‘ಜೋಡರ್ನ್’ ಟ್ರೇಲರ್ ಬಿಡುಗಡೆ – ಡಿಸೆಂಬರ್ 30ಕ್ಕೆ ಸಿನಿಮಾ ರಿಲೀಸ್

'Jodern' trailer release - Movie release on December 30

ವಿನೋದ್ ಧಯಾಳನ್ ನಿರ್ದೇಶನದ ‘ಜೋಡರ್ನ್’ ಸಿನಿಮಾ ಟ್ರೇಲರ್ ಇಂದು ಬಿಡುಗಡೆಯಾಗಿದೆ. ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಹೇಂದ್ರ ಪ್ರಸಾದ್, ಕವಲು ದಾರಿ ಖ್ಯಾತಿಯ ಸಂಪತ್ ಮೈತ್ರೇಯ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಡಿಸೆಂಬರ್ 30ರಂದು ಸಿನಿಮಾ ಬಿಡುಗಡೆಯಾಗುತ್ತಿದೆ. ಚಿತ್ರದ ಬಹು ನಿರೀಕ್ಷಿತ ಟ್ರೇಲರ್ ಚಿತ್ರತಂಡ ಬಿಡುಗಡೆ ಮಾಡಿದೆ. ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್ ಟ್ರೇಲರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.'Jodern' trailer release - Movie release on December 30

ನಿರ್ದೇಶಕ ವಿನೋದ್ ಧಯಾಳನ್ ಮಾತನಾಡಿ ಅಮೇರಿಕನ್ ಬಾಸ್ಕೆಟ್ ಬಾಲ್ ಆಟಗಾರ ಮೈಕಲ್ ಜೋರ್ಡನ್ ಹೇಳಿರುವ ‘ವೈಫಲ್ಯವನ್ನು ನಾನು ಒಪ್ಪಿಕೊಳ್ಳುತ್ತೇನೆ, ಪ್ರತಿಯೊಬ್ಬರೂ ಯಾವುದಾದರೂ ವಿಷಯದಲ್ಲಿ ವಿಫಲರಾಗುತ್ತಾರೆ ಆದರೆ ಪ್ರಯತ್ನ ಪಡದೇ ವೈಫಲ್ಯವನ್ನು ನಾನು ಎಂದಿಗೂ ಒಪ್ಪಿಕೊಳ್ಳಲು ಸಾಧ್ಯವಿಲ್ಲ’ ಎಂಬ ಹೇಳಿಕೆಯನ್ನು ಆಧಾರವಾಗಿಟ್ಟುಕೊಂಡು ಈ ಸಿನಿಮಾ ಕಥೆಯನ್ನು ಹೆಣೆಯಲಾಗಿದೆ. ಕೌಟುಂಬಿಕ ಕಥಾಹಂದರ ಒಳಗೊಂಡ ಸ್ಪೂರ್ತಿದಾಯಕ ಸಿನಿಮಾವಾಗಿದೆ. ಕಥೆಯೇ ಈ ಚಿತ್ರದ ಹೀರೋ. ಕಾಮಿಡಿ ಕಿಲಾಡಿ ಖ್ಯಾತಿಯ ಮಹೇಂದ್ರ ಪ್ರಸಾಧ್ ಹಾಗೂ ಸಂಪತ್ ಮೈತ್ರೇಯ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಈ ಹಿಂದೆ ಕಿರು ಚಿತ್ರಗಳನ್ನು ನಿರ್ದೇಶನ ಮಾಡಿಕೊಂಡಿದ್ದೆ ಇದು ನನ್ನ ನಿರ್ದೇಶನದ ಮೊದಲ ಸಿನಿಮಾ. ಕಟೆಂಟ್ ಗೆ ಏನು ಬೇಕೋ ಅದನ್ನು ಮಾಡಿದ್ದೇವೆ. ಔಟ್ ಪುಟ್ ಚೆನ್ನಾಗಿ ಮೂಡಿ ಬಂದಿದೆ. ಎಲ್ಲರೂ ಸಿನಿಮಾ ನೋಡಿ ಪ್ರೋತ್ಸಾಹಿಸಿ ಎಂದು ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡ್ರು.'Jodern' trailer release - Movie release on December 30

ಮಹೇಂದ್ರ ಪ್ರಸಾದ್ ಮಾತನಾಡಿ ನಾನು ಚಿತ್ರದಲ್ಲಿ ಮೈಕಲ್ ಪಾತ್ರವನ್ನು ಮಾಡಿದ್ದೇನೆ. ತಂದೆ ಮಗನ ಬಾಂದವ್ಯ ಚಿತ್ರದಲ್ಲಿದೆ. ಇದು ನಾನು ನಟಿಸಿದ ಮೊದಲ ಸಿನಿಮಾ. ಈ ಸಿನಿಮಾ ಮುಗಿಯುವವರೆಗೆ ಯಾವ ಚಿತ್ರವನ್ನು ನಾನು ಒಪ್ಪಿಕೊಂಡಿಲ್ಲ. ಆ ಪಾತ್ರದಲ್ಲೇ ತಲ್ಲೀನನಾಗಿದ್ದೆ. ನಿರ್ದೇಶಕರು ನನ್ನ ಪಾತ್ರದ ಬಗ್ಗೆ ತಿಳಿಸಿಕೊಟ್ಟು ನನ್ನಿಂದ ಅಭಿನಯ ಮಾಡಿಸಿದ್ದಾರೆ. ಡಿಸೆಂಬರ್ 30 ರಂದು ಸಿನಿಮಾ ಬಿಡುಗಡೆಯಾಗುತ್ತಿದೆ ಎಲ್ಲರೂ ಸಿನಿಮಾ ನೋಡಿ ಪ್ರೋತ್ಸಾಹಿಸಿ ಎಂದು ಮೊದಲ ಸಿನಿಮಾ ಬಗ್ಗೆ ಸಂತಸ ಹಂಚಿಕೊಂಡ್ರು.'Jodern' trailer release - Movie release on December 30

ಸಂಪತ್ ಮೈತ್ರೇಯ ಮಾತನಾಡಿ ಚಿತ್ರದಲ್ಲಿ ನನಗೆ ಒಂದು ಒಳ್ಳೆಯ ಪಾತ್ರ ಕೊಟ್ಟಿದ್ದಕ್ಕೆ ಚಿತ್ರದ ನಿರ್ದೇಶಕ, ನಿರ್ಮಾಪಕರು ಹಾಗೂ ಸಾಯಿ ಸರ್ವೇಶ್ ಅವರಿಗೆ ಧ್ಯನ್ಯವಾದ ತಿಳಿಸುತ್ತೇನೆ. ನನ್ನ ಸ್ನೇಹಿತರೊಬ್ಬರ ಮೂಲಕ ಈ ಸಿನಿಮಾ ನನಗೆ ಸಿಕ್ಕಿತು. ತುಂಬಾ ಒಳ್ಳೆ ಕಟೆಂಟ್ ಇರೋ ಸಿನಿಮಾ. ಈ ವರ್ಷದ ಕೊನೆಯಲ್ಲಿ ನಮ್ಮ ಸಿನಿಮಾ ಬಿಡುಗಡೆಯಾಗುತ್ತಿದೆ. ಎಲ್ಲರೂ ಈ ಸಿನಿಮಾ ನೋಡುವ ಮೂಲಕ ಹೊಸ ವರ್ಷ ಆಚರಣೆ ಮಾಡಿ ಪ್ರೋತ್ಸಾಹಿಸಿ ಎಂದು ಕೇಳಿಕೊಂಡ್ರು.'Jodern' trailer release - Movie release on December 30

ಸೀತಾರ, ಸುನೀಲ್, ಯೋಗೇಶ್ ಶಂಕರ್ ನಾರಾಯಣನ್, ಗಣೇಶ್ ಜೈ ಕುಮಾರ್ ಚಿತ್ರದ ತಾರಾಬಳಗದಲ್ಲಿದ್ದಾರೆ. ನೋ ನಾನ್ಸೆನ್ಸ್ ಕ್ರಿಯೇಷನ್ಸ್ ಬ್ಯಾನರ್ ನಡಿ ಜೆ.ಜಾನಕಿರಾಮ್, ಎನ್ ಆರ್.ಪಾಟೀಲ್ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಜೈಕುಮಾರ್ ಜೆ ಸ್ಟಾಲಿನ್ ಛಾಯಾಗ್ರಹಣ, ಸಾಯಿ ಸರ್ವೇಶ್ ಸಂಗೀತ ನಿರ್ದೇಶನ ಹಾಗೂ ಸಾಹಿತ್ಯ, ನಿರಂಜನ್ ದೇವರಮನೆ ಸಂಕಲನ ಜೋರ್ಡನ್ ಚಿತ್ರಕ್ಕಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…