ಬೋರೇಗೌಡನ ಬೆನ್ನಿಗೆ ನಿಲ್ಲದ ಕನ್ನಡದ ಸ್ಟಾರ್ಗಳು

Kannada stars who do not stand behind Boregowda

ಎಲ್ಲ ಸಿನಿಮಾಗಳೂ ಕೆಜಿಎಫ್ಫು, ಕಾಂತಾರಾನೇ ಆಗಲು ಸಾಧ್ಯವಿಲ್ಲ. ಒಂದೊಂದು ಸಿನಿಮಾದಲ್ಲೂ ಒಂದೊಂದು ಬಗೆಯ ಕಂಟೆಂಟ್ ಇರುತ್ತದೆ. ಉತ್ತಮ ಸಿನಿಮಾ ಅನ್ನಿಸಿದಾಗ ಅದನ್ನು ಜನ ಮೆಚ್ಚಿ ನೋಡಿದಾಗಲೇ ಅವು ಹಿಟ್ ಅನ್ನಿಸಿಕೊಳ್ಳೋದು. ಬರುವ ಎಲ್ಲ ಸಿನಿಮಾಗಳೂ ಗುಣಮಟ್ಟ ಹೊಂದಿರೋದಿಲ್ಲ ಅನ್ನೋದೂ ನಿಜ. ಆದರೆ ಅಲ್ಲೊಂದು ಇಲ್ಲೊಂದು ಕ್ವಾಲಿಟಿ ಚಿತ್ರಗಳು ಬಂದಾಗ ಅದನ್ನು ಪ್ರೋತ್ಸಾಹಿಸಬೇಕಿರುವುದು ಬರಿಯ ಪ್ರೇಕ್ಷಕರ ಜವಾಬ್ದಾರಿ ಮಾತ್ರವಲ್ಲ, ಇಂಡಸ್ಟ್ರಿ ಕೂಡಾ ಸಾಥ್ ನೀಡಬೇಕು. ಎಲ್ಲೋ ಕೆಲವು ಸಿನಿಮಾಗಳಿಗೆ ಕಿಚ್ಚ, ರಕ್ಷಿತ್ ಶೆಟ್ಟರ ಥರದವರು ಬಂದು ಕೈ ಹಿಡಿದ ಉದಾಹರಣೆಗಳಿವೆ. ಅದನ್ನು ಬಿಟ್ಟು ಕನ್ನಡದ ಬೇರೆ ಯಾವ ಹೀರೋಗಳೂ ಗುಣಮಟ್ಟದ ಸಿನಿಮಾಗಳು ಬಂದಾಗ ಅದರ ಬೆನ್ನಿಗೆ ನಿಂತು ಗೆಲ್ಲಿಸಿದ್ದು ಕಡಿಮೆ. ತಾವಾಯಿತು, ತಮ್ಮ ಪಾಡಾಯಿತು, ಯಾರು ಗೆದ್ದರೆಷ್ಟು? ಬಿಟ್ಟರೆಷ್ಟು ಎನ್ನುವ ಮನಸ್ಥಿತಿಯ ಸ್ಟಾರುಗಳೇ ಇಲ್ಲಿ ಹೆಚ್ಚು!Kannada stars who do not stand behind Boregowda

ಸದ್ಯ ಕನ್ನಡದಲ್ಲಿ ದೊಡ್ಡಟ್ಟಿ ಬೋರೇಗೌಡ ಎನ್ನುವ ಸಿನಿಮಾವೊಂದು ತೆರೆ ಕಂಡಿದೆ. ನಿಜಕ್ಕೂ ಈ ನೆಲದ ಘಮಲಿನ ಸಿನಿಮಾ ಅದು. ಗ್ರಾಮಾಂತರ ಪ್ರದೇಶಗಳಲ್ಲಿ ಒಬ್ಬ ಬಡವ ಒಂದು ಮನೆ ಕಟ್ಟಿಸೋದು ಎಷ್ಟು ಕಷ್ಟ? ಸಣ್ಣದೊಂದು ಗೂಡು ಕಟ್ಟಲು ಈ ವ್ಯವಸ್ಥೆ ಹೇಗೆಲ್ಲಾ ಸತಾಯಿಸಿಬಿಡುತ್ತದೆ… ಅದರ ಜೊತೆಗೆ ಎದುರಾಗುವ ಕೌಟುಂಬಿಕ ಸಮಸ್ಯೆಗಳನ್ನೆಲ್ಲಾ ಸೇರಿಸಿ ನಿರ್ದೇಶಕ ಕೆ.ಎಂ. ರಘು ಚೆಂದದ ಸಿನಿಮಾವೊಂದನ್ನು ರೂಪಿಸಿದ್ದಾರೆ. ಈ ಹಿಂದೆ ತರ್ಲೆ ವಿಲೇಜ್ ಮತ್ತು ಪರಸಂಗ ಎಂಬ ಸಿನಿಮಾಗಳನ್ನು ನಿರ್ದೇಶಿಸಿದ್ದವರು ರಘು. ಪರಸಂಗ ಸಿನಿಮಾದ ʻಮರಳಿಬಾರದೂರಿಗೆ ನಿನ್ನ ಪಯಣʼ ಹಾಡು ಇವತ್ತಿಗೂ ಎಲ್ಲೆಂದರಲ್ಲಿ ಕೇಳಿಸುತ್ತಲೇ ಇರುತ್ತದೆ. ದೊಡ್ಡಟ್ಟಿ ಬೋರೇಗೌಡ ಸಿನಿಮಾದಲ್ಲೂ ಬಹುತೇಕ ಹೊಸ ಮುಖಗಳನ್ನು ಆಯ್ಕೆ ಮಾಡಿಕೊಂಡು ಉತ್ತಮ ಪ್ರಯತ್ನ ಮಾಡಿದ್ದಾರೆ.Kannada stars who do not stand behind Boregowda

ಈ ಚಿತ್ರ ತೆರೆಗೆ ಬಂದಿದೆ. ನೋಡಿದವರೆಲ್ಲಾ ಮೆಚ್ಚಿ ಮಾತಾಡಿದ್ದಾರೆ. ವಿಮರ್ಶಕರು ಕೂಡಾ ಅಪಾರವಾಗಿ ಇಷ್ಟ ಪಟ್ಟಿದ್ದಾರೆ. ಆದರೆ ಕನ್ನಡ ಚಿತ್ರರಂಗದ ಯಾವೊಬ್ಬ ಸ್ಟಾರ್ ಗಳೂ ಈ ಸಿನಿಮಾವನ್ನು ಪ್ರೋತ್ಸಾಹಿಸಿಲ್ಲ ಅಂತಾ ನಿರ್ದೇಶಕ ರಘು ಬೇಸರಿಸಿಕೊಂಡಿದ್ದಾರೆ. ಈ ಕುರಿತು ವಿಡಿಯೋವೊಂದನ್ನು ಬಿಟ್ಟು ತಮ್ಮ ಆಂತರ್ಯದ ನೋವನ್ನು ಬಹಿರಂಗಗೊಳಿಸಿದ್ದಾರೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…