ನವರಸ ನಾಯಕ ಜಗ್ಗೇಶ್ ಅವರಿಂದ ಬಿಡುಗಡೆಯಾಯಿತು “ಪದವಿಪೂರ್ವ” ಚಿತ್ರದ ಟೀಸರ್.

Jaggesh released the teaser of the film "Padavipurva".

ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ಕುತೂಹಲ ಮೂಡಿಸಿರುವ, ಹರಿಪ್ರಸಾದ್ ಜಯಣ್ಣ ನಿರ್ದೇಶಿಸಿರುವ “ಪದವಿಪೂರ್ವ” ಚಿತ್ರದ ಟೀಸರ್ ಬಿಡುಗಡೆಯಾಗಿದೆ. ನವರಸ ನಾಯಕ ಜಗ್ಗೇಶ್ ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ.Jaggesh released the teaser of the film "Padavipurva".

ನಿರ್ದೇಶಕ ಹರಿಪ್ರಸಾದ್ ನನಗೆ “ವಾಸ್ತು ಪ್ರಕಾರ” ಚಿತ್ರದ ಸಮಯದಿಂದಲೂ ಪರಿಚಯ. ಸೌಮ್ಯ ಸ್ವಭಾವದ ಆತ ಮಹಾನ್ ಬುದ್ದಿವಂತ ಹಾಗೂ ವಿದ್ಯಾವಂತ. ಯೋಗರಾಜ್ ಭಟ್ ಅವರ ಗರಡಿಯಲ್ಲಿ ಬಂದಿರುವ ಈತ ಚಿತ್ರವನ್ನು ಚೆನ್ನಾಗಿ ಮಾಡಿರುತ್ತಾರೆಂಬ ನಂಬಿಕೆ ಇದೆ. ಟೀಸರ್ ಚೆನ್ನಾಗಿದೆ. ಹದಿನಾರರಿಂದ ಹದಿನೆಂಟು ವಯಸ್ಸಿನವರ ಕುರಿತಾದ ಸಿನಿಮಾಗಳು ಬರುವುದು ಬಹಳ ಕಡಿಮೆ. ಈ ಚಿತ್ರ ಆ ವಯಸ್ಸಿನವರಿಗೆ ಸಂಭಂದಿಸಿದ್ದು. ನಾಯಕ ಪೃಥ್ವಿ ಶಾಮನೂರು ಬಹಳ ಲವಲವಿಕೆಯಿಂದ ನಟಿಸಿದ್ದಾನೆ. ಇಡೀ ತಂಡಕ್ಕೆ ಒಳ್ಳೆಯದಾಗಲಿ ಎಂದು ಜಗ್ಗೇಶ್ ಹಾರೈಸಿದರು.Jaggesh released the teaser of the film "Padavipurva".

ಸುಮಾರು ಹತ್ತುವರ್ಷದ ಹಿಂದೆ ಹರಿಪ್ರಸಾದ್ ನನ್ನ ಬಳಿ ಸಹಾಯಕ ನಿರ್ದೇಶಕನಾಗಿ ಕೆಲಸ ಶುರು ಮಾಡಿದರು. ನಂತರ “ಪಂಚತಂತ್ರ” ಚಿತ್ರದ ನಿರ್ಮಾಪಕರಾದರು. ಈಗ ಈ ಚಿತ್ರ ನಿರ್ದೇಶನ ಮಾಡಿದ್ದಾರೆ. ಹರಿ ತುಂಬಾ ಬುದ್ದಿವಂತ. ನಿರ್ದೇಶನದ ಬಗ್ಗೆ ವಿದೇಶದಲ್ಲಿ ಕಲಿತು ಬಂದಿರುವಾತ. ಹರಿ ಈ ಚಿತ್ರವನ್ನು ಎಲ್ಲರಿಗೂ ಹಿಡಿಸುವ ಹಾಗೆ ಮಾಡಿರುತ್ತಾರೆಂಬ ಭರವಸೆಯಿದೆ. ಈ ಚಿತ್ರ ಇನ್ನೂ ಬಿಡುಗಡೆಯೇ ಆಗಿಲ್ಲ ಆಗಲೇ ನಾಯಕ ಪೃಥ್ವಿ ಶಾಮನೂರು, ನನ್ನ ನಿರ್ದೇಶನದ “ಗರಡಿ” ಚಿತ್ರದಲ್ಲೂ ಅಭಿನಯಿಸಿದ್ದಾನೆ. ಚಿತ್ರದಲ್ಲಿ ನಟಿಸಿರುವ ಅಂಜಲಿ, ಯಶಾ ಶಿವಕುಮಾರ್ ಎಲ್ಲರ ಅಭಿನಯ ಚೆನ್ನಾಗಿದೆ. ಎಲ್ಲರಿಗೂ ಶುಭವಾಗಲಿ ಎಂದರು ಚಿತ್ರದ ನಿರ್ಮಾಪಕರಲೊಬ್ಬರಾದ ಯೋಗರಾಜ್ ಭಟ್.Jaggesh released the teaser of the film "Padavipurva".

ಇದು ಮೊಬೈಲ್‌ ಬರುವುದಕ್ಕೂ ಪೂರ್ವದಲ್ಲಿ ಅಂದರೆ 96-97 ನೇ ಇಸವಿಯಲ್ಲಿ ನಡೆಯುವ ಕಥೆ. ಆಗ ಮೈದಾನಗಳು ಜಾಸ್ತಿ. ಆಟಗಾರರು ಕಡಿಮೆ. ಈಗ ಆಟಗಾರರು ಜಾಸ್ತಿ . ಮೈದಾನಗಳು ಕಡಿಮೆ. ಆ ಕಾಲಘಟ್ಟದಲ್ಲಿ ನಾನು ಕಂಡ ಕೆಲವು ಘಟನೆಗಳನ್ನಾಧರಿಸಿ “ಪದವಿಪೂರ್ವ” ಚಿತ್ರ ಮಾಡಿದ್ದೇನೆ. ಡಿಸೆಂಬರ್ 30ರಂದು ತೆರೆಗೆ ಬರುತ್ತಿದೆ. ಟೀಸರ್ ಬಿಡುಗಡೆ ಮಾಡಿಕೊಟ್ಟ ಜಗ್ಗೇಶ್ ಸರ್ ಗೆ, ನಿರ್ಮಾಪಕರಾದ ಯೋಗರಾಜ್ ಭಟ್, ರವಿ ಶಾಮನೂರು ಅವರಿಗೆ ಹಾಗೂ ನನ್ನ ಇಡೀ ತಂಡಕ್ಕೆ ಧನ್ಯವಾದ ಎಂದರು ನಿರ್ದೇಶಕ ಹರಿಪ್ರಸಾದ್ ಜಯಣ್ಣ.padavi poorva releaseing on dec 30

ನಿರ್ಮಾಪಕ ರವಿ ಶಾಮನೂರು, ನಾಯಕ ಪೃಥ್ವಿ ಶಾಮನೂರು, ನಾಯಕಿ ಅಂಜಲಿ ಅನೀಶ್, ಮುಖ್ಯ ಪಾತ್ರಧಾರಿ ಯಶಾ ಶಿವಕುಮಾರ್, ನಟ ನಟರಾಜ್, ಛಾಯಾಗ್ರಾಹಕ ಸಂತೋಷ್ ರೈ ಪಾತಾಜೆ ಮುಂತಾದವರು “ಪದವಿಪೂರ್ವ” ಚಿತ್ರದ ಬಗ್ಗೆ ತಮ್ಮ ಅನುಭವ ಹಂಚಿಕೊಂಡರು.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…