ಕಿರುತೆರೆ ಲೋಕದಲ್ಲಿ ತಮ್ಮದೇ ಅದ ಛಾಪು ಮೂಡಿಸಿರುವ ಕಿರಣ್ ರಾಜ್ ಅಭಿನಯದ ಚಿತ್ರ “ಭರ್ಜರಿ ಗಂಡು”.
ಹುಯ್ಯೋ ಹುಯ್ಯೋ ಮಳೆರಾಯ ಎಂದು ಹಾಡಿದ ರಘು ದೀಕ್ಷಿತ್. Huyyo Huyyo Maleraaya Video Song Bharjari Gandu
ಪ್ರಸಿದ್ಧ್ ನಿರ್ದೇಶನದ ಈ ಚಿತ್ರಕ್ಕಾಗಿ ಡಾ||ವಿ.ನಾಗೇಂದ್ರ ಪ್ರಸಾದ್ ಅವರು ಬರೆದಿರುವ ” ಹುಯ್ಯೋ ಹುಯ್ಯೋ ಮಳೆರಾಯ” ಎಂಬ ಹಾಡು ಇತ್ತೀಚಿಗೆ ಬಿಡುಗಡೆಯಾಗಿದೆ. ಖ್ಯಾತ ಗಾಯಕ ರಘು ದೀಕ್ಷಿತ್ ಈ ಹಾಡನ್ನು ಹಾಡಿದ್ದಾರೆ. ಗುಮ್ಮಿನೇನಿ ವಿಜಯ್ ಸಂಗೀತ ನೀಡಿರುವ ಈ ಹಾಡಿಗೆ ಎಲ್ಲಾ ಕಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.
“ಎಲ್ಲಾ ಕಡೆ ಬಿಸಿಲು ಹೆಚ್ಚಾಗಿದ್ದು, ನೀರಿನ ಬವಣೆ ಹೆಚ್ಚಿದೆ. ಈ ಸಂದರ್ಭದಲ್ಲಿ ಉತ್ತಮ ಮಳೆಯಾಗಿ ನೀರಿನ ಬವಣೆ ದೂರವಾಗಲಿ ಎಂದು ಚಿತ್ರದ ನಾಯಕ ಕಿರಣ್ ರಾಜ್ ಚಾಮರಾಜನಗರದ ಶ್ರೀಚಾಮರಾಜೇಶ್ವರ ದೇವರ ಬಳಿ ವಿಶೇಷವಾಗಿ ಪ್ರಾರ್ಥನೆ ಮಾಡಿದ್ದಾರೆ.
ಟೀಸರ್ ಹಾಗೂ ಹಾಡುಗಳ ಮೂಲಕ ಸದ್ದು ಮಾಡುತ್ತಿರುವ “ಭರ್ಜರಿ ಗಂಡು” ಏಪ್ರಿಲ್ 5 ಕ್ಕೆ ಚಿತ್ರಮಂದಿರಗಳಿಗೆ ಬರಲಿದ್ದಾನೆ.
ಪ್ರಸಿದ್ದ್ ಸಿನಿಮಾಸ್, ಮದನ್ ಗೌಡ ಹಾಗೂ ಅನಿಲ್ ಕುಮಾರ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಗುಮ್ಮಿನೇನಿ ವಿಜಯ್ ಸಂಗೀತ ಸಂಯೋಜನೆ, ಕಿಟ್ಟಿ ಕೌಶಿಕ್ ಛಾಯಾಗ್ರಹಣ ಹಾಗೂ ವೆಂಕಿ ಯುಡಿವಿ ಸಂಕಲನವಿರುವ ಈ ಚಿತ್ರಕ್ಕೆ ಮಳವಳ್ಳಿ ಸಾಯಿಕೃಷ್ಣ ಸಂಭಾಷಣೆ ಬರೆದಿದ್ದಾರೆ.
ಕಿರಣ್ ರಾಜ್ ಅವರಿಗೆ ನಾಯಕಿಯಾಗಿ ಯಶಾ ಶಿವಕುಮಾರ್ ಇದ್ದಾರೆ. ರಮೇಶ್ ಭಟ್ , ರಾಕೇಶ್ ರಾಜ್, ಸುರೇಖ, ವೀಣಾ ಸುಂದರ್, ಜಯಶ್ರೀ, ನಾಗೇಶ್ ರೋಹಿತ್ ನಾಗೇಶ್, ಸೌರಭ್ ಕುಲಕರ್ಣಿ, ಮಡೆನೂರು ಮನು, ಗೋವಿಂದೇ ಗೌಡ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ