Mr.ರಾಣಿ ಟೈಟಲ್ ಲಾಂಚ್ ಗೆ ಕಮಲ್ ಹಾಸನ್ ಎಂಟ್ರಿ….ನಿರ್ದೇಶಕರ ವಿರುದ್ಧ ಸಿಟ್ಟಿಗೆದ್ದೀಕೆ ನಿರ್ಮಾಪಕರು?

Kamal Haasan entry for Mr. Rani title launch

ಪ್ರತಿ ಸಿನಿಮಾದಲ್ಲೊಂದು ಗಟ್ಟಿ ಸಂದೇಶದ ಮೂಲಕ ಪ್ರೇಕ್ಷಕರ ಎದುರು ಹಾಜರಾಗುವ ಮಧುಚಂದ್ರ ಈಗ ಮತ್ತೆ ಬಂದಿದ್ದಾರೆ. ಈ ಬಾರಿಯೂ ಫ್ರೆಶ್ ಕಥೆಯನ್ನು ಹೊತ್ತು ಬಂದಿದ್ದಾರೆ. ಸದ್ಯಕ್ಕೆ ಕಥೆ ಬಗ್ಗೆ ಗುಟ್ಟುರಟ್ಟು ಮಾಡದ ವಾಸ್ಕೋಡಿಗಾಮಾ ಹಾಗೂ ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ ಡೈರೆಕ್ಟರ್ ಮಧುಚಂದ್ರ ತಮ್ಮ ಮುಂದಿನ ಚಿತ್ರದ ಟೈಟಲ್ ಅನಾವರಣ ಮಾಡಿದ್ದಾರೆ. ಅದು ಸಾಮಾನ್ಯವಾಗಿ ಅಲ್ಲವೇ ಅಲ್ಲ. ವಿಭಿನ್ನ.. ಹೀಗೂ ಟೈಟಲ್ ಲಾಂಚ್ ಮಾಡಬಹುದು ಅನ್ನುವುದು ತೋರಿಸಿದ್ದಾರೆ.Kamal Haasan entry for Mr. Rani title launch


ಕಮಲ್ ಹಾಸನ್ ಕರೆದುಕೊಂಡು ಬಂದು ಟೈಟಲ್ ಲಾಂಚ್ ಮಾಡಿಸುತ್ತೇನೆ ಅಂತಾ ನಿರ್ದೇಶಕರು ನಿರ್ಮಾಪಕರಿಗೆ ಪ್ರಾಮಿಸ್ ಮಾಡಿರ್ತಾರೆ. ಕಮಲ್ ಬರ್ತಿದ್ದಾರೆ ಅಂತಾ ಗೊತ್ತಾಗ್ತಿದ್ದಂತೆ ಇಡೀ ತಂಡ ಅವರಿಗೆ ಕಾತರದಿಂದ ಕಾಯ್ತಾ ಇರುತ್ತದೆ. ಆದರೆ ಕಹಾನಿ ಮೇ ಟ್ವಿಸ್ಟ್..ಅಲ್ಲಿ‌ ಕಮಲ್ ಹಾಸನ್ ಬಂದಲೂ ಬಂದಿದ್ದು ಬೇರೆಯವರು. ಕಾರ್ಯಕ್ರಮದ ಆಯೋಜಕರು ಕಮಲ್ ಹಾಸನ್ ಕರೆದುಕೊಂಡು ಬರ್ತಿನಿ ಅಂತಾ ಹಾಸನದಿಂದ ಕಮಲಾ ಎಂಬುವವರನ್ನು ಕರೆದುಕೊಂಡು ಬಂದು ಚೀಟ್ ಮಾಡಿರ್ತಾರೆ. ಬಳಿಕ ನಿರ್ದೇಶಕರಿಗೆ ನಿರ್ಮಾಪಕರೆಲ್ಲರೂ ಗೂಸಾ ಕೊಡ್ತಾರೆ. ಹೀಗೆ ತಮಾಷೆಯಾಗಿರುವ ವಿಡಿಯೋ ಮೂಲಕ ಚಿತ್ರದ ಶೀರ್ಷಿಕೆ ರಿವೀಲ್ ಮಾಡಲಾಗಿದೆ.Kamal Haasan entry for Mr. Rani title launch

ಮಧುಚಂದ್ರ ತಮ್ಮ ಹೊಸ ಪ್ರಯತ್ನಕ್ಕೆ Mr.ರಾಣಿ ಎಂಬ ಟೈಟಲ್ ಇಟ್ಟಿದ್ದಾರೆ. ಟೈಟಲ್ ಎಷ್ಟು ಕ್ರೇಜಿ ಆಗಿದೆಯೋ ಕಥೆ ಕೂಡ ಅಷ್ಟೇ ಕ್ರೇಜಿಯಾಗಿದೆ ಅನ್ನುತ್ತಾರೆ ಮಧುಚಂದ್ರ. Mr.ರಾಣಿ ಚಿತ್ರದಲ್ಲಿ ಲಕ್ಷ್ಮೀ ನಿವಾಸ ಸೀರಿಯಲ್ ಖ್ಯಾತಿಯ ದೀಪಕ್ ಸುಬ್ರಹ್ಮಣ್ಯ, ಪಾರ್ವತಿ ನಾಯರ್ ನಾಯಕ ಹಾಗೂ ನಾಯಕಿಯಾಗಿ ನಟಿಸಿದ್ದು, ಉಳಿದಂತೆ ಶ್ರೀವಸ್ತ, ರೂಪ ಪ್ರಭಾಕರ್, ಲಕ್ಷ್ಮೀ ಕಾರಂತ್, ಮಧುಚಂದ್ರ, ಆನಂದ್, ಚಕ್ರವರ್ತಿ ದಾವಣಗೆರೆ ತಾರಾಬಳಗದಲ್ಲಿದ್ದಾರೆ.Kamal Haasan entry for Mr. Rani title launch

ಎಕ್ಸೆಲ್ ಆರ್ಬಿಟ್ ಕ್ರಿಯೇಷನ್ಸ್ ನಡಿ ಮಧುಚಂದ್ರ ಕಥೆ ಬರೆದು ನಿರ್ದೇಶಿಸುತ್ತಿರುವ Mr.ರಾಣಿ ಜೂಡಾ ಸ್ಯಾಂಡಿ ಸಂಗೀತ, ರವೀಂದ್ರನಾಥ್ ಟಿ ಛಾಯಾಗ್ರಹಣ ಹಾಗೂ ಮಧು ತುಂಬಕೆರೆ ಸಂಕಲನ ಚಿತ್ರಕ್ಕಿದೆ. ಶೂಟಿಂಗ್ ಮುಗಿಸಿರುವ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ನಲ್ಲಿ ಬ್ಯುಸಿಯಾಗಿದೆ. ಅಂದಹಾಗೇ Mr.ರಾಣಿ ಕ್ರೌಡ್ ಫಂಡೆಂಡ್ ಸಿನಿಮಾ, 100ಕ್ಕೂ ಹೆಚ್ಚು ಜನ ಸೇರಿ ಚಿತ್ರ ನಿರ್ಮಾಣ ಮಾಡಿದ್ದಾರೆ

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…