ಹಯವದನ ನಿರ್ದೇಶನದ ಚೊಚ್ಚಲ ಚಿತ್ರಕ್ಕೆ ‘ಎಲ್ಲೋ ಜೋಗಪ್ಪ ನಿನ್ನರಮನೆ’ ಟೈಟಲ್ – ಕಂಬ್ಳಿಹುಳ ಖ್ಯಾತಿಯ ಅಂಜನ್ ನಾಗೇಂದ್ರ ನಾಯಕ ನಟ

The life story of Sri Vadiraja Swami to come on the silver screen - the movie will be directed by Hayavadhan

ಕಿರುತೆರೆಯ ಯಶಸ್ವಿ ನಿರ್ದೇಶಕ ಹಯವದನ ಚೊಚ್ಚಲ ನಿರ್ದೇಶನದ ಸಿನಿಮಾದ ಫಸ್ಟ್ ಲುಕ್ ಹಾಗೂ ಟೈಟಲ್ ಪೋಸ್ಟರ್ ಬಿಡುಗಡೆಯಾಗಿದೆ. ಶುಭ ಮಂಗಳ, ನಾಗಿಣಿ, ಕಮಲಿ, ಅಗ್ನಿಸಾಕ್ಷಿ, ಮಧುಬಾಲ ಸೇರಿದಂತೆ ಹಲವು ಸೂಪರ್ ಹಿಟ್ ಧಾರಾವಾಹಿಗಳನ್ನು ಕನ್ನಡ ಕಿರುತೆರೆ ಪ್ರೇಕ್ಷಕರಿಗೆ ನೀಡಿ ಗೆದ್ದಿರುವ ಹಯವದನ ‘ಎಲ್ಲೋ ಜೋಗಪ್ಪ ನಿನ್ನರಮನೆ’ ಚಿತ್ರದ ಮೂಲಕ ಸಿನಿ ಜರ್ನಿ ಆರಂಭಿಸಿದ್ದಾರೆ. ಚೊಚ್ಚಲ ಚಿತ್ರದ ಫಸ್ಟ್ ಲುಕ್ ಹಾಗೂ ಟೈಟಲ್ ಪೋಸ್ಟರ್ ಬಿಡುಗಡೆಯಾಗಿ ಗಮನ ಸೆಳೆಯುತ್ತಿದೆ.Hayavadan's directorial debut is titled 'Ello Jogappa Ninnaramane' - Anjan Nagendra of Kamblihula fame is the lead actor.


‘ಎಲ್ಲೋ ಜೋಗಪ್ಪ ನಿನ್ನರಮನೆ’ ಚಿತ್ರದಲ್ಲಿ ನಾಯಕ ನಟನಾಗಿ ಕಂಬ್ಳಿಹುಳ ಸಿನಿಮಾ ಖ್ಯಾತಿಯ ಅಂಜನ್ ನಾಗೇಂದ್ರ ನಟಿಸುತ್ತಿದ್ದಾರೆ. ಈಗಾಗಲೇ ಸ್ಕ್ರಿಪ್ಟ್ ಪೂಜೆ ನಡೆಸಿ ಚಿತ್ರೀಕರಣವನ್ನು ಆರಂಭಿಸಿದೆ ಚಿತ್ರತಂಡ. ಸೋಶಿಯಲ್ ಡ್ರಾಮಾ ಸಬ್ಜೆಕ್ಟ್ ಒಳಗೊಂಡ ಜರ್ನಿ ಸಿನಿಮಾವಿದು. ಅಪ್ಪ ಮಗನ ಸೆಂಟಿಮೆಂಟ್ ಚಿತ್ರದ ಮೈನ್ ಹೈಲೈಟ್. ಅಪ್ಪನ ಮಾತಿಗೆ ಮುನಿಸಿಕೊಂಡು ಮನೆ ಬಿಟ್ಟು ಹೋಗುವ ಹುಡುಗನ ಕಥೆ ಚಿತ್ರದಲ್ಲಿದೆ. ಲವ್ ಟ್ರ್ಯಾಕ್, ಕಾಮಿಡಿ, ಭಾವನಾತ್ಮಕ ಜರ್ನಿ ಒಳಗೊಂಡ ಕಥಾಹಂದರ ಚಿತ್ರದಲ್ಲಿದೆ.Hayavadan's directorial debut is titled 'Ello Jogappa Ninnaramane' - Anjan Nagendra of Kamblihula fame is the lead actor.


ಶರತ್ ಲೋಹಿತಾಶ್ವ, ಸ್ವಾತಿ, ದಾನಪ್ಪ, ಲಕ್ಷ್ಮೀ ನಾಡಗೌಡ, ದಿನೇಶ್ ಮಂಗಳೂರು,ಬಿರಾದರ್ ಸೇರಿದಂತೆ ಹಲವು ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ. ಪೆಂಡೋರಾಸ್ ಬಾಕ್ಸ್ ಪ್ರೊಡಕ್ಷನ್ ಹಾಗೂ ಕೃಷ್ಣಛಾಯ ಚಿತ್ರ ಬ್ಯಾನರ್ ನಡಿ ಪವನ್ ಸಿಮಿಕೇರಿ ಮತ್ತು ಸಿಂಧು ಹಯವದನ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಶಿವ ಪ್ರಸಾದ್ ಸಂಗೀತ ಸಂಯೋಜನೆ, ನಟರಾಜ್ ಮದ್ದಾಲ ಕ್ಯಾಮೆರಾ ವರ್ಕ್, ರವಿಚಂದ್ರನ್ ಸಂಕಲನದಲ್ಲಿ ಸಿನಿಮಾ ಮೂಡಿ ಬರಲಿದೆ. ಪ್ರಮೋದ್ ಮರವಂತೆ ಸಾಹಿತ್ಯ, ಭಜರಂಗಿ ಮೋಹನ್ ನೃತ್ಯ ನಿರ್ದೇಶನ, ನರಸಿಂಹ ಮಾಸ್ಟರ್ ಸಾಹಸ ನಿರ್ದೇಶನ ಚಿತ್ರಕ್ಕಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…