ಒಂದೇ ಚಿತ್ರದಲ್ಲಿ ಆರು ಸಾಹಸ ನಿರ್ದೇಶಕರು .’ಜವಾನ್’ ಚಿತ್ರಕ್ಕೆ ಅಂತಾರಾಷ್ಟ್ರೀಯ ಸಾಹಸ ನಿರ್ದೇಶಕರಿಂದ ಸಾಹಸ ಸಂಯೋಜನೆ

International for the film 'Jawaan' Action Composition by Action Director

ಶಾರುಖ್ ಖಾನ್ ಅಭಿನಯದ ‘ಜವಾನ್’ ಚಿತ್ರವು ಸೆ.07ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಈ ಮಧ್ಯೆ, ಜಗತ್ತಿನ ಆರು ಅತ್ಯುತ್ತಮ ಮತ್ತು ಜನಪ್ರಿಯ ನಿರ್ದೇಶಕರು ಸಾಹಸ ಸಂಯೋಜನೆ ಮಾಡಿದ್ದಾರೆ.

ಮೂಲಗಳ ಪ್ರಕಾರ, ಅಂತರರಾಷ್ಟ್ರೀಯ ಮಟ್ಟದ ಸಾಹಸ ನಿರ್ದೇಶಕರಾದ ಸ್ಪೈರೋ ರಾಝಾಟೋಸ್, ಯಾನಿಕ್ ಬೆನ್, ಕ್ರೇಗ್ ಮೆಕ್ರೆ, ಕೆಚಾ ಕೆಂಪಾಕ್ಡಿ, ಸುನೀಲ್ ರಾಡ್ರಿಗ್ಸ್ ಮತ್ತು ಅನಲ್ ಅರಸ್ ಅವರು ‘ಜವಾನ್’ ಚಿತ್ರಕ್ಕೆ ಸಾಹಸ ಸಂಯೋಜನೆ ಮಾಡಿದ್ದಾರೆ. ಈ ಚಿತ್ರದಲ್ಲಿ ಫೈಟ್, ಚೇಸ್, ಪಾರ್ಕರ್ ಸೇರಿದಂತೆ ವಿಭಿನ್ನ ರೀತಿಯ ಸಾಹಸ ದೃಶ್ಯಗಳಿದ್ದು, ಆ ಪ್ರಕಾರದಲ್ಲಿ ಪರಿಣಿತಿ ಹೊಂದಿರುವ ಒಬ್ಬೊಬ್ಬ ಸಾಹಸ ನಿರ್ದೇಶಕರು ಈ ಚಿತ್ರಕ್ಕೆ ಕೆಲಸ ಮಾಡಿರುವುದು ವಿಶೇಷ.International for the film 'Jawaan'  Action Composition by Action Director

ಈ ಸಾಹಸ ನಿರ್ದೇಶಕರು ಬರೀ ಹಾಲಿವುಡ್ ಅಷ್ಟೇ ಅಲ್ಲ, ಹಲವು ಅಂತಾರಾಷ್ಟ್ರೀಯ ಸಿನಿಮಾಗಳಿಗೆ ಕೆಲಸ ಮಾಡಿ ತಮ್ಮ ಛಾಪನ್ನೊತ್ತಿದ್ದಾರೆ. ಒಬ್ಬೊಬ್ಬರು ಒಂದೊಂದು ವಿಭಾಗದಲ್ಲಿ ಪರಿಣಿತಿ ಹೊಂದಿದ್ದಾರೆ. ಜಗತ್ತಿನ ಜನಪ್ರಿಯ ಆಕ್ಷನ್ ಚಿತ್ರಗಳಲ್ಲಿ ಮೈ ಜುಂ ಎನಿಸುವಂತಹ ಸಾಹಸ ದೃಶ್ಯಗಳನ್ನು ಸಂಯೋಜಿಸಿದ್ದಾರೆ.The preview of 'Jawaan' will be released on July 10

ಈ ಪೈಕಿ ಸ್ಪೈರೋ ರಾಝಾಟೋಸ್, ‘ಫಾಸ್ಟ್ ಅಂಡ್ ಫ್ಯೂರಿಯಸ್’, ‘ಕ್ಯಾಪ್ಟೇನ್ ಅಮೇರಿಕಾ’ ಮುಂತಾದ ಚಿತ್ರಗಳಿಗೆ ಕೆಲಸ ಮಾಡಿದ್ದರು. ಈ ಹಿಂದೆ, ಶಾರುಖ್ ಅಭಿನಯದ ‘ರಾ ಒನ್’ ಚಿತ್ರಕ್ಕೂ ಅವರು ಸಾಹಸ ದೃಶ್ಯಗಳನ್ನು ಸಂಯೋಜಿಸಿದ್ದರು. ಯಾನಿಕ್ ಬೆನ್ ಅವರು ಪಾರ್ಕರ್ ದೃಶ್ಯಗಳನ್ನು ಸೆರೆಹಿಡಿಯುವುದರಲ್ಲಿ ಜನಪ್ರಿಯರು. ಇನ್ನು, ಸುನೀಲ್ ರಾಡ್ರಿಗ್ಸ್, ಅನಲ್ ಅರಸು ಮುಂತಾದವರು ಭಾರತದ ಬೇರೆಬೇರೆ ಭಾಷೆಯ ಚಿತ್ರಗಳಿಗೆ ಸಾಹಸ ಸಂಯೋಜನೆ ಮಾಡುವ ಮೂಲಕ ಖ್ಯಾತಿ ಗಳಿಸಿದವರು.Date fixed for Shahrukh Khan's 'Jawaan' entry

ಈ ಸಾಹಸ ದೃಶ್ಯಗಳನ್ನು ಸಾಕಷ್ಟು ಅಧ್ಯಯನ ನಡೆಸುವುದಷ್ಟೇ ಅಲ್ಲ, ರೋಚಕವಾಗಿ ಸೆರೆಹಿಡಿಯಲಾಗಿದ್ದು, ಒಟ್ಟಾರೆ ಸಾಹಸ ಭಾಗವೇ ಚಿತ್ರವನ್ನು ಇನ್ನೊಂದು ಮಟ್ಟಕ್ಕೆ ಕರೆದೊಯ್ಯಲಿದೆ ಎಂದು ಹೇಳಲಾಗುತ್ತಿದೆ. ಈ ದೃಶ್ಯಗಳು ಕಥೆಗೆ ಪೂರಕವಾಗಿರುವುದಷ್ಟೇ ಅಲ್ಲ, ನೈಜವಾಗಿ ಮೂಡಿಬಂದಿದ್ದು, ಚಿತ್ರದ ಬಗೆಗಿನ ಪ್ರೇಕ್ಷಕರ ಕುತೂಹಲ ಮತ್ತು ನಿರೀಕ್ಷೆಗಳನ್ನು ಇನ್ನಷ್ಟು ಹೆಚ್ಚಾಗಿಸಿದೆ.International for the film 'Jawaan'  Action Composition by Action Director‘ಜವಾನ್’ ಚಿತ್ರವನ್ನು ರೆಡ್ ಚಿಲ್ಲೀಸ್ ಎಂಟರ್ಟೈನ್ಮೆಂಟ್ ನಡಿ ಗೌರಿ ಖಾನ್ ನಿರ್ಮಿಸಿದರೆ, ಗೌರವ್ ವರ್ಮ ಸಹ ನಿರ್ಮಾಪಕರಾಗಿದ್ದಾರೆ. ಅಟ್ಲಿ ನಿರ್ದೇಶಿಸಿರುವ ಈ ಚಿತ್ರವು ಜಗತ್ತಿನಾದ್ಯಂತ ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…