ಪ್ರಭಾಸ್ ‘ಪ್ರಾಜೆಕ್ಟ್‌ K’ ಸಿನಿಮಾದಲ್ಲಿ ಕಮಲ್ ಹಾಸನ್…ಹೇಗಿರಲಿದೆ ಉಳಗನಾಯಗನ್ ಪಾತ್ರ?

Kamal Haasan's Ulaganayagan role in Prabhas' 'Project K' movie?

ಡಾರ್ಲಿಂಗ್ ಪ್ರಭಾಸ್, ಬಿಗ್ ವಿ ಅಮಿತಾಬ್ ಬಚ್ಚನ್, ದೀಪಿಕಾ ಪಡುಕೋಣೆ, ದಿಶಾ ಪಠಾಣಿ ನಟಿಸುತ್ತಿರುವ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಪ್ರಾಜೆಕ್ಟ್ K. ಮುಂದಿನ ವರ್ಷದ ಸಂಕ್ರಾಂತಿ ಹಬ್ಬಕ್ಕೆ ತೆರೆಗೆ ಬರಲಿರುವ ಈ ಚಿತ್ರದಿಂದ ಕ್ರೇಜಿ ಅಪ್ ಡೇಟ್ ವೊಂದು ಹೊರಬಿದಿದ್ದೆ. ಎಲ್ಲರ ನಿರೀಕ್ಷೆಯಂತೆ ಉಳಗನಾಯಗನ್ ಕಮಲ್ ಹಾಸನ್ ಪ್ರಾಜೆಕ್ಟ್ K ಭಾಗವಾಗಿದ್ದಾರೆ. ಸ್ಪೆಷಲ್ ವಿಡಿಯೋ ಝಲಕ್ ಮೂಲಕ ಕಮಲ್ ಎಂಟ್ರಿ ಬಗ್ಗೆ ಚಿತ್ರತಂಡ ಅಧಿಕೃತ ಮಾಹಿತಿ ನೀಡಿದೆ. ಕಳೆದೊಂದು ತಿಂಗಳಿನಿಂದ ಪ್ರಾಜೆಕ್ಟ್ K ಸಿನಿಮಾದಲ್ಲಿ ಕಮಲ್ ಹಾಸನ್ ಪ್ರಭಾಸ್ ಎದುರು ವಿಲನ್ ಆಗಿ ನಟಿಸಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು.Kamal Haasan's Ulaganayagan role in Prabhas' 'Project K' movie?

ಅದರಂತೆ ಈಗ ಚಿತ್ರತಂಡ ಕಮಲ್ ಎಂಟ್ರಿ ಬಗ್ಗೆ ಘೋಷಿಸಿದೆ. ಆದರೆ ಪ್ರಭಾಸ್ ಗೆ ಉಳಗನಾಯಗನ್ ಖಳನಾಯಕ ಅನ್ನೋದರ ಬಗ್ಗೆ ಗುಟ್ಟು ಬಿಟ್ಟು ಕೊಟ್ಟಿಲ್ಲ. ಪ್ರಮುಖ ಪಾತ್ರವೊಂದರಲ್ಲಿ ಕಮಲ್ ಹಾಸನ್ ನಟಿಸಲಿದ್ದಾರೆ ಎಂದಷ್ಟೇ ತಿಳಿಸಿದೆ.Kamal Haasan's Ulaganayagan role in Prabhas' 'Project K' movie?

ಪ್ರಾಜೆಕ್ಟ್ K ಸಿನಿಮಾದಲ್ಲಿ ನಟಿಸುತ್ತಿರುವುದರ ಬಗ್ಗೆ ಕಮಲ್ ಹಾಸನ್ ಮಾತನಾಡಿ, ನಾನು 50 ವರ್ಷದ ಹಿಂದೆ ನೃತ್ಯ ಸಹಾಯಕ ಮತ್ತು ಸಹಾಯಕ ನಿರ್ದೇಶಕನಾಗಿದ್ದಾಗ ನಿರ್ಮಾಣ ವಲಯದಲ್ಲಿ ಅಶ್ವಿನಿ ದತ್ ಹೆಸರು ದೊಡ್ಡ ಮಟ್ಟದಲ್ಲಿ ಖ್ಯಾತಿಗೊಳಿಸಿತ್ತು. ಐವತ್ತು ವರ್ಷದ ನಂತರ ನಾವು ಒಂದಾಗುತ್ತಿದ್ದೇವೆ. ಇಂದಿನ ಪೀಳಿಗೆಯ ಅದ್ಭುತ ನಿರ್ದೇಶಕ ನಾಗ್ ಅಶ್ವಿನ್, ನನ್ನ ಸಹನಟರಾದ ಪ್ರಭಾಸ್, ದೀಪಿಕಾ ಪಡುಕೋಣೆ, ಅಮಿತಾಬ್ ಜಿ ಜೊತೆ ನಟಿಸುತ್ತಿರುವುದು ಖುಷಿಕೊಟ್ಟಿದೆ. ಪ್ರಾಜೆಕ್ಟ್ K ಸಿನಿಮಾಗಾಗಿ ನಾನು ಕುತೂಹಲದಿಂದ ಕಾಯುತ್ತಿದ್ದೇನೆ ಎಂದರು.Kamal Haasan's Ulaganayagan role in Prabhas' 'Project K' movie?

ನಿರ್ಮಾಪಕ ಅಶ್ವಿನಿ ದತ್, ಸುದೀರ್ಘವಾದ ವೃತ್ತಿ ಜೀವನದಲ್ಲಿ ‌ನಿಮ್ಮೊಟ್ಟಿಗೆ ಕೆಲಸ ಮಾಡುವುದು ನನ್ನ ಕನಸಾಗಿತ್ತು. ಪ್ರಾಜೆಕ್ಟ್ ಕೆ ಮೂಲಕ ಅದು ನನಸಾಗಿದೆ. ಕಮಲ್ ಹಾಸನ್-ಅಮಿತಾಬ್ ಜಿ ಅವರೊಟ್ಟಿಗಿನ ಕೆಲಸ ಮಾಡುವ ಅವಕಾಶ ದೊರೆತಿರುವುದು ನನಗೆ ಆಶೀರ್ವಾದ ಎಂದರು.Kamal Haasan's Ulaganayagan role in Prabhas' 'Project K' movie?

ನಿರ್ದೇಶಕ ನಾಗ್ ಅಶ್ವಿನ್, ಕಮಲ್ ಸರ್ ಜೊತೆ ಕೆಲಸ ಮಾಡಲು ಉತ್ಸುಕರಾಗಿದ್ದೇನೆ. ನಮ್ಮ ಜಗತ್ತನ್ನು ಪೂರ್ಣಗೊಳಿಸಲು ಅವರು ಒಪ್ಪಿಕೊಂಡಿರುವುದು ಸಂತಸ ಎಂದರು. ವೈಯಂತಿ ಮೂವೀಸ್ ಬ್ಯಾನರ್‌ನಲ್ಲಿ ಅದ್ಧೂರಿಯಾಗಿ ಮೂಡಿ ಬರುತ್ತಿರುವ ಮಲ್ಟಿ ಸ್ಟಾರ್ ಪ್ರಾಜೆಕ್ಟ್ ಕೆ ಸಿನಿಮಾಗೆ ಮಹಾನಟಿ ಸಿನಿಮಾ ಖ್ಯಾತಿಯ ನಾಗ್ ಅಶ್ವಿನ್ ಆಕ್ಷನ್ ಕಟ್ ಹೇಳಿದ್ದಾರೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…