ಮುಂದಿನ ತಿಂಗಳು ಕಂಬ್ಳಿಹುಳ’ ಬಿಡುಗಡೆ

kambli hula movie next month release

ಸಿನಿಮಾರಂಗ ಬಹಳ ಬೇಗ ಎಲ್ಲರನ್ನು ಆಕರ್ಷಿಸುತ್ತೆ. ಕೆಲವರಿಗೆ ನಟರಾಗುವ ಆಸೆ, ಇನ್ನೂ ಕೆಲವರಿಗೆ ನಿರ್ದೇಶಕರಾಗುವ, ಕಲಾವಿದರಾಗುವ ಆಸೆ. ಒಟ್ಟಿನಲ್ಲಿ ಬಣ್ಣದ ಲೋಕದಲ್ಲಿ ಏನಾದರೂ ಸಾಧಿಸುವ ಕನಸು. ಆ ಕನಸುಗಳುಳ್ಳ ಸಿನಿಮಾ ಪ್ರೀತಿಯುಳ್ಳ ಒಂದಿಷ್ಟು ಸಮಾನ ಮನಸ್ಕರು ಸೇರಿ ಮಾಡಿರುವ ನವಿರಾದ ಪ್ರೇಮಕಥೆಯುಳ್ಳ ಚಿತ್ರ ‘ಕಂಬ್ಳಿಹುಳ’. ಟೈಟಲ್ ಮೂಲಕವೇ ಚಂದನವನ ಹಾಗೂ ಸಿನಿರಸಿಕರ ಮನಸ್ಸಲ್ಲಿ ಒಂದಿಷ್ಟು ಕುತೂಹಲ ಮೂಡಿಸಿದೆ. ಚೆಂದದ ಹಾಡಿನ ಮೂಲಕ ಎಲ್ಲರ ಗಮನ ತನ್ನತ್ತ ಸೆಳೆದ ಚಿತ್ರತಂಡವೀಗ ಟ್ರೇಲರ್ ಬಿಡುಗಡೆ ಮಾಡಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಯುವ ಪ್ರತಿಭೆಗಳಿಗೆ ಬೆನ್ನುತಟ್ಟಿ ಚಿತ್ರದ ಭರವಸೆಯುಳ್ಳ ಟ್ರೇಲರ್ ಬಿಡುಗಡೆ ಮಾಡಿ ಶುಭ ಹಾರೈಸಿದ್ದಾರೆ. ಕಾರ್ಯಕ್ರಮದಲ್ಲಿ ನಟ ಪ್ರವೀಣ್ ತೇಜ್, ನಿರ್ದೇಶಕ ಸತ್ಯ ಪ್ರಕಾಶ್ ಭಾಗಿಯಾಗಿ ಚಿತ್ರತಂಡಕ್ಕೆ ಪ್ರೋತ್ಸಾಹ ನೀಡಿದ್ರು.kambli hula movie next month release

ಟ್ರೇಲರ್ ಬಿಡುಗಡೆ ಮಾಡಿ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಸಿನಿಮಾ ಮಾಯಾಜಗತ್ತು ಸಿಹಿ ಕಹಿ ಎಲ್ಲವೂ ಇದರಲ್ಲಿರುತ್ತೆ. ಒಂದು ಹೋರಾಟದ ಮನೋಭಾವ ಇದ್ದಾಗ ಮಾತ್ರ ಸಿನಿಮಾ ಮಾಡಲು ಸಾಧ್ಯ ಈ ಚಿತ್ರದ ನಿರ್ಮಾಪಕರಲ್ಲಿಯೂ ಅಂತಹದ್ದೊಂದು ಹೋರಾಟದ ಮನೋಭಾವ ಇದ್ದಿದ್ದರಿಂದ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಮಲೆನಾಡಿನ ಯುವಕರು ತಾವು ಬೆಳೆದಂತ ಊರು, ಪರಿಸರ, ಬದುಕು ಇವುಗಳ ಆಧಾರ ಮೇಲೆ ಕಥೆ ಕಟ್ಟಿ ಸಿನಿಮಾ ಮಾಡುತ್ತಾರೆ. ನೈಜತೆಯಿಂದ ಕೂಡಿರುವ ‘ಕಂಬ್ಳಿಹುಳ’ ಸಿನಿಮಾ ಟ್ರೇಲರ್ ನೋಡಿದಾಗ ನನಗೂ ಅದೇ ಅನಿಸಿದ್ದು, ಖಂಡಿತಾ ಸಿನಿಮಾ ಯಶಸ್ಸು ಆಗುತ್ತೆಂದು ಚಿತ್ರತಂಡಕ್ಕೆ ಪ್ರೋತ್ಸಾಹ ನೀಡಿದ್ರು.

ಕಿರುಚಿತ್ರಗಳನ್ನು ನಿರ್ದೇಶಿಸಿ ಅನುಭವವಿರುವ ನಿರ್ದೇಶಕ ನವನ್ ಶ್ರೀನಿವಾಸ್ ನಿರ್ದೇಶನದ ಮೊದಲ ಸಿನಿಮಾ ಇದು. ಮಲೆನಾಡು ಭಾಗದಲ್ಲಿ ನಡೆಯುವ ಕಥೆ ಚಿತ್ರದಲ್ಲಿದೆ. ಶೃಂಗೇರಿ, ಸಕಲೇಶಪುರ, ತೀರ್ಥಹಳ್ಳಿ, ಸುತ್ತಮುತ್ತ ‘ಕಂಬ್ಳಿಹುಳ’ ಚಿತ್ರೀಕರಣ ನಡೆಸಲಾಗಿದೆ. ಎಮೋಷನಲ್ ಜರ್ನಿ ಸಿನಿಮಾ ಇದಾಗಿದ್ದು ರಂಗಭೂಮಿ ಕಲಾವಿದ ಅಂಜನ್ ನಾಗೇಂದ್ರ ಹಾಗೂ ಅಶ್ವಿತಾ ಆರ್ ಹೆಗ್ಡೆ ಚಿತ್ರದ ನಾಯಕ, ನಾಯಕಿಯಾಗಿ ನಟಿಸಿದ್ದಾರೆ.kambli hula movie next month release

ಚಿತ್ರದ ನಿರ್ದೇಶಕ ನವನ್ ಶ್ರೀನಿವಾಸ್ ಮಾತನಾಡಿ ಇಡೀ ಸಿನಿಮಾ ತಂಡ ಹೊಸಬರಿಂದ ಕೂಡಿದ್ದರಿಂದ 90 ದಿನಗಳ ಕಾಲ ಚಿತ್ರೀಕರಣ ನಡೆಸಿದ್ದೇವು. ಇದೀಗ ಅಷ್ಟು ದಿನಗಳ ಶ್ರಮ ನವೆಂಬರ್ 4ರಂದು ತೆರೆ ಮೇಲೆ ಅನಾವರಣಗೊಳ್ಳುತ್ತಿದೆ. ಮಲೆನಾಡು ಭಾಗದಲ್ಲಿ ನಡೆಯುವ ಪ್ರೇಮಕಥೆ ಇದು. ನಾನು ಕೂಡ ಮಲೆನಾಡಿನವನಾದ್ದರಿಂದ ಈಸಿಯಾಗಿ ಹೇಳಬಹುದೆಂದು ಆ ಭಾಗದ ಕಥೆಯನ್ನೇ ಆಯ್ಕೆ ಮಾಡಿಕೊಂಡೆ. ಖಂಡಿತಾ ಸಿನಿಮಾ ಎಲ್ಲರಿಗೂ ಒಳ್ಳೆಯ ಫೀಲ್ ಕೊಡಲಿದೆ ಎಂದು ತಿಳಿಸಿದ್ರು.

ನಾಯಕ ಅಂಜನ್ ನಾಗೇಂದ್ರ ಮಾತನಾಡಿ ಕಂಬ್ಳಿಹುಳ ನನಗೆ ಹೊಸ ಜೀವನ ಕೊಟ್ಟಂತ ಸಿನಿಮಾ. ನಿರ್ದೇಶಕರಿಗೆ ನನಗೆ ಯಾವುದಾದರೂ ಪಾತ್ರ ಕೊಡಿ ಮಾಡುತ್ತೇನೆ ಎಂದಿದ್ದೆ ಒಂದಷ್ಟು ದಿನಗಳ ನಂತರ ಈ ಸಿನಿಮಾದಲ್ಲಿ ಹೀರೋ ಪಾತ್ರ ಮಾಡಬೇಕು ಎಂದ್ರು. ನಾನು ರಂಗಭೂಮಿ ಕಲಾವಿದನಾದ್ದರಿಂದ ಸಿನಿಮಾ ನಟನೆಗೆ ಹೊಂದಿಕೊಳ್ಳಲು ಒಂದಿಷ್ಟು ವರ್ಕ್ ಶಾಪ್ ಮಾಡಿ ನಟಿಸಿದ್ದೇನೆ. ಇಲ್ಲಿವರೆಗೆ ನಮ್ಮ ಸಿನಿಮಾಗೆ ಹೇಗೆ ಸಪೋರ್ಟ್ ಮಾಡಿದ್ದೀರಾ ಹಾಗೆಯೇ ಬಿಡುಗಡೆಯಾದ ಮೇಲು ಪ್ರೀತಿ ತೋರಿಸಿ ಪ್ರೋತ್ಸಹಿಸಿ ಎಂದ್ರು.

ಚಿತ್ರದ ನಾಯಕಿ ಅಶ್ವಿತಾ ಆರ್ ಹೆಗ್ಡೆ ಮಾತನಾಡಿ ಚಿತ್ರದಲ್ಲಿ ಮಲೆನಾಡಿನಲ್ಲಿ ವಾಸವಾಗಿರುವ ಮಲಯಾಳಿ ಹುಡುಗಿಯ ಪಾತ್ರ ನಿರ್ವಹಿಸುತ್ತಿದ್ದೇನೆ. ಮೂಲತಃ ನಾನು ರಂಗಭೂಮಿ ಕಲಾವಿದೆ. ನಮ್ಮೆಲ್ಲರಿಗೂ ಚಿತ್ರರಂಗ ಹೊಸತು. ಒಂದೊಳ್ಳೆ ಸಿನಿಮಾ ಮಾಡಿದ್ದೇವೆ. ಹೊಸಬರ ಸಿನಿಮಾ ನೋಡಿ ಹಾರೈಸಿ. ಅವಕಾಶ ನೀಡಿದ್ದಕ್ಕಾಗಿ ಚಿತ್ರದ ನಿರ್ದೇಶಕರಿಗೆ ನಾನು ಥ್ಯಾಂಕ್ಸ್ ಹೇಳುತ್ತೇನೆ ಎಂದು ತಿಳಿಸಿದ್ರು.kambli hula movie next month release

ಗ್ರೇ ಸ್ಕ್ವೇರ್ ಸ್ಟುಡಿಯೋಸ್ ಬ್ಯಾನರ್ ನಡಿ ನಿರ್ಮಾಣವಾಗಿರುವ ಈ ಚಿತ್ರ ನೈಜ ಘಟನೆಯಾಧಾರಿತ ಸಿನಿಮಾ. ಚಿತ್ರದಲ್ಲಿ ರೋಹಿತ್ ಕುಮಾರ್, ದೀಪಕ್ ರೈ ಪಣಜೆ, ಸಂಧ್ಯಾ ಅರಕೆರೆ, ಸಂಪತ್ ಶೆಟ್ಟಿ ಸೇರಿದಂತೆ ಹಲವು ಯುವ ಪ್ರತಿಭೆಗಳು ನಟಿಸಿದ್ದಾರೆ. ವಿಜಯ್, ಸವೀನ್, ಪುನೀತ್ ಹಾಗೂ ಗುರು ಚಿತ್ರಕ್ಕೆ ಬಂಡವಾಳ ಹೂಡಿದ್ದು, ಸತೀಶ್ ರಾಜೇಂದ್ರನ್ ಛಾಯಾಗ್ರಾಹಣ, ಜಿತೇಂದ್ರ ನಾಯಕ ಮತ್ತು ರಾಘವೇಂದ್ರ ಟಿಕೆ ಸಂಕಲನ, ಶಿವ ಪ್ರಸಾದ್ ಸಂಗೀತ ನಿರ್ದೇಶನ ‘ಕಂಬ್ಳಿಹುಳ’ ಚಿತ್ರಕ್ಕಿದೆ. ನವೆಂಬರ್ 4ರಂದು ಸಿನಿಮಾ ರಾಜ್ಯಾದ್ಯಂತ ತೆರೆ ಕಾಣುತ್ತಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…