ಜನಮೆಚ್ಚುಗೆ ಪಡೆಯುತ್ತಿದೆ “ಜಲಪಾತ” ಟ್ರೇಲರ್.

jalapatha kannada movie 4

ಪರಿಸರದ ಕುರಿತು ಜಾಗೃತಿ ಮೂಡಿಸುವ ಈ ಚಿತ್ರ ಅಕ್ಟೋಬರ್ 6ರಂದು ತೆರೆಗೆ .

ಮಲೆನಾಡ ಸುಂದರ ಪರಿಸರದ ಹಾಗೂ ಅಲ್ಲಿನ ಸಮಸ್ಯೆಗಳನ್ನು ಪರಿಚಯಿಸುವ “ಜಲಪಾತ” (jalapatha kannada movie) ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಖ್ಯಾತ ಲೇಖಕ ಹಾಗೂ ಪತ್ರಕರ್ತ ಜೋಗಿ, ನಟ ಪೃಥ್ವಿ ಶಾಮನೂರು “ಜಲಪಾತ” ಚಿತ್ರದ ಟ್ರೇಲರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.jalapatha kannada movie

ನಾನು ಬಹುಕೋಟಿ ಸಿನಿಮಾಗಳ ಕುರಿತು ಮಾತಾಡಲಾರೆ. ನನಗೆ ಸಣ್ಣ ಸಿನಿಮಾ ಮಾಡುವವರೆಂದರೆ ಅಕ್ಕರೆ. ಯಾಕೋ ನಿಜವಾದ ಸಿನಿಮಾ ಪ್ರೀತಿ ಕಂಟೆಂಟ್ ಸಿನಿಮಾ ಮಾಡುವವರಲ್ಲಿ ಹೆಚ್ಚು ಆಪ್ತವಾಗಿರುತ್ತದೆ. ಅಂತಹ ಪರಿಸರದ ಕುರಿತು ಜಾಗೃತಿ ಮೂಡಿಸುವ “ಜಲಪಾತ” ಚಿತ್ರವನ್ನು ರಮೇಶ್ ಬೇಗಾರ್ ನಿರ್ದೇಶಿಸಿದ್ದಾರೆ. ರವೀಂದ್ರ ತುಂಬರಮನೆ ನಿರ್ಮಿಸಿದ್ದಾರೆ. ಇಂತಹ ಒಳ್ಳೆಯ ಕಂಟೆಂಟ್ ಇರುವ ಸಾಕಷ್ಟು ಚಿತ್ರಗಳು ಇವರಿಂದ ಇನ್ನಷ್ಟು ಬರಲಿ ಎಂದು ಪ್ರಖ್ಯಾತ ಸಾಹಿತಿ – ಪತ್ರಕರ್ತ ಜೋಗಿ ತಿಳಿಸಿದರು.jalapatha kannada movie

ನಮ್ಮ ಚಿತ್ರದ ಟ್ರೇಲರ್ ಇಂದು ಬಿಡುಗಡೆಯಾಗಿದೆ. ಟ್ರೇಲರ್ ಗೆ ಜನಮೆಚ್ಚುಗೆ ಬರುತ್ತಿದೆ. ಚಿತ್ರ ಅಕ್ಟೋಬರ್ 6 ರಂದು ತೆರೆಗೆ ಬರಲಿದೆ. ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ಜೋಗಿ ಹಾಗೂ ಪೃಥ್ವಿ ಶಾಮನೂರು ಅವರಿಗೆ ಧನ್ಯವಾದ ಎಂದರು ನಿರ್ದೇಶಕ ರಮೇಶ್ ಬೇಗಾರ್.

ನಾನು ಪರಿಸರ ತಜ್ಞ ಎಲ್ಲಪ್ಪ ರೆಡ್ಡಿ ಅವರ ಶಿಷ್ಯ. ಪರಿಸರದ ಬಗ್ಗೆ ಕಾಳಜಿ ಹೆಚ್ಚು. ರಮೇಶ್ ಬೇಗಾರ್ ಅವರ ಕಥೆ ಇಷ್ಟವಾಗಿ ಈ ಸಿನಿಮಾ ನಿರ್ಮಾಣ ಮಾಡಿರುವುದಾಗಿ ನಿರ್ಮಾಪಕ ಟಿ.ಸಿ.ರವೀಂದ್ರ ತುಂಬರಮನೆ ತಿಳಿಸಿದರು.jalapatha kannada movie

“ಪದವಿ ಪೂರ್ವ” ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ನಾನು ಈ ಚಿತ್ರದ ಮೂಲಕ ನಾಯಕನಾಗಿದ್ದೇನೆ ಎಂದು ಮಾತನಾಡಿದ ನಾಯಕ ರಜನೀಶ್, ತಮ್ಮ ಪಾತ್ರದ ಬಗ್ಗೆ ಹಾಗೂ ಚಿತ್ರದ ಕುರಿತು ಮಾತನಾಡಿದರು.

ಮಲೆನಾಡನ್ನು ಕೇವಲ ಪ್ರವಾಸಿತಾಣನಾಗಷ್ಟೇ ನೋಡುತ್ತಿದ್ದೇವೆ. ಆದರೆ ಅಲ್ಲಿನ ಸಂಸ್ಕೃತಿಯ ಪರಿಚಯದ ಜೊತೆಗೆ ಸಮಸ್ಯೆಗಳನ್ನು ತೋರಿಸುವ ಪ್ರಯತ್ನ ಈ ಚಿತ್ರದಲ್ಲಾಗಿದೆ. ನನ್ನ ಪಾತ್ರ ಕೂಡ ಚೆನ್ನಾಗಿದೆ ಎನ್ನುತ್ತಾರೆ ನಾಗಶ್ರೀ ಬೇಗಾರ್‌.jalapatha kannada movie

ನಿರ್ದೇಶಕ ರಮೇಶ್ ಬೇಗಾರ್ ಅವರ ಕಾರ್ಯವೈಖರಿ ನನಗೆ ಇಷ್ಟ. ಹಾಗಾಗಿ ಅವರ ಎರಡನೇ ಚಿತ್ರದಲ್ಲೂ ನಟಿಸಿದ್ದೇನೆ ಎಂದರು ನಟ ಪ್ರಮೋದ್ ಶೆಟ್ಟಿ.

ಚಿತ್ರದಲ್ಲ ನಟಿಸಿರುವ ಎಂ.ಆರ್ ಸುರೇಶ್, ಸಂಗೀತ ನಿರ್ದೇಶಕಿ ಸಾದ್ವಿನಿ ಕೊಪ್ಪ, ಗಾಯಕಿ ಪದ್ಮಿನಿ ಓಕ್ ಹಾಗೂ ಛಾಯಾಗ್ರಾಹಕ ಶಶೀರ್ “ಜಲಪಾತ” ಚಿತ್ರದ ಬಗ್ಗೆ ಮಾತನಾಡಿದರು. ಸಿನಿಮಾ ತಂಡದ ಅಭಿಷೇಕ್ ಹೆಬ್ಬಾರ್ , ಕಾರ್ತಿಕ್ , ಚಿದಾನಂದ ಹೆಗ್ಗಾರ್ , ರಶ್ಮಿ ಮೊದಲಾದವರು ಉಪಸ್ಥಿತರಿದ್ದರು

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…