“ಕಾಲಾಯ ನಮಃ” ಎನ್ನುತ್ತಾ ಬರುತ್ತಿದ್ದಾರೆ ಕೋಮಲ್ ಕುಮಾರ್‌

ಹಾಸ್ಯ ಕಲಾವಿದನಾಗಿ ಜನಪ್ರಿಯರಾಗಿರುವ ನಟ ಕೋಮಲ್ ಕುಮಾರ್, ನಾಯಕನಾಗೂ ಸೈ ಎನಿಸಿಕೊಂಡವರು. ಕಳೆದ ಕೆಲವು ವರ್ಷಗಳಿಂದ ಕೋಮಲ್ ಕುಮಾರ್ ಚಿತ್ರರಂಗದಿಂದ ದೂರವಿದ್ದರು. ಈಗ “ಕಾಲಾಯ ನಮಃ” ಚಿತ್ರದ ಮೂಲಕ ಕೋಮಲ್ ಕುಮಾರ್ ಚಿತ್ರರಂಗಕ್ಕೆ ಮರಳಿ ಬರುತ್ತಿದ್ದಾರೆ. ಪ್ರಸ್ತುತ ಈ ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯುತ್ತಿದೆ.kalaya namaha kannada new movie Komal Kumar

ಮನುಷ್ಯನ ಜೀವನದಲ್ಲಿ ಗ್ರಹಗಳ ಪ್ರಭಾವ ಅಪಾರ. ನನ್ನ ಜೀವನದಲ್ಲೂ ಹಾಗೆ. ನಮ್ಮ ಅಣ್ಣ ಜಗ್ಗೇಶ್ ಅವರು, ಕೆಲವು ವರ್ಷಗಳ ಹಿಂದೆ ನನ್ನ ಜಾತಕ ನೋಡಿ, ನಿನಗೆ ಈಗ ಕೇತು ದೆಸೆ ನಡೆಯುತ್ತಿದೆ. ಹಾಗಾಗಿ ಸ್ವಲ್ಪ ಹುಷಾರಾಗಿರು ಅಂದಿದ್ದರು. ಹಾಗಾಗಿ ಐದು ವರ್ಷದಿಂದ ನಾನು ಯಾವುದೇ ಚಿತ್ರಗಳಲ್ಲಿ ಕಾಣಿಸಿಕೊಂಡಿಲ್ಲ.‌ ನಮ್ಮ ಊರಿನ ದೇವರಾದ ಕಾಲಭೈರವನ ಉಪಾಸನೆ ಮಾಡುತ್ತಿದೆ. ಈಗ ಕಾಲ ಕೂಡಿ ಬಂದಿದೆ. “ಕಾಲಾಯ ನಮಃ” ಶುರುವಾಗಿದೆ. ಕಾಲಭೈರವ ದೇವರ ಭಕ್ತನಾದ ನನ್ನ ಸಿನಿಮಾ ಶೀರ್ಷಿಕೆ ಕೂಡ, ಕಾಲದಿಂದಲೇ ಶುರುವಾಗುತ್ತಿರುವುದು ಕಾಕತಾಳೀಯ. ಕಾಲ ನಿಲುವುದಿಲ್ಲ. ಕಾಲ ಯಾರಿಗೂ ಕಾಯುವುದಿಲ್ಲ. ಈ ರೀತಿ ಕಾಲದ ಬಗ್ಗೆ ನಮ್ಮ ಸಿನಿಮಾ ಸಾಗುತ್ತದೆ. ನನ್ನ ಪತ್ನಿ ಅನಸೂಯ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಮತಿವಣನ್ ನಿರ್ದೇಶಿಸುತ್ತಿದ್ದಾರೆ.‌ ನನ್ನ ಅಣ್ಣ ಜಗ್ಗೇಶ್ ಅವರ ಸಹಕಾರವಿದೆ. ಅಸಿಯಾ ಫಿರ್ದೋಸಿ, ಸುಚೇಂದ್ರ ಪ್ರಸಾದ್,‌ ತಿಲಕ್ ಹಾಗೂ ನನ್ನ ಅಣ್ಣ ಜಗ್ಗೇಶ್ ಅವರ‌ ಪುತ್ರ ಯತಿರಾಜ್ ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸುತ್ತಿದ್ದಾರೆ.‌ ನಾನು ನಟಿಸಿರುವ 2020 ಚಿತ್ರ ಕೂಡ ಸದ್ಯದಲ್ಲೇ ತೆರೆಗೆ ಬರುತ್ತಿದೆ‌ ಎಂದು ಕೋಮಲ್ ಕುಮಾರ್ ವಿವರಣೆ ನೀಡಿದರು.kalaya namaha kannada new movie Komal Kumar

ಜ್ಯೋತಿಷ್ಯ ಯಾರು ನಂಬುತ್ತಾರೊ, ಬಿಡುತ್ತಾರೊ ನನಗ ಗೊತ್ತಿಲ್ಲ. ಆದರೆ ನನಗೆ ನಂಬಿಕೆಯಿದೆ. ಕೋಮಲ್ ಗೆ ಕೇತುದೆಸೆ ಇದೆ. 2022 ರವರೆಗೂ ಏನು ಮಾಡಬೇಡ ಅಂದಿದೆ. ಆತ ನನ್ನ ಮಾತು ಕೇಳಿ ಹಾಗೆ ನಡೆದುಕೊಂಡ. ಈಗ ಕಾಲಭೈರವನ ದಯೆಯಿಂದ ಈ‌ ಚಿತ್ರ ಆರಂಭಿಸಿದ್ದಾನೆ. ನನ್ನ‌ ಮಗ ಯತಿರಾಜ್ ಕೂಡ ಇದರಲ್ಲಿ ಅಭಿನಯಿಸುತ್ತಿದ್ದಾನೆ ಈ ತಂಡದಿಂದ ಒಳ್ಳೆಯ ಸಿನಿಮಾ ಬರುವ ವಿಶ್ವಾಸವಿದೆ.‌‌ ಒಳ್ಳೆಯದಾಗಲಿ ಎಂದರು ಜಗ್ಗೇಶ್.kalaya namaha kannada new movie Komal Kumar

“ಕಾಲಾಯ ನಮಃ” ಒಳ್ಳೆಯ ಕಥೆಯುಳ್ಳ ಚಿತ್ರ ಕೋಮಲ್ ಅವರ ಜೊತೆ ಕೆಲಸ ಮಾಡುತ್ತಿರುವುದು ಖುಷಿ ಎಂದು ನಿರ್ದೇಶಕ ಮತಿವಣನ್ ತಿಳಿಸಿದರು.ಧಾರಾವಾಹಿಯಲ್ಲಿ ನಟಿಸುತ್ತಿದ್ದ ನನಗೆ ಇದು ಮೊದಲ ಸಿನಿಮಾ ಎಂದರು ನಟಿ ಆಸಿಯಾ ಫಿರ್ದೋಸ್.ಚಿಕ್ಕಪ್ಪ ನನಗೆ ಒಳ್ಳೆಯ ಪಾತ್ರ ಕೊಟ್ಟಿದ್ದಾರೆ ಧನ್ಯವಾದ ಎಂದರು ಯತಿರಾಜ್. ನಟರಾದ ಸುಚೀಂದ್ರ ಪ್ರಸಾದ್ ಹಾಗೂ ತಿಲಕ್ ತಮ್ಮ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ನಿರ್ಮಾಪಕಿ ಅನಸೂಯ ಕೋಮಲ್ ಕುಮಾರ್, ಸಂಗೀತ ನಿರ್ದೇಶಕ ಎಮಿಲ್ ಹಾಗೂ ಛಾಯಾಗ್ರಾಹಕ ರಾಕೇಶ್ ಸಿ ತಿಲಕ್ ಚಿತ್ರದ ಕುರಿತು ಮಾತನಾಡಿದರು.kalaya namaha kannada new movie Komal Kumar

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…