ಕಿಕ್ಕೇರಿಸೋ ಶೈಲಿಯ `ಕೈಲಾಸ’ ಟ್ರಾನ್ಸ್ ಸಾಂಗ್!

Kailasa trance song

ಈ ಹಿಂದೆ ತಾರಕಾಸುರ ಚಿತ್ರದ ಮೂಲಕ ಅಬ್ಬರದ ಎಂಟ್ರಿ ಕೊಟ್ಟಿದ್ದವರು ರವಿ. ಇದೀಗ ಅವರು ಕೈಲಾಸ ಎಂಬ ಚಿತ್ರದ ಮೂಲಕ ಮತ್ತೆ ಪ್ರೇಕ್ಷಕರನ್ನು ಮುಖಾಮುಖಿಯಾಗಲು ತಯಾರಾಗಿದ್ದಾರೆ. ನಾಗ್ ವೆಂಕಟ್ ನಿರ್ದೇಶನದ ಕೈಲಾಸ ಚಿತ್ರಕ್ಕೆ ಕಾಸಿದ್ರೆ ಎಂಬ ಅಡಿ ಬರಹವಿದೆ. ಈಗಾಗಲೇ ಟೀಸರ್ ಮೂಲಕ ಝಲಕ್ಕುಗಳನ್ನು ಅನಾವರಣಗೊಳಿಸಿದ್ದ ಚಿತ್ರತಂಡವೀಗ ಕನ್ನಡದ ಮಟ್ಟಿಗೆ ಹೊಸತೆನ್ನಿಸುವಂಥಾ ಟ್ರಾನ್ಸ್ ಸಾಂಗ್ ವೊಪಂದನ್ನು ಬಿಡುಗಡೆಗೊಳಿಸಿದೆ. ದೃಷ್ಯಗಳ ಮೂಲಕವೇ ಕಿಕ್ಕೇರಿಸೋ ಶೈಲಿಯ ಈ ಟ್ರಾನ್ಸ್ ವೀಡಿಯೋ ಸಾಂಗ್ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ನೋಡುಗರ ಕಡೆಯಿಂದ ಮೆಚ್ಚುಗೆಯನ್ನೂ ಪಡೆದುಕೊಳ್ಳುತ್ತಿದೆ.Kailasa trance song

ಈ ಸಿನಿಮಾದ ಆಂತರ್ಯಕ್ಕನುಗುಣವಾಗಿ ಈ ಟ್ರಾನ್ಸ್ ವೀಡಿಯೋ ಸಾಂಗ್ ಅನ್ನು ನಿರ್ದೇಶಕರು ರೂಪಿಸಿದ್ದಾರಂತೆ. ಮಾದಕ ಜಗತ್ತಿನ ಉನ್ಮತ್ತ ಕ್ಷಣಗಳನ್ನು ಹಿಡಿದಿಟ್ಟಂತೆ ಭಾಸವಾಗುವ ಈ ಹಾಡಿನ ಮಧ್ಯೆ ಪೂರಕವಾದ ಒಂದಷ್ಟು ಸಾಲುಗಳು, ಪಾತ್ರದ ಕಡೆಯಿಂದ ತಗೇಲಿ ಬರುತ್ತದೆ. ಅದಕ್ಕೆ ಲೇಖಕ್ ಎಂ ಸಿದ್ದಾರ್ಥ ಸಾಹಿತ್ಯ ಒದಗಿಸಿದ್ದಾರೆ. ಆಶಿಕ್ ಅರುಣ್ ಸಂಗೀತ ಸಂಯೋಜನೆಯೊಂದಿಗೆ ಈ ಟ್ರಾನ್ಸ್ ವೀಡಿಯೋ ಸಾಂಗ್ ಮೂಡಿ ಬಂದಿದೆ. ಇದರ ಮೂಲಕವೇ ನಾಯಕ ರವಿಯ ಪಾತ್ರ ಕೂಡಾ ಪ್ರೇಕ್ಷಕರ ಮುಂದೆ ಸುಳಿದಂತಾಗಿದೆ. ಇದುವರೆಗೂ ಕನ್ನಡ ಸಿನಿಮಾಗಳಲ್ಲಿ ಇಂಥಾ ಟ್ರಾನ್ಸ್ ವೀಡಿಯೋ ಸಾಂಗ್ ಅಲ್ಲಲ್ಲಿ ಕಾಣಿಸಿಕೊಂಡಿವೆ. ಆದರೆ ಈ ಚಿತ್ರದಲ್ಲಿ ಅದನ್ನು ಪೂರ್ಣಪ್ರಮಾಣದಲ್ಲಿ ಪ್ರಯೋಗ ಮಾಡಲಾಗಿದೆಯಂತೆ.Kailasa trance song

ಇದು ಕ್ರೈಂ ಕಂ ಕಾಮಿಡಿ ಜಾನರಿಗೊಳಪಡುವ ಚಿತ್ರ. ಪಕ್ಕಾ ಕಮರ್ಶಿಯಲ್ ಬಗೆಯಲ್ಲಿ ತಯಾರುಗೊಂಡಿರುವ ಇದು ನಾಗ್ ವೆಂಕಟ್ ನಿರ್ದೇಶನದ ಮೊದಲ ಸಿನಿಮಾ. ಮೂಲತಃ ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದ ನಾಗ್ ವೆಂಕಟ್ ಈಗೊಂದಷ್ಟು ವರ್ಷಗಳ ಹಿಂದೆಯೇ ಪೂರ್ಣಪ್ರಮಾಣದಲ್ಲಿ ಸಿನಿಮಾ ರಂಗದಲ್ಲಿ ತೊಡಗಿಸಿಕೊಂಡಿದ್ದಾರೆ. ಈವರೆಗೂ ಸಾಕಷ್ಟು ಕಿರು ಚಿತ್ರಗಳ ಮೂಲಕ ಪರೀಕ್ಷೆಗೊಡ್ಡಿಕೊಂಡಿದ್ದ ನಾಗ್ ವೆಂಕಟ್, ಕೈಲಾಸ ಕಾಸಿದ್ರೆ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿದ್ದಾರೆ.Kailasa trance song

ತಿಂಗಳೊಪ್ಪತ್ತಿನಲ್ಲಿ ಈ ಸಿನಿಮಾವನ್ನು ತೆರೆಗಾಣಿಸಲು ತಯಾರಿ ನಡೆಯುತ್ತಿದೆ. ಇದೇ ತಿಂಗಳ 24ರಂದು ಟ್ರೈಲರ್ ಬಿಡುಗಡೆಗೊಳ್ಳಲಿದೆ. ತಾರಕಾಸುರ ನಂತರ ರವಿ ಮತ್ತೊಂದು ವಿಶೇಷವಾದ ಪಾತ್ರದ ಮೂಲಕ ಪ್ರೇಕ್ಷಕರನ್ನು ಅಚ್ಚರಿಗೀಡು ಮಾಡಲಿದ್ದಾರಂತೆ. ಈಗ ಬಿಡುಗಡೆಯಾಗಿರೋ ನಶೆ ಹಾಡಿನ ಪ್ರಭೆಯಲ್ಲಿಯೇ, ಪ್ರೇಮಿಗಳ ದಿನದಂದು ಚೆಂದದ್ದೊಂದು ಹಾಡು ಬಿಡುಗಡೆಗೊಳಿಸಲು ಚಿತ್ರತಂಡ ತೀರ್ಮಾನಿಸಿದೆ. ವಿಶೇಷವೆಂದರೆ, ಈ ಚಿತ್ರದಲ್ಲಿ ಕ್ರೈಂ ಹಾಗೂ ಕಾಮಿಡಿ ಮಿಳಿತವಾಗಿರೋದರಿಂದಾಗಿ ಕಾಮಿಡಿ ಕಿಲಾಡಿಗಳು ಖ್ಯಾತಿಯ ಸೂರಜ್ ಕೂಡಾ ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.Kailasa trance song

ಇಲ್ಲಿ ರವಿ ಗೆ ಜೋಡಿಯಾಗಿ ಸುಕನ್ಯಾ ನಟಿಸಿದ್ದಾರೆ. ಶಿವಾಜಿ ಸುರತ್ಕಲ್ ಚಿತ್ರದ ಸಣ್ಣ ಪಾತ್ರದಲ್ಲಿ ನಟಿಸಿದ್ದ ಸುಕನ್ಯಾ ಈ ಮೂಲಕ ನಾಯಕಿಯಾಗಿದ್ದಾರೆ. ವಾಸಿಕ್ ಅಲ್ಸಾದ್ ನಿರ್ಮಾಣ ಮಾಡಿರುವ ಕೈಲಾಸ ಚಿತ್ರಕ್ಕೆ ಆಶಿಕ್ ಅರುಣ್ ಸಂಗೀತ, ತ್ಯಾಗರಾಜನ್ ಸಂಕಲನ, ಲೇಖಕ್ ಎಂ ಸಾಹಿತ್ಯ, ವಿನೋದ್ ರಾಜೇಂದ್ರನ್ ಛಾಯಾಗ್ರಹಣ, ಧನಂಜಯ ಬಿ ನೃತ್ಯ ನಿರ್ದೇಶನವಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…