ಇರಾನ್ ನಲ್ಲಿ ಕನ್ನಡದ “ಕುಗ್ರಾಮ” ಚಿತ್ರ

Kannada Kugrama film in Iran

ಅಂತರ ರಾಷ್ಟ್ರೀಯ ಮಟ್ಟದಲ್ಲಿ ಮತ್ತೊಮ್ಮೆ ಪ್ರದರ್ಶನಕ್ಕೆ ಆಯ್ಕೆಯಾಗಿದೆ ಕುಗ್ರಾಮ ಚಿತ್ರ. ಲೋಕೇಂದ್ರ ಸೂರ್ಯ ರಚನೆ ಮತ್ತು ನಿರ್ದೇಶನದ ಕುಗ್ರಾಮ ಚಿತ್ರವು ಆರ್ ಡಿ ಎಂಟರ್ ಪ್ರೈಸಸ್ ಅಡಿಯಲ್ಲಿ, ನಿರ್ಮಾಪಕ ರಾಜು ಕಲ್ಲುಣಿ ಯವರು ನಿರ್ಮಿಸಿದ್ದಾರೆ. Kannada Kugrama film in Iran ಈ ಮೊದಲು ಸಿಂಗಾಪೂರ್ , ಇಥಿಲೋಫಿಯ , ಯು ಕೆ, ಭಾರತ ಸೇರಿದಂತೆ ಇನ್ನೂ ಅನೇಕ ರಾಷ್ಟ್ರಗಳಲ್ಲಿ ಚಿತ್ರವೂ ಕಾಂಪಿಟೇಷನ್ ನಲ್ಲಿ ಭಾಗವಹಿಸಿ ಪ್ರಶಸ್ತಿಯನ್ನು ಪಡೆದುಕೊಂಡಿತ್ತು. ಈಗ ಇರಾನ್ ದೇಶದ ಪ್ರಸಿದ್ಧ ಚಿತ್ರೋತ್ಸವದಲ್ಲಿ ಆಯ್ಕೆಯಾಗಿ ಮತ್ತೊಂದು ದೇಶಿಗರನ್ನು ಸ್ಪರ್ಶಿಸಲಿದೆ. Kannada Kugrama film in Iran

ಕಲಾತ್ಮಕ ಚಿತ್ರಗಳ ನಿರ್ಮಾಣದಲ್ಲಿ ಇರಾನ್ ದೇಶ ಸದಾ ಮುಂಚೂಣಿಯಲ್ಲಿ ಇರುತ್ತದೆ. ಇರಾನ್ ದೇಶದ ಸಿನಿಮಾಗಳು ಜಗತ್ತಿನಾದ್ಯಂತ ಗಮನ ಸೆಳೆದಿವೆ, ನಮ್ಮ ಬೆಂಗಳೂರು ಅಂತರ್ ರಾಷ್ಟ್ರೀಯ ಚಿತ್ರೋತ್ಸವದಲ್ಲಿಯೂ ಅತಿ ಹೆಚ್ಚು ಪ್ರೇಕ್ಷಕರನ್ನು ಸೆಳೆಯುವ ಚಿತ್ರಗಳು ಇರಾನ್, ಅರಭ್, ಮತ್ತು ಕೊರಿಯನ್ ಮೂಲದ ಚಿತ್ರಗಳಾಗಿರುತ್ತವೆ. ಅಲ್ಲಿನ ಜನಗಳ ಅಭಿರುಚಿಗೆ ಉತ್ತಮ ಕಥಾ ವಸ್ತು, ನೈಜತೆಯ ಚಿತ್ರಗಳು ಮಾತ್ರ ರುಚಿಸುತ್ತವೆ. Kannada Kugrama film in Iran

ಕುಗ್ರಾಮ ಚಿತ್ರವೂ ಅಂತಹ ಉತ್ತಮ ಕಥೆಯನ್ನು ಹೊಂದಿದ್ದು ನೈಜವಾಗಿ ಪ್ರೇಕ್ಷಕರನ್ನು ಸೆಳೆಯುತ್ತಿದೆ. ಇಲ್ಲವಾದರೆ ಇರಾನ್ ದೇಶದ ವೇದಿಕೆಯಲ್ಲಿ ಕುಗ್ರಾಮ ಚಿತ್ರಕ್ಕೆ ಮನ್ನಣೆ ಸಿಗುತ್ತಿರಲಿಲ್ಲ ಎಂಬುದು ಸಹಜವಾಗಿಯೇ ತಿಳಿಯುತ್ತದೆ. ಹಲವು ದೇಶಗಳಲ್ಲಿ ಪ್ರದರ್ಶನ ಕಂಡ ಕುಗ್ರಾಮ ಚಿತ್ರಕ್ಕೆ ಬೆಂಗಳೂರು ಚಿತ್ರೋತ್ಸವದಲ್ಲಿ ಅನ್ಯಾಯ ವಾಗಿದೆ ಎಂಬುದು ನಿರ್ದೇಶಕರ ಅಸಮಾಧಾನದ ಮಾತುಗಳಿಂದ ತಿಳಿದು ಬರುತ್ತದೆ. ಕುಗ್ರಾಮ ಚಿತ್ರವು ಮತ್ತಷ್ಟು ದೇಶಗಳಲ್ಲಿ ಪ್ರದರ್ಶನ ಕಾಣುವ ಭರವಸೆಯನ್ನು ಚಿತ್ರ ತಂಡ ಹೊಂದಿದ್ದು, ಕನ್ನಡದ ಚಿತ್ರಕ್ಕೆ ವಿವಿಧ ದೇಶಗಳಲ್ಲಿ ಮತ್ತಷ್ಟು ಮಾನ್ಯತೆ ದೊರಕಲಿ ಎಂದು ಆಶಿಸುತ್ತೇವೆ. Kannada Kugrama film in Iran

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…