ತುಳುನಾಡ ದೈವ “ಕೊರಗಜ್ಜ” ಕುರಿತಾದ ಚಿತ್ರದಲ್ಲಿ ಅಂತರ ರಾಷ್ಟೀಯ ಖ್ಯಾತಿಯ ನಟ ಕಬೀರ್ ಬೇಡಿ.

Internationally renowned actor Kabir Bedi in the movie about Tulunada “Koragajja”.

ದ್ರತಿ ಕ್ರಿಯೇಷನ್ಸ್ ಮತ್ತು ಸಕ್ಸಸ್ ಫಿಲ್ಮ್ಸ್ ಬ್ಯಾನರ್ ಅಡಿ ತ್ರಿವಿಕ್ರಮ್ ಸಪಲ್ಯ ನಿರ್ಮಿಸುತ್ತಿರುವ, ಸುಧೀರ್ ಅತ್ತಾವರ್ ನಿರ್ದೇಶನದ “ಕರಿ ಹೈದ….ಕರಿ ಅಜ್ಜ …”.ಸಿನೆಮಾದಲ್ಲಿ ಅಂತರರಾಷ್ಟ್ರೀಯ ಖ್ಯಾತಿಯ ಹಾಲಿವುಡ್ ಹಾಗೂ ಬಾಲಿವುಡ್ ನಟ ಕಬೀರ್ ಬೇಡಿ ನಟಿಸಿದ್ದಾರೆ.Internationally renowned actor Kabir Bedi in the movie about Tulunada “Koragajja”.
ಯುರೋಪಿನಾದ್ಯಂತ ಪ್ರಸಿದ್ದಿ ಪಡೆದ ” ಸಂದೀಕನ್” ಟಿವಿ ಸೀರಿಸ್ ನಲ್ಲಿ ನಟಿಸಿರುವ ಕಬೀರ್ ಬೇಡಿ, ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದಾರೆ.
“ಕರಿ ಹೈದ ಕರಿ ಅಜ್ಜ” ಚಿತ್ರದ ತಮ್ಮ ಪಾತ್ರದ ಬಗ್ಗೆ “ಕಬೀರ್ ಬೇಡಿ” ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದಾರೆ.

ಸುಧೀರ್ ಅತ್ತಾವರ್ ನಿರ್ದೇಶಿಸಿರುವ ಈ ಚಿತ್ರದಲ್ಲಿ ನಟಿಸಿದ್ದು ಖುಷಿಯಾಗಿದೆ. “ಕೊರಗಜ್ಜ” ದೈವದ ಕುರಿತಾದ ಈ ಚಿತ್ರದಲ್ಲಿ ರಾಜನ ಪಾತ್ರ ನನ್ನದು. ಶೃತಿ, ಭವ್ಯ, ಭರತ್ ಸೂರ್ಯ ಮುಂತಾದ ಕಲಾವಿದರ ಜೊತೆ ಅಭಿನಯಿಸಿದ್ದ ಅನುಭವವನ್ನು ಹಂಚಿಕೊಂಡ ಕಬೀರ್ ಬೇಡಿ, ಬೆಂಗಳೂರಿನ ನೃತ್ಯ ಗ್ರಾಮಕ್ಕೆ ಬರುತ್ತಿದ್ದುದ್ದನ್ನು ಹಾಗೂ ಗಿರೀಶ್ ಕಾರ್ನಾಡ್ ಅವರ ಜೊತೆಗಿನ ಒಡನಾಟವನ್ನು ನೆನಪಿಸಿಕೊಂಡರು.‌Internationally renowned actor Kabir Bedi in the movie about Tulunada “Koragajja”.

ಈಗಾಗಲೇ ಚಿತ್ರದ ಬಹುತೇಕ ಚಿತ್ರೀಕರಣ ಪೂರ್ಣವಾಗಿದೆ. ಬೆಳ್ತಂಗಡಿ ಆಸುಪಾಸಿನಲ್ಲೇ ಹೆಚ್ಚು ಚಿತ್ರೀಕರಣವಾಗಿದೆ. ನಿರ್ಮಾಪಕ ತ್ರಿವಿಕ್ರಮ ಸಪಲ್ಯ ಅವರ ಕುಟುಂಬದವರಿಗೆ “ಕೊರಗಜ್ಜ”ನ ಕುರಿತಾದ ಚಿತ್ರ ಮಾಡುವ ಹಂಬಲವಿತ್ತು. ಈ ಕಥೆ ಮೆಚ್ಚಿ ಅವರು ನಿರ್ಮಾಕ್ಕೆ ಮುಂದಾದರು. . ಕೊರಗಜ್ಜನ ಜೀವನದ ಬಗ್ಗೆ ಸಾಕಷ್ಟು ಮಾಹಿತಿಗಳನ್ನು ಕಲೆ ಹಾಕಿ, ಕೊರಗಜ್ಜನ ಜನಾಂಗದ ಮಹನೀಯರೊಂದಿಗೆ ಚರ್ಚೆ ಮಾಡಿ 12ನೇ ಶತಮಾನದಲ್ಲಿದ್ದ ಕೊರಗಜ್ಜನ ಬಗ್ಗೆ ಯಾರಿಗೂ ಗೊತ್ತಿರದ ನಿಜ ಬದುಕಿನ ವಿಷಯವನ್ನು ತಿಳಿಸುವ ಪ್ರಯತ್ನ ಈ ಚಿತ್ರದ ಮೂಲಕ ಮಾಡುತ್ತಿದ್ದೇವೆ. ಭರತ್ ಸೂರ್ಯ “ಕೊರಗಜ್ಜ” ನ ಪಾತ್ರದಲ್ಲಿ ಕಾಣಿಸಿಕೊಳುತ್ತಿದ್ದಾರೆ. ಕಬೀರ್ ಬೇಡಿ, ಶೃತಿ, ಭವ್ಯ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ವಿದ್ಯಾಧರ್ ಶೆಟ್ಟಿ ಸಂಕಲನದ ಜೊತೆಗೆ ಇತಿಹಾಸದ ದಾಖಲೆ ಮತ್ತು ಪುರಾವೆಗಳನ್ನು ಕಲೆ ಹಾಕಿದ್ದಾರೆ. ಪವನ್ ವಿ ಕುಮಾರ್ ಮತ್ತು ಗಣೇಶ್ ಕೆಳಮನೆ ಛಾಯಾಗ್ರಹಣ, ಸುಧೀರ್- ಕೃಷ್ಣ ರವಿ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ ಎಂದು ಮಾಹಿತಿ ನೀಡಿದ ನಿರ್ದೇಶಕ ಸುಧೀರ್ ಅತ್ತಾವರ್, ಕಲಾ‌ ನಿರ್ದೇಶನವನ್ನು ತಾವೇ ಮಾಡಿರುವುದಾಗಿ ಹೇಳಿದರು.Internationally renowned actor Kabir Bedi in the movie about Tulunada “Koragajja”.

ನಮ್ಮ ಕುಟುಂಬದವರಿಗೆ “ಕೊರಗಜ್ಜ” ನ ಮೇಲೆ ವಿಶೇಷ ಭಕ್ತಿ. ಹಾಗಾಗಿ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದೇವೆ. ಚಿತ್ರತಂಡದ ಪ್ರೋತ್ಸಾಹದಿಂದ ಚಿತ್ರ ಉತ್ತಮವಾಗಿ ಮೂಡಿ ಬರುತ್ತಿದೆ. ಅಂದುಕೊಂಡಂತೆ ಆದರೆ, ಏಪ್ರಿಲ್ ಅಥವಾ ಮೇ ನಲ್ಲಿ ಚಿತ್ರ ತೆರೆಗೆ ಬರಲಿದೆ ಎಂದರು ನಿರ್ಮಾಪಕ ತ್ರಿವಿಕ್ರಮ ಸಪಲ್ಯ.Internationally renowned actor Kabir Bedi in the movie about Tulunada “Koragajja”.

ಕಬೀರ್ ಬೇಡಿ ಅವರಂತಹ ಮಹಾನ್ ನಟನ ಜೊತೆ ಅಭಿನಯಿಸಿದ್ದು ತುಂಬಾ ಸಂತೋಷವಾಗಿದೆ. ನಾನು ಈ ಚಿತ್ರದಲ್ಲಿ ರಾಣಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಸುಧೀರ್ ಅತ್ತಾವರ್ ಒಳ್ಳೆಯ ಚಿತ್ರ ನಿರ್ದೇಶಿಸುತ್ತಿದ್ದಾರೆ. ನಿಮ್ಮೆಲ್ಲರ ಬೆಂಬಲವಿರಲಿ ಎಂದರು ಹಿರಿಯ ನಟಿ ಭವ್ಯ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…