ನಿರ್ದೇಶನಕ್ಕಿಳಿದ ಇಳಯದಳಪತಿ ವಿಜಯ್ ಪುತ್ರ.. ಜೇಸನ್ ಸಂಜಯ್ ವಿಜಯ್ ಚೊಚ್ಚಲ ಸಿನಿಮಾಗೆ ಲೈಕಾ ಬಂಡವಾಳ

Ilayadalpati Vijay's son who became a director.. Jason Sanjay Vijay's debut film is funded by Lyca.

ದಕ್ಷಿಣ ಭಾರತದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಲೈಕಾ ಕನ್ನಡಕ್ಕೂ ಪದಾರ್ಪಣೆ ಮಾಡಿದೆ. ನಿಖಿಲ್ ಕುಮಾರಸ್ವಾಮಿ ಹೊಸ ಸಿನಿಮಾವನ್ನು ನಿರ್ಮಿಸ್ತಿರುವ ಈ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಇದೀಗ ಮತ್ತೊಂದು ಮೆಗಾ ಅನೌನ್ಸ್ ಮೆಂಟ್ ಮಾಡಿದೆ. ತಮಿಳು ಚಿತ್ರರಂಗದ ಖ್ಯಾತ ನಟ ಇಳಯದಳಪತಿ ವಿಜಯ್ ಸುಪುತ್ರ ನಿರ್ದೇಶನದ ಚೊಚ್ಚಲ ಸಿನಿಮಾಗೆ ಲೈಕಾ ಹಣ ಹಾಕುತ್ತಿದೆ. ಸ್ಟಾರ್ ಸಿನಿಮಾ ಮೇಕರ್ಸ್ ಜೊತೆಗೆ ಯುವ ಪ್ರತಿಭೆಗಳಿಗೂ ವೇದಿಕೆ ಕಲ್ಪಿಸುತ್ತಿರುವ ಲೈಕಾ ಸೃರ್ಷಿಕರ್ತ ಸುಭಾಷ್ ಕರಣ್ ಈಗ ವಿಜಯ್ ಪುತ್ರ ಜೇಸನ್ ಸಂಜಯ್ ವಿಜಯ್ ಗೂ ಹೊಸ ಹೆಜ್ಜೆಗೆ ಸಾಥ್ ಕೊಟ್ಟಿದ್ದಾರೆ.Ilayadalpati Vijay's son who became a director.. Jason Sanjay Vijay's debut film is funded by Lyca.

ಜೇಸನ್ ಸಂಜಯ್ ವಿಜಯ್ ಜೊತೆ ಕೈ ಜೋಡಿಸಿರುವ ಸುಭಾಸ್ ಕರಣ್ ಮಾತನಾಡಿ, ಲೈಕಾ ಪ್ರೊಡಕ್ಷನ್ ಹೌಸ್ ಸದಾ ಯುವ ಪ್ರತಿಭೆಗಳಿಗೆ ವೇದಿಕೆ ನಿರ್ಮಾಣ ಮಾಡಿಕೊಡ್ತಿದೆ. ನಮ್ಮ ಮುಂದಿನ ಪ್ರಾಜೆಕ್ಟ್ ಜೇಸನ್ ಸಂಜಯ್ ವಿಜಯ್ ಅನ್ನೋದನ್ನು ಘೋಷಿಸಲು ಖುಷಿಯಾಗುತ್ತಿದೆ. ಜೇಸನ್ ಲಂಡನ್‌ನಲ್ಲಿ ಬಿಎ ಚಿತ್ರಕಥೆಯಲ್ಲಿ ಪರಿಪೂರ್ಣ ಶೈಕ್ಷಣಿಕ ಹಿನ್ನೆಲೆಯನ್ನು ಹೊಂದಿದ್ದಾರೆ ನಂತರ ಟೊರೊಂಟೊ ಫಿಲ್ಮ್ ಸ್ಕೂಲ್‌ನಲ್ಲಿ ಫಿಲ್ಮ್ ಪ್ರೊಡಕ್ಷನ್ ಡಿಪ್ಲೊಮಾವನ್ನು ಹೊಂದಿದ್ದಾರೆ. ಅವರು ಸ್ಕ್ರಿಪ್ಟ್ ಅನ್ನು ವಿವರಿಸಿದಾಗ, ಅದು ನಮಗೆ ಸಿನಿಮೀಯ ಅನುಭವವನ್ನು ನೀಡಿದ್ದರಿಂದ ನಾವು ಚಿತ್ರ ನಿರ್ಮಾಣ ಮಾಡಲು ಮುಂದೆ ಬಂದೆವು. ಅವರು ಚಿತ್ರಕಥೆ ಮತ್ತು ನಿರ್ದೇಶನದಲ್ಲಿ ಪರಿಣತಿ ಹೊಂದಿದ್ದಾರೆ. ಜೇಸನ್ ಸಂಜಯ್ ವಿಜಯ್ ಅವರೊಂದಿಗೆ ಕೆಲಸ ಮಾಡುವ ಅದ್ಭುತ ಅನುಭವಕ್ಕಾಗಿ ನಾವು ಎದುರು ನೋಡುತ್ತಿದ್ದೇವೆ. ಉದಯೋನ್ಮುಖ ತಾರೆಗಳು ಚಿತ್ರದಲ್ಲಿ ನಟಿಸಲಿದ್ದಾರೆ ಎಂದರು.Ilayadalpati Vijay's son who became a director.. Jason Sanjay Vijay's debut film is funded by Lyca.


ನಿರ್ದೇಶಕ ಜೇಸನ್ ಸಂಜಯ್ ವಿಜಯ್ ಮಾತನಾಡಿ, “ಲೈಕಾ ಪ್ರೊಡಕ್ಷನ್ಸ್‌ನಂತಹ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಡಿ ನನ್ನ ಮೊದಲ ಚಿತ್ರವನ್ನು ನಿರ್ದೇಶಿಸುವ ಅವಕಾಶ ಸಿಕ್ಕಿರುವುದು ಗೌರವದ ಸಂಗತಿಯಾಗಿದೆ. ಇದು ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಕೇಂದ್ರವಾಗಿದೆ. ಈ ಅವಕಾಶಕ್ಕಾಗಿ ನಾನು ಸುಭಾಸ್ಕರನ್ ಸರ್ ಅವರಿಗೆ ಧನ್ಯವಾದ ಹೇಳುತ್ತೇನೆ. ನಾನು ನಿರ್ದೇಶಕನಾಗುವ ನನ್ನ ಕನಸುಗಳನ್ನು ಈಡೇರಿಸಲು ಉತ್ತಮ ಬೆಂಬಲವನ್ನು ನೀಡಿದ ತಮಿಳು ಕುಮಾರನ್ ಅವರಿಗೆ ಧನ್ಯವಾದ. ನಾನು ಈ ಅವಕಾಶವನ್ನು ಬಳಸಿಕೊಳ್ಳುತ್ತೇನೆ ಎಂದರು.Ilayadalpati Vijay's son who became a director.. Jason Sanjay Vijay's debut film is funded by Lyca.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…