ಕನ್ನಡದಲ್ಲೂ ಬರ್ತಿದೆ ‘ ದಿ ಲೆಜೆಂಡ್’ ಸಿನಿಮಾ…

kannada the legend release

ತಮಿಳುನಾಡಿನ ಖ್ಯಾತ ಉದ್ಯಮಿ ಅರುಲ್ ಸರವಣನ್ ಈಗ ಪ್ಯಾನ್ ಇಂಡಿಯಾ ಸ್ಟಾರ್

ತಮಿಳುನಾಡಿನ ಖ್ಯಾತ ಉದ್ಯಮಿ ಅರುಲ್ ಸರವಣನ್ ದಿ ಲೆಜೆಂಡ್ ಸಿನಿಮಾ ಮೂಲಕ ಬಣ್ಣದ ಲೋಕದಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಇದೇ ತಿಂಗಳ 28ರಂದು ಸಿನಿಮಾ ರಿಲೀಸ್ ಆಗ್ತಿದ್ದು, ವರ್ಲ್ಡ್ ವೈಡ್ ಅದ್ಧೂರಿಯಾಗಿ ಪ್ರಚಾರ ನಡೆಸಿರುವ ಸರವಣನ್ ಅಂಡ್ ಟೀಂ ಬೆಂಗಳೂರಿನಲ್ಲಿಯೂ ಪ್ರಚಾರ ಕಹಳೆ ಮೊಳಗಿಸಿದ್ದಾರೆ. ಸಿಲಿಕಾನ್ ಸಿಟಿಗೆ ಬಂದಿಳಿದ ಚಿತ್ರದ ನಾಯಕ ಸರವಣನ್, ಬಾಲಿವುಡ್ ಬ್ಯೂಟಿ ಊರ್ವಶಿ ರೌಟೇಲ, ರೈ ಲಕ್ಷ್ಮಿ ಮಾಧ್ಯಮದವರೊಟ್ಟಿಗೆ ಸಿನಿಮಾದ ಬಗ್ಗೆ ಒಂದಷ್ಟು ಅನುಭವ ಹಂಚಿಕೊಂಡಿರು.the legend

ನಾಯಕ ಸರವಣನ್ ಮಾತನಾಡಿ, ಸಿನಿಮಾ ಮಾಡಬೇಕು ಎಂಬ ಕನಸು ಚಿಕ್ಕ ವಯಸ್ಸಿನಿಂದ ಇತ್ತು. ಬ್ಯುಸಿನೆಸ್ ಮೇಲೆ ಹೆಚ್ಚು ಫೋಕಸ್ ಇತ್ತು. ಎಲ್ಲಾ ಸೆಟಲ್ಡ್ ಆದ ಮೇಲೆ ಸಿನಿಮಾ ಮಾಡಿದ್ದೇನೆ. ಕಳೆದ ಹದಿನೈದು ವರ್ಷದಿಂದ ನಿರ್ದೇಶಕ ಜೆ.ಡಿ.ಜೆರ್ರಿ ನನ್ನ ಜೊತೆ ಇದ್ದಾರೆ. ಪ್ರತಿಯೊಂದು ದೃಶ್ಯವೂ ಅದ್ಭುತವಾಗಿ ಮೂಡಿ ಬಂದಿದೆ. ಸಿನಿಮಾ ನೋಡಿ ಸಪೋರ್ಟ್ ಮಾಡಿ ಎಂದರು.the legend

ರಾಜ್ಯದಲ್ಲಿ ಸಿನಿಮಾ ವಿತರಿಸ್ತಿರುವ ಹಾರಿಜನ್ ಸ್ಟುಡಿಯೋಸ್ ನ ಟೋನಿರಾಜ್, ಕನ್ನಡದಲ್ಲೂ ಸಿನಿಮಾ ಬುಕ್ಕಿಂಗ್ ಗೆ ಅವಕಾಶ ನೀಡುತ್ತೇವೆ. ಪ್ರತಿಯೊಬ್ಬರು ಸಿನಿಮಾ ನೋಡಿ ಬೆಂಬಲಿಸಿ ಎಂದರು.the legend

ಟ್ರೇಲರ್ ಹಾಗೂ ಹಾಡುಗಳ ಮೂಲಕ ಸದ್ದು ಮಾಡ್ತಿರುವ ದಿ ಲೆಜೆಂಡ್ ಸಿನಿಮಾ ಜೆ.ಡಿ.ಜೆರ್ರಿ ಆಕ್ಷನ್ ಕಟ್ ಹೇಳಿದ್ದು, ಊರ್ವಶಿ ರೌಟೇಲಾ ಈ ಸಿನಿಮಾ ಮೂಲಕ ಮೊದಲ ಬಾರಿಗೆ ತಮಿಳು ಚಿತ್ರರಂಗ ಪ್ರವೇಶ ಮಾಡಿದ್ದು, ಸರವಣನ್ ಗೆ ಜೋಡಿಯಾಗಿ ನಟಿಸಿದ್ದಾರೆ. ನಸ್ಸಾರ್, ಪ್ರಭು, ಸುಮನ್, ವಿವೇಕ್, ಇಮ್ಮನ್ ಅಣ್ಣಾಚಿ, ಯಶಿಕಾ ಆನಂದ್ ಸೇರಿದಂತೆ ಹಲವರು ತಾರಾಬಳಗ ಚಿತ್ರದಲ್ಲಿದ್ದಾರೆ. ಹ್ಯಾರೀಸ್ ಜಯರಾಜ್ ಮ್ಯೂಸಿಕ್ ಸಿನಿಮಾಕ್ಕಿದ್ದು, ವರ್ಲ್ಡ್ ವೈಡ್ 2000ಕ್ಕೂ ಹೆಚ್ಚು ಸ್ಕ್ರೀನ್ ಗಳಲ್ಲಿ ಕನ್ನಡ, ತಮಿಳು, ತೆಲುಗು, ಹಿಂದಿ ಹಾಗೂ ಮಲಯಾಳಂ ಭಾಷೆಯಲ್ಲಿ ಸಿನಿಮಾ ತೆರೆಗೆ ಬರ್ತಿದೆ.the legend

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…