ಮೇ 20 ರಿಂದ ಚಿತ್ರಮಂದಿರಗಳಲ್ಲಿ “ಕಂಡ್ಹಿಡಿ ನೋಡನ”

ಚಿತ್ರ ಬಿಡುಗಡೆಗೂ ಮುನ್ನ ಟ್ರೇಲರ್ ಮಾಡುತ್ತಿದೆ ಭಾರಿ ಸದ್ದು.


ಶಶಿಕುಮಾರ್, ದಿವ್ಯಚಂದ್ರಧರ, ಯೋಗೇಶ್ ಕೆ ಗೌಡ ನಿರ್ಮಾಣದ, ಎಸ್ ಕೆ ನಾಗೇಂದ್ರ ಅರಸ್ ನಿರ್ದೇಶನದ ಮತ್ತು ಪ್ರಣವ ಸೂರ್ಯ ಅಭಿನಯದ
“ಕಂಡ್ಡಿಡಿ ನೋಡನ” ಚಿತ್ರ ಮೇ ಇಪ್ಪತ್ತರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ನಡೆಯಿತು. ನಿರ್ಮಾಪಕರಾದ ಕೆ.ಮಂಜು, ರಮೇಶ್ ರೆಡ್ಡಿ ಹಾಗೂ ಸೋಗೂರು ಕುಮಾರ್ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.WhatsApp Image 2022 05 10 at 9.09.44 AM 2

ನಮ್ಮ ಸಿನಿಮಾ ಬಗ್ಗೆ ನಾವೇ ಜಾಸ್ತಿ ಹೇಳಿಕೊಳ್ಳುವುದು ಸೂಕ್ತವಲ್ಲ. ಜನ ಹೇಳಬೇಕು. ಟ್ರೇಲರ್ ಗೆ ಸಿಗುತ್ತಿರುವ ಪ್ರಶಂಸೆಗೆ ಮನ ತುಂಬಿ ಬಂದಿದೆ. ನಿರ್ದೇಶನಕ್ಕೆ ಅವಕಾಶ ಕೊಟ್ಟ ನಿರ್ಮಾಪಕರಿಗೆ, ಪ್ರಣವ್ ಸೂರ್ಯ ಅವರಿಗೆ ಧನ್ಯವಾದ ಎಂದರು ನಿರ್ದೇಶಕ ನಾಗೇಂದ್ರ ಅರಸ್WhatsApp Image 2022 05 10 at 9.09.44 AM

ನಾನು ನಟನಾಗಬೇಕೆಂದು ಆಸೆ ಹೊತ್ತು ಬಂದವನಲ್ಲ. ಉತ್ತಮ ತಂತ್ರಜ್ಞನಾಗಬೇಕೆಂಬುದೆ ನನ್ನ ಹಂಬಲ. ಅನಿರೀಕ್ಷಿತವಾಗಿ “ಸೈಕೋ ಶಂಕರ” ಚಿತ್ರದ ಮೂಲಕ ನಾಯಕನಾದೆ. ಇದು ನನ್ನ ಎರಡನೇ ಸಿನಿಮಾ.‌ ಕಥೆ ಚೆನ್ನಾಗಿದೆ. ಇಪ್ಪತ್ತನೇ ತಾರೀಖು ತೆರೆಗೆ ಬರುತ್ತಿದೆ. ನಮ್ಮ ತಂಡವನ್ನು ಹರಸಲು ಬಂದಿರುವ ಅತಿಥಿಗಳಿಗೆ ಧನ್ಯವಾದ. ನಿಮ್ಮ ಪ್ರೋತ್ಸಾಹವಿರಲಿ ಎಂದರು ನಾಯಕ ಪ್ರಣವ್ ಸೂರ್ಯ.WhatsApp Image 2022 05 10 at 9.09.43 AM

ನನ್ನ ಮೊದಲ ಚಿತ್ರ. ಚೆನ್ನಾಗಿ ಮೂಡಿಬಂದಿದೆ. ನಮ್ಮ ಚಿತ್ರವನ್ನು ಬೆಂಬಲಿಸಿ ಎಂದರು ನಾಯಕಿ ಪ್ರಿಯಾಂಕ.‌ ನನಗೆ ಚಿಕ್ಕ ವಯಸ್ಸಿನಿಂದ ಸಿನಿಮಾ ಮಾಡುವ ಆಸೆ. ಅದು ಈಗ ಕೂಡಿಬಂದಿದೆ. ಸ್ನೇಹಿತೆ ದಿವ್ಯ ಅವರು ಬಂದು ಈ ಸಿನಿಮಾ ಬಗ್ಗೆ ಹೇಳಿದಾಗ ಕಥೆ ಮೆಚ್ಚುಗೆಯಾಗಿ ನಿರ್ಮಾಣಕ್ಕೆ ಮುಂದಾದೆ ಎನ್ನುತ್ತಾರೆ ನಿರ್ಮಾಪಕ ಶಶಿಕುಮಾರ್.

ನಾನು ಮೂಲತಃ ವಿಜ್ಞಾನಿ. ಕಥೆ ಇಷ್ಟವಾಯಿತು. ಸಿನಿಮಾ ಮಾಡಿದ್ದೀವಿ ದಯವಿಟ್ಟು ಪ್ರೋತ್ಸಾಹ ನೀಡಿ ಎಂದರು ನಿರ್ಮಾಪಕಿ ದಿವ್ಯ ಚಂದ್ರಧರ್. ಮತ್ತೊಬ್ಬ ನಿರ್ಮಾಪಕ ಯೋಗೇಶ್ ಸಹ ಚಿತ್ರಕ್ಕೆ ಎಲ್ಲರ ಬೆಂಬಲ ಕೋರಿದರು. ಈ ಚಿತ್ರದಲ್ಲಿ ತಾಯಿ-ಮಗನ ಬಾಂಧವ್ಯದ ಸನ್ನಿವೇಶಗಳು ಸೊಗಸಾಗಿದೆ. ನಾನು ನಾಯಕನ‌ ತಾಯಿಯಾಗಿ ಕಾಣಿಸಿಕೊಂಡಿದ್ದೀನಿ ಎಂದರು ನಟಿ ಗಿರಿಜಾ ಲೋಕೇಶ್.

ಸಂಗೀತ ನಿರ್ದೇಶಕ ಶ್ರೀಧರ್ ಕಶ್ಯಪ್ ಸಂಗೀತದ ಕುರಿತು,‌ ವಿಶ್ವ ಸಂಕಲನದ ಬಗ್ಗೆ ಮಾತನಾಡಿದರು. ಚಿತ್ರದಲ್ಲಿ ಮಂತ್ರಿಯಾಗಿ ಕಾಣಿಸಿಕೊಂಡಿರುವ ಮಂಜುರಾಜ್ ಸೂರ್ಯ, ಗಗನ, ಆದರ್ಶ ತಮ್ಮ ಪಾತ್ರದ ಬಗ್ಗೆ ಮಾಹಿತಿ ನೀಡಿದರು.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…