ತಮಿಳಿಗೆ ಹೊಂಬಾಳೆ ಫಿಲಂಸ್; ಕೀರ್ತಿ ಸುರೇಶ್ ಅಭಿನಯದಲ್ಲಿ ‘ರಘುತಥಾ’ ಚಿತ್ರದ ನಿರ್ಮಾಣ

Hombale Films for Tamil; Production of 'Raghutatha' starring Keerthy Suresh

ಈ ವರ್ಷ ಕನ್ನಡದಿಂದ ಪ್ಯಾನ್ ಇಂಡಿಯಾ ಮಟ್ಟದಲ್ಲಿ ‘ಕೆಜಿಎಫ್ 2’ ಮತ್ತು ‘ಕಾಂತಾರ’ ಎಂಬ ಎರಡು ಬ್ಲಾಕ್ಬಸ್ಟರ್ ಚಿತ್ರಗಳನ್ನು ನೀಡಿರುವ ಹೊಂಬಾಳೆ ಫಿಲಂಸ್ ಸಂಸ್ಥೆಯು ತಮಿಳು ಚಿತ್ರರಂಗಕ್ಕೆ ಕಾಲಿಟ್ಟಿದೆ. ಇದುವರೆಗೂ ಕನ್ನಡ, ತೆಲುಗು ಮತ್ತು ಮಲಯಾಳಂ ಚಿತ್ರರಂಗಗಳಲ್ಲಿ ಚಿತ್ರಗಳನ್ನು ನಿರ್ಮಿಸಿದ್ದ ಹೊಂಬಾಳೆ ಫಿಲಂಸ್ನ ವಿಜಯ್ ಕಿರಗಂದೂರು, ಈಗ ಇದೇ ಮೊದಲ ಬಾರಿಗೆ ತಮಿಳು ಚಿತ್ರವೊಂದನ್ನು ನಿರ್ಮಿಸುತ್ತಿದ್ದಾರೆ.Hombale Films for Tamil; Production of 'Raghutatha' starring Keerthy Suresh
ಹೊಂಬಾಳೆ ಫಿಲಂಸ್ ನಿರ್ಮಿಸುತ್ತಿರುವ ಮೊದಲ ತಮಿಳು ಚಿತ್ರದ ಹೆಸರು ‘ರಘುತಥಾ’. ರಾಷ್ಟ್ರ ಮಟ್ಟದಲ್ಲಿ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿರುವ ಕೀರ್ತಿ ಸುರೇಶ್ ಈ ಚಿತ್ರದಲ್ಲಿ ನಟಿಸುತ್ತಿದ್ದು, ಚಿತ್ರದ ಮೊದಲ ಪೋಸ್ಟರ್ ಇಂದು ಬಿಡುಗಡೆಯಾಗಿದೆ. ಈ ಹಿಂದೆ, ‘ದಿ ಫ್ಯಾಮಿಲಿ ಮ್ಯಾನ್’ ವೆಬ್ ಸೀರೀಸ್ ಜತೆಗೆ ಕೆಲವು ಚಿತ್ರಗಳಿಗೆ ಕಥೆ-ಚಿತ್ರಕಥೆ ರಚಿಸಿದ್ದ ಸುಮನ್ ಕುಮಾರ್ ಈ ಚಿತ್ರವನ್ನು ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿದ್ದಾರೆ.Hombale Films for Tamil; Production of 'Raghutatha' starring Keerthy Suresh
‘ರಘುತಥಾ’ ಒಂದು ಮಹಿಳಾಪ್ರಧಾನ ಚಿತ್ರವಾಗಿದ್ದು, ಒಬ್ಬ ಯುವತಿಯ ಸುತ್ತ ಸುತ್ತುತ್ತದೆ. ಆಕೆ ತನ್ನ ನೆಲ ಮತ್ತು ಜನರ ಗುರುತನ್ನು ರಕ್ಷಿಸುವ ನಿಟ್ಟಿನಲ್ಲಿ ಏನೆಲ್ಲ ಸಾಹಸಗಳನ್ನು ಮಾಡುತ್ತಾಳೆ ಎಂಬುದನ್ನು ಈ ಕಥೆಯಲ್ಲಿ ಹಾಸ್ಯಮಯವಾಗಿ ಚಿತ್ತಿಸಲಾಗಿದೆ.
ಈ ಚಿತ್ರದ ಕುರಿತು ಮಾತನಾಡುವ ಹೊಂಬಾಳೆ ಫಿಲಂಸ್ನ ವಿಜಯ್ ಕಿರಗಂದೂರು, ‘ಇದೊಂದು ಕಾಮಿಡಿ ಡ್ರಾಮಾ ಚಿತ್ರವಾಗಿದ್ದು, ಸಮಾಜದ ವಿರುದ್ದ ಸವಾಲೆಸೆಯುವ ಒಬ್ಬ ಗಟ್ಟಿಗಿತ್ತಿ ಯುವತಿಯ ಸುತ್ತ ಸುತ್ತತ್ತದೆ. ತನ್ನ ಸಿದ್ಧಾಂತಗಳನ್ನು ಎತ್ತಿಹಿಡಿಯುವುದರ ಜತೆಗೆ, ಸಮಾಜದ ವಿರುದ್ಧ ಹೋರಾಡುತ್ತಲೇ, ಆಕೆ ಹೇಗೆ ಎಲ್ಲರಿಗೂ ಸ್ಫೂರ್ತಿಯಾಗುತ್ತಾಳೆ ಎಂಬುದು ಚಿತ್ರದ ಕಥೆ. ಇಂಥದ್ದೊಂದು ಕಥೆ ಮತ್ತು ಪಾತ್ರಕ್ಕೆ ಕೀರ್ತಿ ಸುರೇಶ್ ಅವರು ಅದ್ಭುತವಾದ ಆಯ್ಕೆಯಾಗಿದ್ದು, ಅವರೊಂದಿಗೆ ಕೆಲಸ ಮಾಡಲು ಹೊಂಬಾಳೆ ಫಿಲಂಸ್ ಹೆಮ್ಮೆ ಪಡುತ್ತದೆ. ಇದೊಂದು ಕಾಮಿಡಿ ಚಿತ್ರವಾಗಿದ್ದು, ಜನ ನಗುತ್ತಲೇ ತಮ್ಮ ಆತ್ಮಾವಲೋಕನ ಮಾಡಿಕೊಳ್ಳುವ ವಿಭಿನ್ನ ಪ್ರಯತ್ನ ಇದಾಗಲಿದೆ’ ಎಂದು ಹೇಳಿದ್ದಾರೆ.Hombale Films for Tamil; Production of 'Raghutatha' starring Keerthy Suresh
ಈ ಚಿತ್ರದಲ್ಲಿ ಕೀರ್ತಿ ಸುರೇಶ್ ಜತೆಗೆ ಎಂ.ಎಸ್. ಭಾಸ್ಕರ್, ದೇವದರ್ಶಿನಿ, ರವೀಂದ್ರ ವಿಜಯ್, ಆನಂದ್ಸಾಮಿ, ರಾಜೇಶ್ ಬಾಲಕೃಷ್ಣನ್ ಮುಂತಾದವರು ಪ್ರಮುಖ ಪಾತ್ರಗಳಲ್ಇ ಕಾಣಿಸಿಕೊಳ್ಳುತ್ತಿದ್ದಾರೆ. ಯಾಮಿನಿ ಯಜ್ನಮೂರ್ತಿ ಚಿತ್ರಕ್ಕೆ ಛಾಯಾಗ್ರಹಣ ಮಾಡುತ್ತಿದ್ದು, ಜೈ ಭೀಮ್ ಖ್ಯಾತಿಯ ಸೀನ್ ರೋಲ್ಡನ್ ಸಂಗೀತ ಸಂಯೋಜಿಸುತ್ತಿದ್ದಾರೆ.
‘ರಘುತಥಾ’ ಚಿತ್ರದ ಚಿತ್ರೀಕರಣ ಪ್ರಾರಂಭವಾಗಿದ್ದು, 2023ರ ಬೇಸಿಗೆ ರಜೆಯ ಸಂದರ್ಭದಲ್ಲಿ ಚಿತ್ರವು ಜಗತ್ತಿನಾದ್ಯಂತ ಬಿಡುಗಡೆಯಾಗಲಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…