ವಿಭಿನ್ನ ಶೀರ್ಷಿಕೆಯ “ಇಡ್ಲಿ ‌ವಡೆ ಸಾಂಬರ್” ಚಿತ್ರಕ್ಕೆ ಚಾಲನೆ.

idli vada sambar kannada movie muhurtham

“ಇಡ್ಲಿ ವಡೆ ಸಾಂಬರ್” ದಕ್ಷಿಣ ಭಾರತೀಯರ ಅಚ್ಚುಮೆಚ್ಚಿನ ತಿನಿಸು. ಈಗ ಇದೇ ಶೀರ್ಷಿಕೆಯಲ್ಲಿ ಚಿತ್ರವೊಂದು ಬರುತ್ತಿದೆ. ಇತ್ತೀಚಿಗೆ “ಇಡ್ಲಿ ವಡೆ ಸಾಂಬರ್” ಚಿತ್ರದ ಮುಹೂರ್ತ ಸಮಾರಂಭ ಮಹಾಲಕ್ಷ್ಮಿಪುರದ ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮೊದಲ ದೃಶ್ಯಕ್ಕೆ ಮಾಜಿ ಶಾಸಕ ನೆ.ಲ.ನರೇಂದ್ರಬಾಬು ಆರಂಭ ಫಲಕ ತೋರಿದರು. ಅನಂತಪುರ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಫ್ಲವರ್ ನಾಗರಾಜ್ ಕ್ಯಾಮೆರಾ ಚಾಲನೆ ಮಾಡಿದರು. ಚಿತ್ರತಂಡದ ಸದಸ್ಯರು ಹಾಗೂ ಅನೇಕ ಗಣ್ಯರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು.idli vada sambar kannada movie muhurtham

ತೆಲುಗಿನ “ವೀಡಾ” ಚಿತ್ರದ ಖ್ಯಾತಿಯ ಸುಧೀರ್ ಈ ಚಿತ್ರದ ನಾಯಕರಾಗಿದ್ದು, ಇವರೊಂದಿಗೆ ರಾಜಾರ್ಜುನ್ ಹಾಗೂ ಗಿಚ್ಚಿ ಗಿಲಿ ಗಿಲಿ ಪ್ರಶಾಂತ್ ಸಹ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಅಪರ್ಣ‌ ಮಲ್ಲಿಕ್ ಹಾಗೂ ಚಂದನ ಜಾನಕಿ ಈ ಚಿತ್ರದ ನಾಯಕಿಯರು. ರಾಜಾ ನಾಯಕ್,‌ ಅಶೋಕ್ ರಾಜ್, ಜಯಪಾಲ್ ತಾರಾಬಳಗದಲ್ಲಿದ್ದಾರೆ.idli vada sambar kannada movie muhurtham

ರಾಜಾರ್ಜುನ್ ಅವರು ನಿರ್ದೇಶಿಸುತ್ತಿರುವ ಈ ಚಿತ್ರದ ಆರಂಭ “ಇಡ್ಲಿ ವಡೆ ಸಾಂಬರ್” ಮೂಲಕ ಆರಂಭವಾಗುತ್ತದೆ. ಗೋವಾ ತನಕ ಜರ್ನಿ ಮುಂದುವರೆಯುತ್ತದೆ. ಎಂ.ಜಿ.ಸ್ಟುಡಿಯೋ ಮತ್ತು ಹೇಮಲತ.ಬಿ ಈ ಚಿತ್ರದ ನಿರ್ಮಾಪಕರು. ಮಹೇಶ್ ಎಕ್ಸಿಕ್ಯುಟಿವ್ ಪ್ರೊಡ್ಯೂಸರ್. ಧನ್ಪಾಲ್ ಛಾಯಾಗ್ರಹಣ, ಆಲೆನ್ ಕ್ಲಾರೆನ್ಸ್ ಕ್ರಾಸ್ತಾ ಸಂಗೀತ ನಿರ್ದೇಶನ ಹಾಗೂ ಅರವಿಂದ್ ರಾಜ್ ಮತ್ತು ಶ್ರೀಜವಳಿ ಅವರ ಸಂಕಲನ ಈ ಚಿತ್ರಕ್ಕಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…