ಪಂಚಭಾಷೆಗಳಲ್ಲಿ ಬಿಡುಗಡೆಯಾಯಿತು “ಇನಾಮ್ದಾರ್” ಚಿತ್ರದ ಟ್ರೇಲರ್.

Inamdaar trailer released

ನಿರಂಜನ್ ಶೆಟ್ಟಿ ತಲ್ಲೂರು ನಿರ್ಮಾಣದ, ಸಂದೇಶ್ ಶೆಟ್ಟಿ ಆಜ್ರಿ ನಿರ್ದೇಶನದ “ಇನಾಮ್ದಾರ್ ” ಚಿತ್ರದ ಟ್ರೇಲರ್  “Inamdaar” trailer released ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಯಿತು. ನಿರಂಜನ್ ಶೆಟ್ಟಿ, ಪ್ರಮೋದ್ ಶೆಟ್ಟಿ, ಉದ್ಯಮಿ ಕರುಣಾಕರ್ ರೆಡ್ಡಿ, ಎಂ.ಕೆ.ಮಠ ಮುಂತಾದ ಗಣ್ಯರು ಟ್ರೇಲರ್ ಬಿಡುಗಡೆ ಮಾಡಿ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಹೆಚ್ಚಿನ ಮಾಹಿತಿ ನೀಡಿದರು.Inamdaar trailer released 1

ಇದು ಉತ್ತರ ಕರ್ನಾಟಕ ಮೂಲದ ಶಿವಾಜಿ ಮಹಾರಾಜರನ್ನು ಆರಾಧಿಸುವ “ಇನಾಮ್ದಾರ್” ಕುಟುಂಬ ಹಾಗೂ ದಕ್ಷಿಣದ ಕರಾವಳಿ ಭಾಗದ ಕಾಡಿನಲ್ಲಿ ವಾಸಿಸುವ ಹಾಗೂ ಶಿವನ ಆರಾಧಕರಾದ ಕಾಡು ಜನರ ನಡುವೆ ನಡೆಯುವ ವರ್ಣ‌ಸಂಘರ್ಷದ ಕಥೆ. “ಇನಾಮ್ದಾರ್” ಚಿತ್ರಕ್ಕೆ “ಕಪ್ಪು ಸುಂದರಿಯ ಸುತ್ತ” ಎಂಬ ಅಡಿಬರಹವಿದೆ. ಬೆಳಗಾವಿ, ಕುಂದಾಪುರ, ಚಾಮರಾಜನಗರ ಮುಂತಾದ ಕಡೆ ಚಿತ್ರೀಕರಣ ನಡೆದಿದೆ.‌ ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಟೀಸರ್ ಹಾಗೂ ಹಾಡುಗಳು ಜನರ ಮನ ಗೆದ್ದಿದೆ. ಅಕ್ಟೋಬರ್ 27 ರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ ಎಂದರು ನಿರ್ದೇಶಕ ಸಂದೇಶ್ ಶೆಟ್ಟಿ ಆಜ್ರಿ.Inamdaar trailer released 1

ಟ್ರೇಲರ್ ನೋಡಿ ಚಿತ್ರದ ಮೇಲಿನ ನಿರೀಕ್ಷೆ ಮತ್ತಷ್ಟು ಹೆಚ್ಚಿದೆ ಎಂದು ಮಾತು ಆರಂಭಿಸಿದ ನಟ ಪ್ರಮೋದ್ ಶೆಟ್ಟಿ, ಈ ಚಿತ್ರದಲ್ಲಿ ನನ್ನದು ಕಾಳಿಂಗ ಎಂಬ ಕಾಡಿನ ನಾಯಕನ ಪಾತ್ರ. ತುಂಡು ಉಡುಗೆ, ಮೈ ಪೂರ್ತಿ ಕಪ್ಪು ಬಣ್ಣವಿರುತ್ತದೆ. ಸದ್ಯದಲ್ಲೇ “ಇನಾಮ್ದಾರ್” ಚಿತ್ರ ಬಿಡುಗಡೆಯಾಗುತ್ತಿದೆ ನೋಡಿ ಹಾರೈಸಿ ಎಂದರು.

ನಮ್ಮ ಗುಣಗಳ ನೆರಳೇ ನಮ್ಮ ಲೋಕಗಳು

ನಮ್ಮ ಚಿತ್ರ ಆರಂಭವಾದಾಗ ಬೇರೆ ನಿರ್ಮಾಪಕರಿದ್ದರು. ಕಾರಣಾಂತರದಿಂದ ಅವರು ಈ ಚಿತ್ರದಿಂದ ದೂರ ಸರಿದರು. ಆಗ ನಿರಂಜನ್ ಶೆಟ್ಟಿ ತಲ್ಲೂರು ಅವರು ಮುಂದೆ ಬಂದು ಈ ಚಿತ್ರವನ್ನು ಪೂರ್ಣಗೊಳಿಸಿದ್ದಾರೆ. ಅವರಿಗೆ ಧನ್ಯವಾದ. ನಾನು ಈ ಚಿತ್ರದಲ್ಲಿ “ಇನಾಮ್ದಾರ್” ಕುಟುಂಬದ ಮಗನಾಗಿ ಕಾಣಿಸಿಕೊಂಡಿದ್ದೇನೆ ಎಂದು ನಾಯಕ ರಂಜನ್ ಛತ್ರಪತಿ ತಿಳಿಸಿದರು.Inamdaar trailer released 1

ನಾನು ಉದ್ಯಮಿ. ಸಿನಿಮಾ ರಂಗ ಹೊಸತು. ಇಡೀ ಚಿತ್ರತಂಡದ ಸಹಕಾರದಿಂದ “ಇನಾಮ್ದಾರ್” ಚಿತ್ರ ಚೆನ್ನಾಗಿ ಮೂಡಿಬಂದಿದೆ ಎನ್ನುತ್ತಾರೆ ನಿರ್ಮಾಪಕ ನಿರಂಜನ್ ಶೆಟ್ಟಿ ತಲ್ಲೂರು.

ಲೋಕದಲ್ಲಿ ಯಾವ ಮಾನವನೂ ಪೂರ್ಣ ಸುಖಿಯೂ ಅಲ್ಲ.

ಚಿತ್ರದಲ್ಲಿ ಬರುವ ಕಪ್ಪು ಸುಂದರಿ ನಾನೇ ಎಂದರು ನಾಯಕಿ ಚಿರಶ್ರೀ ಅಂಚಿನ್.
ಎಂ.ಕೆ.ಮಠ, ರಘು ಪಾಂಡೇಶ್ವರ, ಚಿತ್ರಕಲಾ ಮುಂತಾದ ಕಲಾವಿದರು ತಮ್ಮ ಪಾತ್ರದ ಬಗ್ಗೆ ಹೇಳಿದರು. ಛಾಯಾಗ್ರಾಹಕ ಮುರಳಿ, ಸಂಕಲನಕಾರ ಶಿವರಾಜ್ ಮೇಹು ಸೇರಿದಂತೆ ಅನೇಕ ತಂತ್ರಜ್ಞರು ತಮ್ಮ ಕಾರ್ಯದ ಕುರಿತು ಮಾಹಿತಿ ನೀಡಿದರು. ರಾಕಿ ಸೋನು ಹಾಗೂ ನಕುಲ್ ಅಭಯಂಕರ್ ಈ ಚಿತ್ರದ ಸಂಗೀತ ನಿರ್ದೇಶಕರು.Inamdaar trailer released 1

ಚಿತ್ರದ ಮುಖ್ಯ ಭೂಮಿಕೆಯಲ್ಲಿ ನಾಯಕನಾಗಿ ರಂಜನ್ ಛತ್ರಪತಿ, ನಾಯಕಿಯರಾಗಿ ಚಿರಶ್ರೀ ಅಂಚನ್, ಎಸ್ತರ್ ನೊರೋನ್ಹಾ, ಸಂದೇಶ್ ಶೆಟ್ಟಿ ಆಜ್ರಿ, ರಂಗಭೂಮಿ ಕಲಾವಿದ ಹಿನ್ನಲೆಯ ಪ್ರಮೋದ್ ಶೆಟ್ಟಿ, ಎಂ.ಕೆ.ಮಠ, ಥ್ರಿಲ್ಲರ್‌ಮಂಜು, ಶರತ್ ಲೋಹಿತಾಶ್ವ, ಅವಿನಾಶ್, ರಘು ಪಾಂಡೇಶ್ವರ್, ಕರಣ್ ಕುಂದರ್, ಯಶ್ ಆಚಾರ್ಯ, ನಾಗರಾಜ ಬೈಂದೂರು, ಪ್ರಶಾಂತ್ ಸಿದ್ಧಿ, ಸಂಜು ಬಸಯ್ಯ, ಮಾಹಬಲೇಶ್ವರ ಕ್ಯಾದಿಕೆ, ಲಕ್ಷ್ಮೀ ಪ್ರಿಯ, ಚಿತ್ರಕಲಾ ರಾಜೇಶ್, ರಕ್ಷಿತ್ ರಾಮಚಂದ್ರ ಶೆಟ್ಟಿ ಮತ್ತಿತರರು ನಟಿಸಿದ್ದಾರೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…