಳ ಖ್ಯಾತಿಯ ಬಿ.ಎಂ ಗಿರಿರಾಜ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.‌ ಕನ್ನಡದ ಹೆಸರಾಂತ ನಿರ್ದೇಶಕ ಬಿ.ಜೆ.ಭರತ್ ಸಂಗೀತ ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ.Guru Deshpande New Movie

ಹಿಂದೆ ಸಾಂಗ್ ರೆಕಾರ್ಡಿಂಗ್ ಪೂಜೆ ಎಂದರೆ ಒಂದು ಸಡಗರ ಎಂದು ಮಾತು ಆರಂಭಿಸಿದ ನಿರ್ದೇಶಕ ಗಿರಿರಾಜ್, ಈಗ ಕೆಲವು ವರ್ಷಗಳಿಂದ ಆ ಸಂಸ್ಕೃತಿ ಮರೆತು ಹೋಗಿದೆ. ಗುರು ದೇಶಪಾಂಡೆ ಮತ್ತೆ ಸಾಂಗ್ ರೆಕಾರ್ಡಿಂಗ್ ಪೂಜೆ ಮೂಲಕ ತಮ್ಮ ನೂತನ ಚಿತ್ರಕ್ಕೆ ಚಾಲನೆ ನೀಡಿದ್ದಾರೆ. ಇಂದು ಒಳ್ಳೆಯ ದಿವಸ ಎಂದು ಪೂಜೆ ಆರಂಭಿಸಿದ್ದೇವೆ. ಈ ಸಿನಿಮಾ ಈ ಕಾಲಘಟ್ಟದಲ್ಲಿ ನಡೆಯುವ ಕಥೆಯಾಗಿರುತ್ತದೆ. ಮರೆಯಾಗುತ್ತಿರುವ ಸಂಸ್ಕೃತಿಯ ಮತ್ತೆ ತರುವ ಪ್ರಯತ್ನವನ್ನು ಈ ಚಿತ್ರದಲ್ಲಿ ಮಾಡುತ್ತಿದ್ದೇವೆ. ಭರತ್ ಅವರ ಸಂಗೀತ ನಿರ್ದೇಶನದಲ್ಲಿ ಇಂದಿನಿಂದ ಸಾಂಗ್ ರೆಕಾರ್ಡಿಂಗ್ ಆರಂಭವಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಮಾಹಿತಿ ನೀಡುತ್ತೇವೆ ಎಂದರು.Guru Deshpande New Movie

ಇದು ಜಿ ಸಿನಿಮಾಸ್ ಮೂಲಕ ನಿರ್ಮಾಣವಾಗುತ್ತಿರುವ ನಾಲ್ಕನೇಯ ಚಿತ್ರ. ನಮ್ಮ ಜಿ ಅಕಾಡೆಮಿ ಮೂಲಕ ಸಾಕಷ್ಟು ಮಕ್ಕಳಿಗೆ ನಟನಾ ತರಬೇತಿ ನೀಡಲಾಗುತ್ತಿದೆ. ಈಗಾಗಲೇ ಹತ್ತು ಬ್ಯಾಚ್ ಗಳು ಯಶಸ್ವಿಯಾಗಿ ಪೂರ್ಣವಾಗಿದೆ. ಮಕ್ಕಳಿಗೆ ಬರೀ ನಟನೆ ಕಲಿಸಿಕೊಟ್ಟು ಕಳುಹಿಸಿದರೆ ಸಾಲದು. ಅವರಿಗೆ ಸೂಕ್ತ ವೇದಿಕೆ ಕೂಡ ಕಲ್ಪಿಸಿಕೊಡಬೇಕು. ಅದರಲ್ಲೂ ವಿಶೇಷವಾಗಿ ಮಧ್ಯಮವರ್ಗದ ಮಕ್ಕಳಿಗೆ. ಆ ಸಲುವಾಗಿ ನಮ್ಮ ಈ ಚಿತ್ರದಲ್ಲಿ ನಮ್ಮ ಜಿ ಅಕಾಡೆಮಿಯ 15ಕ್ಕೂ ಅಧಿಕ ಮಕ್ಕಳು ನಟಿಸಲಿದ್ದಾರೆ. ಕನ್ನಡದ ಹೆಸರಾಂತ ನಟರು ಈ ಚಿತ್ರದ ನಾಯಕರಾಗಿ ಅಭಿನಯಿಸಲಿದ್ದಾರೆ. ಈ ಕುರಿತು ಹೆಚ್ಚಿನ ವಿಷಯಗಳನ್ನು ಮುಂದಿನ ದಿನಗಳಲ್ಲಿ ಹಂಚಿಕೊಳ್ಳುತ್ತೇವೆ. ಕನ್ನಡದಲ್ಲಿ ಕಮರ್ಷಿಯಲ್ ಹಾಗೂ ಪ್ರಶಸ್ತಿ ಚಿತ್ರಗಳು ಎಂಬ ಎರಡು ವಿಭಾಗಗಳಿದೆ. ಬೇರೆ ಕಡೆ ಆ ರೀತಿ ಇಲ್ಲ. ಒಳ್ಳೆಯ ಕಂಟೆಂಟ್ ಇರುವ ಚಿತ್ರಗಳನ್ನು ಜನರು ನೋಡುತ್ತಾರೆ. ಆಗ ಅದು ಎರಡು ವಿಭಾಗಗಳನ್ನೊಳಗೊಂಡ ಒಂದೇ ಚಿತ್ರವಾಗುತ್ತದೆ. ನಮ್ಮ ಚಿತ್ರ ಕೂಡ ಅದೇ ರೀತಿ ಇರಲಿದೆ ಎಂದು ನಿರ್ಮಾಪಕ ಗುರು ದೇಶಪಾಂಡೆ ತಿಳಿಸಿದರು.Guru Deshpande New Movie

ಇಂದಿನಿಂದ ಹಾಡುಗಳ ಧ್ವನಿಮುದ್ರಣ ಆರಂಭವಾಗಿದೆ. ಚಿತ್ರದಲ್ಲಿ ನಾಲ್ಕು ಹಾಡುಗಳಿದೆ ಎಂದರು ಸಂಗೀತ ನಿರ್ದೇಶಕ ಬಿ.ಜೆ.ಭರತ್. ಗೀತರಚನೆಕಾರ ಪುನೀತ್ ಆರ್ಯ ಹಾಗೂ ವಿತರಕ ವೆಂಕಟ್ ಗೌಡ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.Guru Deshpande New Movie

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…