“ಕಲಾಕಾರ್”ನ ಸಿನಿಪಯಣಕ್ಕೆ ಬೆಳ್ಳಿಹಬ್ಬದ ಸಂಭ್ರಮ.

kalakaar kannada movie bellihabba

ತಮ್ಮ ಅಮೋಘ ಅಭಿನಯದ ಮೂಲಕ ಜನಮನಸೂರೆಗೊಂಡಿರುವ ನಟ ಹರೀಶ್ ರಾಜ್ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ 25 ವರ್ಷಗಳು ಕಳೆದಿದೆ. ತಮ್ಮ ಸಿನಿಪಯಣಕ್ಕೆ 25 ವಸಂತಗಳು ಪೂರೈಸಿರುವ ಈ ಹೊತ್ತಿನಲ್ಲಿ ಹರೀಶ್ ರಾಜ್ ಚಿಕ್ಕ ಸಮಾರಂಭವೊಂದನ್ನು ಆಯೋಜಿಸಿದ್ದರು. ಖ್ಯಾತ ನಿರ್ದೇಶಕ ಗಿರೀಶ್ ಕಾಸರವಳ್ಳಿ, ನಟ, ನಿರ್ದೇಶಕ ಸುನೀಲ್ ಪುರಾಣಿಕ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್, ನಿರ್ಮಾಪಕ ಮಧುಸೂದನ್ ಗೌಡ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.kalakaar kannada movie

1997 ರಲ್ಲಿ ರಾಜೇಂದ್ರ ಸಿಂಗ್ ಬಾಬು ಅವರ ನಿರ್ದೇಶನದಲ್ಲಿ ಸೌಂದರ್ಯ ಅವರು ನಟಿಸಿದ್ದkalakaar kannada movie
“ದೋಣಿ ಸಾಗಲಿ” ಚಿತ್ರದ ಮೂಲಕ ನನ್ನ ಸಿನಿಪಯಣ ಆರಂಭವಾಯಿತು. ಅದೇ ವರ್ಷ ಖ್ಯಾತ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರು ನಿರ್ದೇಶಿಸಿದ್ದ “ತಾಯಿ ಸಾಹೇಬ” ಚಿತ್ರದಲ್ಲಿ ನಟಿಸುವ ಅವಕಾಶ ಸಿಕ್ಕಿದ್ದು ನನ್ನ ಭಾಗ್ಯ. ಅದರಲ್ಲಿ ನಾನು ಜಯಮಾಲ ಅವರ ಮಗನ ಪಾತ್ರ ನಿರ್ವಹಣೆ ಮಾಡಿದ್ದೆ.kalakaar kannada movie ಇಂದಿನ ಸಮಾರಂಭಕ್ಕೆ ನನ್ನ ಮೊದಲ ಸಿನಿಮಾ ನಿರ್ಮಾಪಕರಾದ ಮಧುಸೂದನ್ ಗೌಡ ಅವರು, ಖ್ಯಾತ ನಿರ್ದೇಶಕರಾದ ಗಿರೀಶ್ ಕಾಸರವಳ್ಳಿ ಸರ್, ಸುನೀಲ್ ಪುರಾಣಿಕ್ ಹಾಗೂ ಭಾ.ಮ.ಹರೀಶ್ ಸರ್ ಬಂದಿರುವುದು ತುಂಬಾ ಖುಷಿಯಾಗಿದೆ. ಅವರಿಗೆ ಅನಂತ ಧನ್ಯವಾದ. ನಾನು, ಸುನೀಲ್ ಪುರಾಣಿಕ್ ಅವರು ಫಣಿ ರಾಮಚಂದ್ರ ನಿರ್ದೇಶನದ “ದಂಡ ಪಿಂಡಗಳು” ಧಾರಾವಾಹಿಯಲ್ಲಿ ಜೊತೆಗೆ ನಟಿಸಿದ್ದೆವು. ಇದೆಲ್ಲಾ ನೆನಪಿಸಿಕೊಂಡರೆ ಇಷ್ಟು ಬೇಗ 25 ವರ್ಷಗಳು ಕಳೆದು ಹೋಯಿತಾ? ಅನಿಸುತ್ತದೆ. ಈ ಇಪ್ಪತ್ತೈದು ವರ್ಷಗಳಲ್ಲಿ 60 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಮಾಡಿದ್ದೇನೆ. ಗಿರೀಶ್ ಕಾಸರವಳ್ಳಿ, ಗಿರೀಶ್ ಕಾರ್ನಾಡ್, ರಾಜೇಂದ್ರ ಸಿಂಗ್ ಬಾಬು ಅವರಂತಹ ಶ್ರೇಷ್ಠ ನಿರ್ದೇಶಕರ ಚಿತ್ರಗಳಲ್ಲಿ ನಟಿಸಿದ್ದೇನೆ.kalakaar kannada movie
ಬಿಗ್ ಬಾಸ್ ನನಗೆ ಹೆಚ್ಚು ಜನಪ್ರಿಯತೆ ತಂದುಕೊಟ್ಟಿದೆ. ನಾನು ಏನಾದರೂ ಈ ರಂಗದಲ್ಲಿ ಸಾಧನೆ ಮಾಡಿದ್ದೀನಿ ಅಂದರೆ ಅದಕ್ಕೆ ಕಾರಣ ನಿರ್ಮಾಪಕರು, ನಿರ್ದೇಶಕರು, ತಂತ್ರಜ್ಞರು, ಕಲಾವಿದರು ಹಾಗೂ ಮಾಧ್ಯಮದವರು. ಇಡೀ ಚಿತ್ರರಂಗಕ್ಕೆ ನಾನು ಚಿರ ಋಣಿ ಎಂದರು ಹರೀಶ್ ರಾಜ್.

ಸ್ನೇಹಿತರೊಬ್ಬರ ಮೂಲಕ ನನಗೆ ಹರೀಶ್ ರಾಜ್ ಪರಿಚಯವಾದರು. ರಬಕವಿಯಲ್ಲಿ “ತಾಯಿಸಾಹೇಬ” ಚಿತ್ರದ ಚಿತ್ರೀಕರಣ ನಡೆಯುತ್ತಿತ್ತು. ಜಯಮಾಲ, ಶಿವರಾಮಣ್ಣ ಭಾಗವಹಿಸಿದ್ದರು. ತುರ್ತುಕಾರ್ಯದ ನಿಮಿತ್ತ ಶಿವರಾಮಣ್ಣ ಬೆಂಗಳೂರಿಗೆ ತೆರಳಬೇಕಾಯಿತು. ಆಗ ತಕ್ಷಣ ಹರೀಶ್ ರಾಜ್ ಅವರಿಗೆ ಫೋನ್ ಮಾಡಿ, ನಾಳೆ ನಿಮ್ಮ ಪಾತ್ರದ ಚಿತ್ರೀಕರಣವಿದೆ. ರಾತ್ರಿಯೇ ಹೊರಟು ಬನ್ನಿ ಎಂದೆ. ಬೆಳಗ್ಗೆ ಬಂದರು. ಯಾವುದೇ ಆಯಾಸವಿಲ್ಲದೆ ಅಂದಿನ ಚಿತ್ರೀಕರಣದಲ್ಲಿ ಲವಲವಿಕೆಯಿಂದ ಭಾಗವಹಿಸಿ, ಎಲ್ಲರ ಮೆಚ್ಚುಗೆ ಪಡೆದರು. ನಂತರ ನನ್ನ “ದ್ವೀಪ” ಚಿತ್ರದಲ್ಲೂ ಅಭಿನಯಿಸಿದ್ದರು. ಆ ಚಿತ್ರದ ಅಭಿನಯಕ್ಕಾಗಿ ಇವರು ರಾಷ್ಟ್ರೀಯ ಪ್ರಶಸ್ತಿ ರೇಸ್ ನಲ್ಲಿ ಇದ್ದರು ಎಂದು ನನಗೆ ನಿಧಾನವಾಗಿ ತಿಳಿಯಿತು. ಒಟ್ಟನಲ್ಲಿ ಹರೀಶ್ ರಾಜ್ ಉತ್ತಮ ನಟ.‌ ಮುಂದೆ ಸಹ ಅವರಿಗೆ ಒಳ್ಳೆಯ ಅವಕಾಶಗಳು ಸಿಗಲಿ ಎಂದು ಹಿರಿಯ ನಿರ್ದೇಶಕ ಗಿರೀಶ್ ಕಾಸರವಳ್ಳಿ ಹಾರೈಸಿದರು.kalakaar kannada movie

ತಮ್ಮ ಹರೀಶ್ ರಾಜ್ ಒಡನಾಟದ ಬಗ್ಗೆ ಸುನೀಲ್ ಪುರಾಣಿಕ್ ನೆನಪಿಸಿಕೊಂಡರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್ ಶುಭಾಶಯ ತಿಳಿಸಿದರು.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…