ವಿಭಿನ್ನ ಕಥೆಯ “ಹುಬ್ಬಳ್ಳಿ ಡಾಬಾ” ನವೆಂಬರ್ 11 ರಂದು ಬಿಡುಗಡೆ.

hubballi dada kannada movie releasing on november 11th

“ನನ್ನವನು”, ” ಕೋಟೆ”, “ದಂಡುಪಾಳ್ಯ” , “ಶಿವ” ಮುಂತಾದ ಚಿತ್ರಗಳ ನಿರ್ದೇಶಕ ಶ್ರೀನಿವಾಸರಾಜು ನಿರ್ದೇಶನದ “ಹುಬ್ಬಳ್ಳಿ ಡಾಬಾ” ಚಿತ್ರ‌ ಇದೇ ನವೆಂಬರ್ 11 ರಂದು ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ.hubballi dada kannada movie releasing on november 11th

ಕೊರೋನ ಎರಡನೇ ಅಲೆ ಸಮಯದಲ್ಲಿ ಆರಂಭವಾದ ಸಿನಿಮಾವಿದು. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ತಯಾರಾಗಿ, ನವೆಂಬರ್ 11 ರಂದು ಬಿಡುಗಡೆಯಾಗುತ್ತಿದೆ. ತೆಲುಗಿನ ನವೀನ್ ಚಂದ್ರ ಈ ಚಿತ್ರದ ನಾಯಕ. ದಿವ್ಯ ಪಿಳ್ಳೈ, ಅನನ್ಯ ಸೇನ್ ಗುಪ್ತ ನಾಯಕಿಯರು. ‌ರವಿಶಂಕರ್, ರಾಜಾ ರವೀಂದ್ರ, ನಾಗಾ ಬಾಬು, ಅಯ್ಯಪ್ಪ ಶರ್ಮ, ಪೂಜಾ ಗಾಂಧಿ, ರವಿಕಾಳೆ, ಮಕರಂದ ದೇಶಪಾಂಡೆ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಚಿತ್ರದ ವಿಶೇಷ ಸಂದರ್ಭದಲ್ಲಿ “ದಂಡುಪಾಳ್ಯ” ಗ್ಯಾಂಗ್ ನವರ ಸನ್ನಿವೇಶಗಳು ಸಹ ಬರುತ್ತದೆ. ಹಾಗಾಗಿ ಆ ಚಿತ್ರದಲ್ಲಿ ಅಭಿನಯಿಸಿದ್ದ ಕಲಾವಿದರು ಈ ಚಿತ್ರದಲ್ಲೂ ಅಭಿನಯಿಸಿದ್ದಾರೆ. ‌ಮೂರು ಹಾಡುಗಳನ್ನು ನಾಗೇಂದ್ರ ಪ್ರಸಾದ್ ಬರೆದಿದ್ದಾರೆ. ಚರಣ್ ಅರ್ಜುನ್ ಸಂಗೀತ ನೀಡಿದ್ದಾರೆ. ವೆಂಕಟ್ ಪ್ರಸಾದ್ ಈ ಚಿತ್ರದ ಛಾಯಾಗ್ರಹಕರು. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಟ್ರೇಲರ್ ಹಾಗೂ ಹಾಡುಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಚಿತ್ರದ ಬಗ್ಗೆ ವಿವರಣೆ ನೀಡಿದ್ದ ನಿರ್ದೇಶಕ ಶ್ರೀನಿವಾಸರಾಜು, ಚಿತ್ರಕ್ಕೆ ಎಲ್ಲರ ಪ್ರೋತ್ಸಾಹವಿರಲಿ ಎಂದರು.hubballi dada kannada movie releasing on november 11th

ನನಗೆ ಶ್ರೀನಿವಾಸರಾಜು “ಕೋಟೆ” ಚಿತ್ರದಲ್ಲಿ ಅವಕಾಶ ನೀಡಿದ್ದರು. “ದಂಡುಪಾಳ್ಯ” ಚಿತ್ರದಲ್ಲೂ ನಟಿಸಿದ್ದೆ. ಈ ಚಿತ್ರದಲ್ಲಿ ನಾನು ಚಲಪತಿ ಹೆಸರಿನ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದೇನೆ. ಈ ಚಿತ್ರದ ಕುರಿತು ಇನ್ನೊಂದು ಹೆಮ್ಮೆಯ ವಿಷಯವೆಂದರೆ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಅವರು ಎಂಭತ್ತರ ದಶಕದಲ್ಲಿ ಸಂಗೀತ ನೀಡಿದ್ದ, ಜನಪ್ರಿಯ ತಮಿಳು ಚಿತ್ರದ ಗೀತೆಯೊಂದರ ಟ್ಯೂನ್ ಬಳಸಿಕೊಳ್ಳಲು ಶ್ರೀನಿವಾಸರಾಜು ಅವರಿಗೆ ಅವಕಾಶ ನೀಡಿದ್ದಾರೆ. ಈ ಹಾಡು ಇಳಯರಾಜ ಅವರ ಅಭಿಮಾನಿಯಾಗಿರುವ ನನ್ನ ಜನಪ್ರಿಯ ಗೀತೆಯೂ ಹೌದು ಎಂದು ನಟ ರವಿಶಂಕರ್ ತಿಳಿಸಿದರು. ಕ್ಲೈಮ್ಯಾಕ್ಸ್ ಸಾಹಸ ಸನ್ನಿವೇಶವನ್ನು ಹನ್ನೆರಡು ದಿನಗಳ ಕಾಲ ಚಿತ್ರಿಸಿರುವುದು ಚಿತ್ರದ ವಿಶೇಷಗಳಲ್ಲೊಂದು ಎಂದರು ರವಿಶಂಕರ್.hubballi dada kannada movie releasing on november 11th

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…