ಸುಮಧುರ ಹಾಡುಗಳಲ್ಲಿ “ಕಾಣೆಯಾಗಿದ್ದಾಳೆ”.

kaaneyagiddale kannada movie song release

ಶ್ರೀಮೈಲಾರಲಿಂಗೇಶ್ವರ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ಆರ್ ಕೆ ನಿರ್ದೇಶಿಸಿರುವ ಹಾಗೂ ಕೌಶಿಕ್ ಸಂಗೀತ ನೀಡಿರುವ “ಕಾಣೆಯಾಗಿದ್ದಾಳೆ” ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚಿಗೆ ನಡೆಯಿತು. ಹುಡುಕಿ ಕೊಟ್ಟವರಿಗೆ ಬಹುಮಾನ ಎಂಬ ಅಡಿಬರಹ ಈ ಚಿತ್ರಕ್ಕಿದೆ.kaaneyagiddale kannada movie song release

ಕರ್ನಾಟಕ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್, ನಟಿ, ನಿರ್ದೇಶಕಿ ಪ್ರಿಯಾಹಾಸನ್, ನಟಿಯರಾದ ಶರಣ್ಯ, ನಿಶಿತಾ ಗೌಡ, “ಫಾರ್ ರಿಜಿಸ್ಟ್ರೇಶನ್” ಚಿತ್ರದ ನಿರ್ದೇಶಕ ನವೀನ್ ದ್ವಾರಕನಾಥ್, ನಿರ್ಮಾಪಕ ನವೀನ್ ರಾವ್ ಮುಂತಾದವರು ಮುಖ್ಯ ಅತಿಥಿಗಳಾಗಿ ಹಾಡುಗಳ ಬಿಡುಗಡೆ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು.kaaneyagiddale kannada movie song release

ನಾನು ಹಲವು ವರ್ಷಗಳಿಂದ ಕನ್ನಡ ಚಿತ್ರರಂಗದ ಜೊತೆ ಒಡನಾಟ ಹೊಂದಿದ್ದೇನೆ. ಇದು ನನ್ನ ಎರಡನೇ ನಿರ್ದೇಶನದ ಚಿತ್ರ. ಸಮಾಜಿಕ ಕಳಕಳಿಯಿರುವ ಈ ಚಿತ್ರವನ್ನು ಕುಟುಂಬ ಸಮೇತ ನೋಡಬಹುದು. ಹೆಚ್ಚಿನ ಓದಿನ ಸಲುವಾಗಿ ನಗರಕ್ಕೆ ಬಂದ ಹೆಣ್ಣುಮಗಳೊಬ್ಬಳು ಯಾವರೀತಿ ತೊಂದರೆ ಅನುಭವಿಸುತ್ತಾಳೆ ಎನ್ನುವುದೇ ಪ್ರಮುಖ ಕಥಾಹಂದರ. ವಿನಯ್ ಕಾರ್ತಿ ನಾಯಕನಾಗಿ ನಟಿಸಿದ್ದು, ಕೀರ್ತಿ ಭಟ್ ಈ ಚಿತ್ರದ ನಾಯಕಿ. ಸದ್ಯ ತೆಲುಗು ಬಿಗ್ ಬಾಸ್ ನಲ್ಲಿ ನಮ್ಮ ನಾಯಕಿ ಇರುವುದರಿಂದ ಇಲ್ಲಿಗೆ ಬಂದಿಲ್ಲ. ಹಿರಿಯ ನಟಿ ಗಿರಿಜಾ ಲೋಕೇಶ್, ವಿನಯಾ‌ಪ್ರಸಾದ್, ಬಿರಾದಾರ್ ಮುಂತಾದವರು ಚಿತ್ರದಲ್ಲಿದ್ದಾರೆ. ಕೌಶಿಕ್ ಅದ್ಭುತವಾಗಿ ಸಂಗೀತ ಸಂಯೋಜಿಸಿದ್ದಾರೆ. ಈಗಾಗಲೇ ಸೆನ್ಸಾರ್ ಮಂಡಳಿ ಸಹ ಚಿತ್ರವನ್ನು ವೀಕ್ಷಿಸಿದ್ದು, ಮೆಚ್ಚುಗೆಯ ಮಾತುಗಳನ್ನಾಡಿದೆ. ನವೆಂಬರ್ ಕೊನೆ ಅಥವಾ ಡಿಸೆಂಬರ್ ಮೊದಲವಾರ ನಮ್ಮ ಚಿತ್ರ ಬಿಡುಗಡೆಯಾಗಲಿದೆ ಎಂದರು ನಿರ್ದೇಶಕ – ನಿರ್ಮಾಪಕ ಆರ್.ಕೆ.kaaneyagiddale kannada movie song release

ನಾನು ಹೊಸಕೋಟೆ ಬಳಿಯ ಹಳ್ಳಿಯವನು. ಬೆಂಗಳೂರಿಗೆ ಕೆಲಸದ ನಿಮಿತ್ತ ಬಂದೆ. ಆನಂತರ ನಿರ್ದೇಶಕ ಆರ್ ಕೆ ಅವರು ಭೇಟಿಯಾದಾಗ ಈ ಚಿತ್ರದ ಬಗ್ಗೆ ಹೇಳಿದರು. ನನ್ನನ್ನು ನಾಯಕನಾಗಿ ಆಯ್ಕೆ ಮಾಡಿದರು ಎಂದು ನಾಯಕ ವಿನಯ್ ಕಾರ್ತಿ ತಿಳಿಸಿದರು.kaaneyagiddale kannada movie song release

ನಾನು ಆರ್ ಕೆ ಅವರ ಜೊತೆ ನಟಿಸಿರುವ ಎರಡನೇ ಸಿನಿಮಾ. ಅದ್ಭುತ ನಿರ್ದೇಶಕ ಈತ. ಒಳ್ಳೆಯ ಸಿನಿಮಾ ಮಾಡಿದ್ದಾರೆ ಪ್ರೋತ್ಸಾಹ ನೀಡಿ ಎನ್ನುತ್ತಾರೆ ಹಿರಿಯ ನಟಿ ಗಿರಿಜಾ ಲೋಕೇಶ್‌.kaaneyagiddale kannada movie song release

ಹಾಡುಗಳ ಬಗ್ಗೆ ಸಂಗೀತ ನಿರ್ದೇಶಕ ಕೌಶಿಕ್ ಮಾಹಿತಿ ನೀಡಿದರು. ಕಾರ್ಯಕಾರಿ ನಿರ್ಮಾಪಕ ಸಂಜಯ್ ಹಾಗೂ ಚಿತ್ರದಲ್ಲಿ ನಟಿಸಿರುವ ಅಂಜನಾ ಗಿರೀಶ್ ಚಿತ್ರದ ಕುರಿತು ಮಾತನಾಡಿದರು.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…