ಮೂರನೇ ವಾರವೂ ಹಾಸ್ಟೆಲ್ ಹುಡುಗರು ಬೇಕಿದ್ದಾರೆ ಸಿನಿಮಾ ಹೌಸ್ ಫುಲ್ ಪ್ರದರ್ಶನ..ಫ್ರೀ ಟಿಕೆಟ್ ಬಂಪರ್ ಆಫರ್..ಹೊಸಬರಿಗೆ ಅನುಶ್ರೀ ಸಾಥ್

Hostel boys are wanted for the third week, cinema house full show

ಹೌಸ್ ಫುಲ್ ಪ್ರದರ್ಶನ..ಫ್ರೀ ಟಿಕೆಟ್ ಬಂಪರ್ ಆಫರ್..ಹೊಸಬರಿಗೆ ಅನುಶ್ರೀ ಸಾಥ್


ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾಗೆ ಭರಪೂರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಥಿಯೇಟರ್ ಅಂಗಳದಲ್ಲಿ ತುಂಗಾ ಹಾಸ್ಟೆಲ್ ಬಾಯ್ಸ್ ಓಟ ಮುಂದುವರೆದಿದೆ. ಮೂರನೇ ವಾರವೂ ಚಿತ್ರ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಆರಂಭದಿಂದಲೂ ವಿಭಿನ್ನ ಬಗೆಯಲ್ಲಿ ಸಿನಿಮಾ ಪ್ರಮೋಷನ್ ಮಾಡಿ ಗೆದ್ದಿರುವ ಚಿತ್ರತಂಡಕ್ಕೆ ನಟಿ ಕಂ ನಿರೂಪಕಿ ಅನುಶ್ರೀ ಸಾಥ್ ಕೊಟ್ಟಿದ್ದಾರೆ. ಕಳೆದ ಭಾನವಾರ ವೀರೇಶ್ ಚಿತ್ರಮಂದಿರದಲ್ಲಿ ಪ್ರೇಕ್ಷಕರಿಗೆ ಅನುಶ್ರೀ ಟಿಕೆಟ್ ವಿತರಿಸಿದರು. ಅಭಿಮಾನಿಯಾಗಿ ಈ ಸಿನಿಮಾದ ಸಕ್ಸಸ್ ಸೆಲೆಬ್ರೇಟ್ ಮಾಡುವುದಾಗಿ ತಿಳಿಸಿದರು.Hostel boys are wanted for the third week, cinema house full show

ನಿರ್ದೇಶಕ ನಿತಿನ್ ಕೃಷ್ಣಮೂರ್ತಿ ಮಾತನಾಡಿ, ನಮ್ಮ ಸಿನಿಮಾ ಗೆಲ್ಲೋದಿಕ್ಕೆ ಕಾರಣ ರಿಪೀಟ್ ಆಡಿಯನ್ಸ್. ಡೈಲಾಗ್ ಮಿಸ್ ಆಗಿದ್ದಕ್ಕೆ ಸುಮಾರು ಜನ 2-3 ಬಾರಿ ನೋಡಿದ್ದಾರೆ. ನಮಗೆ ಫಸ್ಟ್ 2 ವೀಕ್ ಸೇರಿ 12 ಲಕ್ಷ ಜನ ನೋಡಿದ್ದಾರೆ. ಇನ್ನೂ 20 ಲಕ್ಷ ಜನ ನೋಡ್ತಾರೆ ಎಂಬ ಭರವಸೆ ಇದೆ. ಹೊಸ ಸಿನಿಮಾಗೆ ಅದ್ಭುತ ರೆಸ್ಪಾನ್ಸ್. ಅಪ್ಪು ಸರ್ ಆಶೀರ್ವಾದ, ಇಡೀ ತಂಡದ ಎಫರ್ಟ್ ಗೆ ಸಿನಿಮಾ ಹೌಸ್ ಫುಲ್ ಓಡುತ್ತಿದೆ. ಬುಕ್ ಮೈ ಶೋ ನಲ್ಲಿ 2 ಟಿಕೆಟ್ ತೆಗೆದುಕೊಂಡರೆ 1 ಉಚಿತವಾಗಿ ಕೊಡುತ್ತಿದ್ದೇವೆ ಎಂದರು.Hostel boys are wanted for the third week, cinema house full show

ನಿರ್ಮಾಪಕ ವರುಣ್ ಗೌಡ ಮಾತನಾಡಿ, ನಮ್ಮ ಸಿನಿಮಾ ತುಂಬಾ ಚೆನ್ನಾಗಿ ಓಡುತ್ತಿದೆ. ಈ ಚಿತ್ರ ಶುರು ಮಾಡಲು ಕಾರಣ ಅಪ್ಪು ಸರ್. ಅವರ ಆಶೀರ್ವಾದದಿಂದ ಶುರು ಮಾಡಿದ್ದು, ಅವರ ಆಶೀರ್ವಾದಿಂದ ಚಿತ್ರ ತುಂಬಾ ಚೆನ್ನಾಗಿ ಹೋಗುತ್ತಿದೆ. ಪರವಃ, ಜೀ ಸ್ಟುಡಿಯೋಸ್ ಧನ್ಯವಾದ ಎಂದರು.Hostel boys are wanted for the third week, cinema house full show

ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾಗೆ ಪ್ರೇಕ್ಷಕರಿಂದ ಅದ್ಭುತ ಪ್ರತಿಕ್ರಿಯೆಗೆ ಚಿತ್ರತಂಡ ಖುಷಿಯಾಗಿದೆ. ಇದೇ ಕಾರಣಕ್ಕೆ ಮತ್ತಷ್ಟು ಜನ ಸಿನಿಮಾ ನೋಡಲಿ ಎನ್ನುವ ಕಾರಣ ಫ್ರೀ ಟಿಕೆಟ್ ಆಫರ್ ಕೊಡುತ್ತಿದೆ. ಆಗಸ್ಟ್ 7ರ ಮಧ್ಯಾಹ್ನದಿಂದ ಗುರುವಾರ ಸಂಜೆಯವರೆಗೆ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರದ 2 ಟಿಕೆಟ್ ಖರೀದಿಸಿದರೆ ಒಂದು ಟಿಕೆಟ್ ಫ್ರೀ ಕೊಡಲಾಗುತ್ತಿದೆ. “ಇಡೀ ಥಿಯೇಟರ್ ತುಂಬ್ಕೊಂಡು ಎಲ್ಲರೂ ನಗಾಡ್ಕೊಂಡು ತೇಲಾಡ್ಕೊಂಡು ಖುಷಿಖುಷಿಯಾಗಿ ಇರ್ಬೇಕು ಅಂತ ನಮ್ ಆಸೆ” ಎಂದು ಚಿತ್ರತಂಡ ಹೇಳಿದೆ.Hostel boys are wanted for the third week, cinema house full show

ನಿತಿನ್ ಕೃಷ್ಣಮೂರ್ತಿ ಚೊಚ್ಚಲ ಕನಸ್ಸಿಗೆ ಹೊರ ರಾಜ್ಯ ಹಾಗೂ ವಿದೇಶಗಳಿಂದ ಮೆಚ್ಚುಗೆಯ ಮಹಾಪೂರವೇ ಹರಿದು ಬಂದಿದೆ. ವರುಣ್ ಗೌಡ, ನಿತಿನ್ ಕೃಷ್ಣಮೂರ್ತಿ, ಪ್ರಜ್ವಲ್ ಬಿ.ಪಿ, ಅರವಿಂದ್ ಎಸ್ ಕಶ್ಯಪ್ ಸಿನಿಮಾಗೆ ಬಂಡವಾಳ ಹೂಡಿದ್ದು, ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ತಮ್ಮದೇ ಪರವಃ ಪಿಕ್ಚರ್ಸ್ ನಡಿ ಪ್ರೆಸೆಂಟ್ ಮಾಡಿದ್ದಾರೆ. ರಂಗಭೂಮಿ ಹಿನ್ನೆಲೆ ಹೊಂದಿರುವ ಪ್ರತಿಭಾನ್ವಿತ ತಂಡಕ್ಕೆ ರಿಷಬ್ ಶೆಟ್ಟಿ, ರಮ್ಯಾ, ಪವನ್ ಕುಮಾರ್, ಶೈನ್ ಶೆಟ್ಟಿ ಹಾಗೂ ದಿಗಂತ್ ಕೂಡ ಸಾಥ್ ಕೊಟ್ಟಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ, ಅರವಿಂದ್ ಕಶ್ಯಪ್ ಛಾಯಾಗ್ರಹಣ ಚಿತ್ರಕ್ಕಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…