‘ಓ ಮೈ ಲವ್’ಗೆ ಮಿಲಿಯನ್ ಖುಷಿ

ನಿನ್ನ ಡ್ಯಾಡಿ ಹಾಡಿಗೆ ಭರ್ಜರಿ ಪ್ರತಿಕ್ರಿಯೆ

ಸ್ಮೈಲ್ ಶ್ರೀನು ನಿರ್ದೇಶನದ ‘ಓ ಮೈ ಲವ್’ ಚಿತ್ರದ ಕ್ರೇಜ್ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಅಕ್ಷಿತ್ ಶಶಿಕುಮಾರ್ ಹಾಗೂ ಕೀರ್ತಿ ಕಲ್ಕೆರೆ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಸಿನಿಮಾ ಆರಂಭವಾದಾಗಿನಿಂದ ಸದ್ದು ಮಾಡುತ್ತಲೇ ಬಂದಿದೆ. ಈಗಾಗಲೇ ಬಿಡುಗಡೆಯಾಗಿರುವ ಗ್ಲಿಂಪ್ಸ್ ಹಾಗೂ ಹಾಡುಗಳು ಸಖತ್ ಹಿಟ್ ಆಗಿರುವುದು ಚಿತ್ರದ ಗೆಲುವಿನ ಮುನ್ಸೂಚನೆಯಾಗಿದೆ.WhatsApp Image 2022 06 14 at 10.01.30 AM

ರಿಯಲ್ ಸ್ಟಾರ್‌ ಉಪೇಂದ್ರ ಚಿತ್ರದ ಮೊದಲ ಹಾಡನ್ನು ಅನಾವರಣಗೊಳಿಸಿದ್ದರು. ಅದರ ಬೆನ್ನಲ್ಲೇ ರಿಲೀಸಾಗಿದ್ದ ಟೀಸರ್ ವೀಕ್ಷಿಸಿದ ತೆಲುಗು ಚಿತ್ರರಂಗದ ಸಿನಿಮಾಬ್ರಹ್ಮ ಕೆ.ರಾಘವೇಂದ್ರರಾವ್ ‘ಓ ಮೈ ಲವ್’ ಕುರಿತು ಮೆಚ್ಚುಗೆಯ ಮಾತನಾಡುವುದರ ಜತೆಗೆ ನಿರ್ದೇಶಕ ಸ್ಮೈಲ್ ಶ್ರೀನು ಮೇಕಿಂಗ್ ಹಾಗೂ ಶ್ರಮಕ್ಕೆ ಮೆಚ್ಚುಗೆ ಸೂಚಿಸಿ ಬೆನ್ನು ತಟ್ಟಿದ್ದರು. WhatsApp Image 2022 06 14 at 10.01.31 AM 1ಇದಾದ ಬಳಿಕ ಮಾಜಿ ಪೊಲೀಸ್ ಆಯುಕ್ತರಾದ, ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ‘ನಿನ್ನ ಡ್ಯಾಡಿ ನಂಗೆ…’ ಹಾಡು ರಿಲೀಸ್ ಮಾಡಿ ಚಿತ್ರತಂಡವನ್ನು ಹಾರೈಸಿದ್ದರು.WhatsApp Image 2022 06 14 at 10.01.29 AM 1
ಅದೇ ‘ನಿನ್ನ ಡ್ಯಾಡಿ ನಂಗೆ ಯಾವಾಗಿಂದ ಮಾವ ಆಗೋದು…’ ಹಾಡು ಇದೀಗ ಮಿಲಿಯನ್’ಗೂ ಅಧಿಕ ಹಿಟ್ಸ್ ದಾಖಲಿಸಿ ಟ್ರೆಂಡಿಂಗ್’ನಲ್ಲಿದೆ. ಎ2 ಮ್ಯೂಸಿಕ್ ಯೂಟ್ಯೂಬ್ ಚಾನಲ್’ನಲ್ಲಿ ಹಾಡು ಬಿಡುಗಡೆಯಾಗಿದೆ.WhatsApp Image 2022 06 14 at 10.01.29 AM 2

ಸದ್ಯ ಸ್ಯಾಂಡಲ್’ವುಡ್’ನಲ್ಲಿ ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿರುವ ಸಿನಿಮಾಗಳ ಪೈಕಿ ‘ಓ ಮೈ ಲವ್’ ಮುಂಚೂಣಿಯಲ್ಲಿದೆ. ಕೆ.ಜಿ.ಎಫ್ ಹಾಗೂ 777 ಚಾರ್ಲಿ ಸಿನಿಮಾಗಳ ಬಳಿಕ ಚಿತ್ರಮಂದಿರಕ್ಕೆ ಪ್ರೇಕ್ಷಕರನ್ನು ಕರೆತರುವಲ್ಲಿ ಯಶಸ್ವಿಯಾಗಲಿದೆ ಎಂಬ ಭರವಸೆ ಮೂಡಿಸಿದೆ.WhatsApp Image 2022 06 14 at 10.01.30 AM 2 ಕೆ.ಜಿ.ಎಫ್ ಮಾಸ್ ಫೀಲ್ ಕೊಡುವ ಸಿನಿಮಾವಾದರೆ, ಚಾರ್ಲಿ ಕ್ಲಾಸ್ ಪ್ರೇಕ್ಷಕರನ್ನು ಸೆಳೆಯುವಲ್ಲಿ ಶಕ್ತವಾಗಿದೆ. ‘ಓ ಮೈ ಲವ್’ ಎರಡೂ ಬಗೆಯ ಪ್ರೇಕ್ಷಕರನ್ನು ಬರಸೆಳೆದುಕೊಳ್ಳಲಿದೆ ಎಂದು ಈಗಾಗಲೇ ಸಿನಿಪಂಡಿತರು ಲೆಕ್ಕಾಚಾರ ಹಾಕಿದ್ದಾರೆ. ಸದ್ಯದಲ್ಲೇ ಬಿಡುಗಡೆಯಾಗಲಿರುವ ಈ ಸಿನಿಮಾಕ್ಕೆ ಕಥೆ ಬರೆದು ಜಿ.ಸಿ.ಬಿ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಜಿ.ರಾಮಾಂಜಿನಿ ನಿರ್ಮಿಸಿದ್ದಾರೆ. ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ಡೈರೆಕ್ಷನ್ ಮಾಡಿದ್ದಾರೆ ಸ್ಮೈಲ್ ಶ್ರೀನು. ಚಿತ್ರದ ಎಲ್ಲಾ ಹಾಡುಗಳಿಗೆ ಡಾ.ವಿ.ನಾಗೇಂದ್ರ ಪ್ರಸಾದ್ ಸಾಹಿತ್ಯ ರಚಿಸಿದ್ದು ಚರಣ್ ಅರ್ಜುನ್ ಸಂಗೀತ ಸಂಯೋಜಿಸಿದ್ದಾರೆ. ಮುರಳಿ ನೃತ್ಯ ನಿರ್ದೇಶನ ಹಾಡುಗಳಿಗಿದೆ.WhatsApp Image 2022 06 14 at 10.01.31 AM ಎಸ್.ನಾರಾಯಣ್, ಸಾಧುಕೋಕಿಲ, ದೇವಗಿಲ್, ಟೆನ್ನಿಸ್ ಕೃಷ್ಣ, ಪವಿತ್ರಾ ಲೋಕೇಶ್ ಹಾಗೂ ಸಂಗೀತಾ, ದೀಪಿಕಾ ಆರಾಧ್ಯ, ಪೃಥ್ವಿರಾಜ್ , ಆನಂದ್, ಶಿಲ್ಪಾ ರವಿ, ಭಾಗ್ಯಶ್ರೀ, ರಾಮ್ ಕುಮಾರ್ ಸೇರಿದಂತೆ ಬಹುದೊಡ್ಡ ತಾರಾಗಣವೇ ಈ ಚಿತ್ರದಲ್ಲಿದೆ.WhatsApp Image 2022 06 14 at 10.01.32 AM

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…