ಬಿಡದಿ ಸಮೀಪ ಪ್ರಾರಂಭವಾಯಿತು “ಜಾಲಿವುಡ್”

"Jollywood" started near Bidadi.

ವೇಲ್ಸ್ ಗ್ರೂಪ್‌ನ ಸಂಸ್ಥಾಪಕರಾದ ಐಶರಿ ಕೆ ಗಣೇಶ್ ಅವರ ಸಾರಥ್ಯದ “ಜಾಲಿವುಡ್” ಸ್ಟುಡಿಯೋಸ್ ಮತ್ತು ಅಡ್ವೆಂಚರ್ಸ್ ಇತ್ತೀಚೆಗೆ ಉದ್ಘಾಟನೆಯಾಯಿತು."Jollywood" started near Bidadi.

ಮಾನ್ಯ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ಸಂಸದರಾದ ಡಿ.ಕೆ.ಸುರೇಶ್ ಹಾಗೂ ಮಾಗಡಿ ಶಾಸಕ ಹೆಚ್ ಸಿ ಬಾಲಕೃಷ್ಣ “ಜಾಲಿವುಡ್” ಅನ್ನು ಉದ್ಘಾಟಿಸಿದರು."Jollywood" started near Bidadi.

ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ ಸಂಸ್ಥಾಪಕರಾದ ಐಶರಿ ಕೆ ಗಣೇಶ್, ಬಹಳ ವರ್ಷಗಳ ಒಂದು ಕನಸು ಇಂದು ನನಸಾಗಿದೆ. ಕಳೆದ 30 ವರ್ಷಗಳಿಂದ ಶಿಕ್ಷಣ, ಆರೋಗ್ಯ, ಸಿನಿಮಾ ಮತ್ತು ಕ್ರೀಡಾ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದೇವೆ. ಮನೆಮಂದಿಯಲ್ಲಾ ಒಟ್ಟಿಗೆ ಸಮಯ ಕಳೆಯುವಂತಹ ಒಂದು ಥೀಮ್ ಪಾರ್ಕ್ ಮಾಡಬೇಕು ಎಂಬ ಆಸೆ ಇತ್ತು. ಹೀಗಿರುವಾಗಲೇ, ಇನ್ನೋವೇಟೀವ್ ಫಿಲಂಸಿಟಿಯನ್ನು ಟೇಕ್ ಓವರ್ ಮಾಡುವ ಆಫರ್ ಬಂತು. ಕಳೆದ ಎರಡು ವರ್ಷಗಳಿಂದ ಪ್ರಕ್ರಿಯೆ ನಡೆಯುತ್ತಲೇ ಇತ್ತು. ಫಿಲಂಸಿಟಿಯನ್ನು ನವೀಕರಿಸಿರುವುದಷ್ಟೇ ಅಲ್ಲ, ಹಲವು ಮನರಂಜನೆ ಆಟಗಳನ್ನು ಹೊಸದಾಗಿ ಪ್ರಾರಂಭಿಸಿದ್ದೇವೆ. ಭಾರತೀಯ ಚಿತ್ರರಂಗಕ್ಕೆ ಇದನ್ನು ಸಮರ್ಪಿಸುತ್ತಿದ್ದೇವೆ. ಈ ಪಾರ್ಕ್ ನಲ್ಲಿ 33 ಮುಖ್ಯ ಆಕರ್ಷಣೆಗಳಿವೆ. ವಾಟರ್ ರೈಡ್ ಗಳಲ್ಲದ್ದೆ, ಡೈನೋ ಪಾರ್ಕ್, 5 ರೆಸ್ಟೋರೆಂಟ್ ಗಳು, ಎರಡು ರೆಸ್ಟೋ ಪಬ್ ಗಳು … ಹೀಗೆ ಮನೆಮಂದಿಯಲ್ಲಾ ಒಟ್ಟಾಗಿ ಕಾಲ ಕಳೆಯುವ ಒಂದು ಸ್ಥಳವಿದು. ಈ ಜಾಲಿವುಡ್ ನಲ್ಲಿ ಮನರಂಜನೆ ಖಚಿತ. ಆಗಸ್ಟ್ 27ರಿಂದ ಈ ಜಾಲಿವುಡ್ ಅಧಿಕೃತವಾಗಿ ಪ್ರಾರಂಭವಾಗಲಿದೆ. ಇಂದು ಬಂದು ಉದ್ಘಾಟಿಸಿದ ಗಣ್ಯರಿಗೆ ಮತ್ತು ದೂರದೂರುಗಳಿಂದ ನನಗೆ ಮತ್ತು ನಮ್ಮ ತಂಡಕ್ಕೆ ಶುಭ ಹಾರೈಸುವುದಕ್ಕೆ ಬಂದವರಿಗೆ ಧನ್ಯವಾದಗಳು ಎಂದರು."Jollywood" started near Bidadi.

ನಾನು ನಾಲ್ಕು ವರ್ಷಗಳಿಂದ ಯಾವುದೇ ಖಾಸಗಿ ಕಾರ್ಯಕ್ರಮಗಳ ಉದ್ಘಾಟನೆಗೆ ಕಾರ್ಯದೊತ್ತಡದಿಂದ ಹೋಗಿರಲಿಲ್ಲ. ಇದೇ ಮೊದಲು ಬಂದಿರುವುದು. “ಜಾಲಿವುಡ್” ಚೆನ್ನಾಗಿದೆ. ಒಳ್ಳೆಯದಾಗಲಿ. ಇಡೀ ಬೆಂಗಳೂರಿನವರು ಹಾಗೂ ಬೇರೆ ಊರಿನವರು ಬಂದು ಇದನ್ನು ವೀಕ್ಷಿಸಲಿ ಎಂದು ಮಾನ್ಯ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಹಾರೈಸಿದರು."Jollywood" started near Bidadi.

ಸ್ಯಾಂಡಲ್ವುಡ್, ಕಾಲಿವುಡ್, ಬಾಲಿವುಡ್ ಹೀಗೆ ಎಲ್ಲಾ‌ ಒಂದು ಕಡೆ ಸೇರುವ ಸ್ಥಳ “ಜಾಲಿವುಡ್” ಆಗಲಿ ಎಂದು ತಿಳಿಸಿದ್ದ ಶಿವರಾಜಕುಮಾರ್, ಹಿಂದೆ ಇಲ್ಲಿ ಸಾಕಷ್ಟು ಚಿತ್ರಗಳ ಚಿತ್ರೀಕರಣದಲ್ಲಿ ಭಾಗಿಯಾಗಿದ್ದೇನೆ. ಇಲ್ಲಿಗೆ ಬಂದಾಗ ಹಳೆಯ ದಿನಗಳು ನೆನಪಾದವು. ಗಣೇಶ್ ಅವರ ಈ ಪ್ರಯತ್ನಕ್ಕೆ ಎಲ್ಲರು ಪ್ರೋತ್ಸಾಹ ನೀಡಿ ಎಂದರು."Jollywood" started near Bidadi.

ಸಂಸದರಾದ ಡಿ.ಕೆ.ಸುರೇಶ್, ಶಾಸಕ ಬಾಲಕೃಷ್ಣ ಸಹ “ಜಾಲಿವುಡ್” ಗೆ ಶುಭ ಕೋರಿದರು. ಸಿ.ಇ.ಓ ಆರವ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು."Jollywood" started near Bidadi.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…