ಕಣ್ಮನ ಸೆಳೆಯುತ್ತಿದೆ “ಕಡಲೂರ ಕಣ್ಮಣಿ” ಚಿತ್ರದ ಟೀಸರ್ ಹಾಗೂ ಹಾಡುಗಳು.

kadalora kanmani

“ಕಿಸ್” ಚಿತ್ರದ ನಾಯಕ ವಿರಾಟ್ “ಕಡಲೂರ ಕಣ್ಮಣಿ” ಚಿತ್ರದ ಟೀಸರ್ ಬಿಡುಗಡೆ ಮಾಡಿದರು. ಇದೇ ಸಂದರ್ಭದಲ್ಲಿ ಚಿತ್ರದ ಹಾಡುಗಳು ಪ್ರದರ್ಶನವಾಯಿತು.
ಚಿತ್ರದ ಟೀಸರ್ ಅಪಾರ ಸಂಖ್ಯೆಯಲ್ಲಿ ವೀಕ್ಷಣೆಯಾಗಿ, ಎಲ್ಲರ ಮೆಚ್ಚುಗೆ ದೊರಕಿದೆ. ಆರ್.ಪಿ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳು ಸುಮಧುರವಾಗಿದೆ.kadalora kanmani

“ಕಡಲೂರ ಕಣ್ಮಣಿ” ಎಂದರೆ ವಜ್ರ ಎಂದು ನಾನು ಹಿಂದೆಯೇ ತಿಳಿಸಿದೆ. ಚಿತ್ರತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಮೂಡಿಬಂದಿದೆ. ದಸರಾ ಹಬ್ಬಕ್ಕೆ ಬಿಡುಗಡೆ ಮಾಡುವ ಪ್ರಯತ್ನ ನಡೆಯುತ್ತಿದೆ. ಟೀಸರ್ ಬಿಡುಗಡೆ ಮಾಡಿಕೊಟ್ಟ ವಿರಾಟ್ ಅವರಿಗೆ ಹಾಗೂ‌ ಚಿತ್ರಕ್ಕೆ ಬಂಡಾವಳ ಹೂಡಿರುವ ನಿರ್ಮಾಪಕರಿಗೆ ನನ್ನ‌‌ ಧನ್ಯವಾದ ಎಂದರು ನಿರ್ದೇಶಕ ರಾಮ್ ಪ್ರಸನ್ನ ಹುಣಸೂರು.kadalora kanmani

ನಿರ್ಮಾಪಕರಾದ ವಿನೋದ್ ರಾಮ್,‌ ಶೈಲೇಶ್ ಆರ್ ಪೂಜಾರಿ ಹಾಗೂ ಬಸವರಾಜ ಗಜ್ಜಿ “ಕಡಲೂರ ಕಣ್ಮಣಿ” ಯನ್ನು ಪ್ರೋತ್ಸಾಹಿಸುವಂತೆ ಮನವಿ ಮಾಡಿದರು. ಶಿರಸಿ ಯಿಂದ ಹಲವು ಕನಸನ್ನು ಹೊತ್ತು ಬಂದವನು ನಾನು. ನನ್ನ ಕನಸಿಗೆ ಆಸರೆಯಾದವರು ನಿರ್ದೇಶಕ ರಾಮ್ ಪ್ರಸನ್ನ ಹುಣಸೂರು. ಇಬ್ಬರ ಕನಸು ಸೇರಿ ಈ ಚಿತ್ರವಾಗಿದೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎನ್ನುತ್ತಾರೆ ನಾಯಕ ಅರ್ಜುನ್ ನಗರ್ಕರ್.

ನಾಯಕಿಯಾಗಿ ಮೊದಲ ಚಿತ್ರ. ಅಂಜು ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದೀನಿ. ನಿಮ್ಮೆಲ್ಲರಿಗೂ ನನ್ನ ಪಾತ್ರ ಹಾಗೂ ಚಿತ್ರ ಹಿಡಿಸುತ್ತದೆ ಎಂಬ ಭರವಸೆಯಿದೆ ಎಂದರು ನಾಯಕಿ ನಿಶಾ ಯಾಲಿನಿ. “ಕಿಸ್” ಚಿತ್ರದ ನಾಯಕ ವಿರಾಟ್ ಹಾಗೂ ಬಹುಭಾಷಾ ನಟಿ ನೇಹಾ ಸಕ್ಸೇನ ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು. ಚಿತ್ರತಂಡದ ಹಲವು ಸದಸ್ಯರು ತಮ್ಮ ಅಭಿಪ್ರಾಯ ಹಂಚಿಕೊಂಡರು.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…