ಸಾಲದ ಸುಳಿಯಲ್ಲಿ ಸಿಕ್ಕವರಿಗೆ ಕಾನೂನು ಅಸ್ತ್ರ

kanunu astra kannada movie muhurtham

ಈ ಹಿಂದೆ ಡಿಸೆಂಬರ್ 24 ಎಂಬ ಹಾರರ್ ಚಿತ್ರವನ್ನು ನಿರ್ದೇಶಿಸಿದ್ದ ನಾಗರಾಜ್ ಎಂ.ಜಿ.ಗೌಡ ಅವರು ಸದ್ದಿಲ್ಲದೆ ಮತ್ತೊಂದು ಚಿತ್ರ ನಿರ್ದೇಶನಕ್ಕೆ ಕೈಹಾಕಿದ್ದಾರೆ. ಚಿತ್ರದ ಹೆಸರು ಕಾನೂನು ಅಸ್ತ್ರ. ಈ ಚಿತ್ರದ ಮುಹೂರ್ತ ಸಮಾರಂಭ ಸುಂಕದಕಟ್ಟೆಯ ನಿರ್ಮಾಪಕರ ಕಛೇರಿಯಲ್ಲಿ ನಡೆಯಿತು.kanunu astra kannada movie muhurtham

ಸಮಾಜದಲ್ಲಿ ಕಾನೂನಿನ ಬಗ್ಗೆ ಅರಿವಿಲ್ಲದವರು ಹೇಗೆ ತೊಂದರೆ ಅನುಭವಿಸುತ್ತಿದ್ದಾರೆ. ಕಾನೂನು ಅಸ್ತ್ರ ಉಪಯೋಗಿಸಿಕೊಂಡು ಅದರಿಂದ ಹೇಗೆ ಪಾರಾಗಬಹುದು ಎಂದು ಈ ಚಿತ್ರದಲ್ಲಿ ಹೇಳಲಾಗಿದೆ. ಮದ್ಯಮವರ್ಗದ ಜನ ವಾಹನ ಸಾಲ ಪಡೆದುಕೊಂಡು, ಕಂತು ಕಟ್ಟುವುದು ಸ್ವಲ್ಪ ತಡವಾದರೂ ಅವರ ಮೇಲೆ ಸೀಜಿಂಗ್ ನವರ ನಡೆಸುವ ದೌರ್ಜನ್ಯ, ಗೃಹ ಸಾಲ ಪಡೆದವರ ಮೇಲೆ ಬ್ಯಾಂಕ್ ಗಳು ಬೇಕಾಬಿಟ್ಟಿ ಬಡ್ಡಿ ವಿಧಿಸುವಿಕೆ, ಸಾಲ ಪಡೆಯುವಾಗ ಖಾಲಿ ಚೆಕ್ ನೀಡಿದರೆ ಆಗುವ ಪರಿಣಾಮಗಳು, ಗಂಡ ಹೆಂಡತಿ ನಡುವಿನ ಸಂಸಾರ ಕಲಹಗಳು, ಡೈವೊರ್ಸ್ ಗೆ ಕಾರಣಗಳು, ನಿರಪರಾಧಿಯ ಮೇಲೆ ಕೊಲೆ ಅಪರಾಧ ಬಂದಾಗ ಕಾನೂನು ಅಂತಹವರನ್ನು ಹೇಗೆ ಸಂರಕ್ಷಿಸುತ್ತದೆ ಎಂಬ ಹಲವಾರು ಅಂಶಗಳನ್ನು ಹೇಳುವ ಚಿತ್ರವೇ ಕಾನೂನು ಅಸ್ತ್ರ. ಬಡವ, ಶ್ರೀಮಂತ, ಗಂಡು, ಹೆಣ್ಣು, ಸಾಲದ ಸುಳಿಯಿಂದ ಪಾರಾಗುವುದಕ್ಕೆ ಕಾನೂನು ಅಸ್ತ್ರ ಹೇಗೆ ಸಹಕಾರಿಯಾಗುತ್ತದೆ ಎಂಬುದನ್ನು ಪರಿಣಾಮಕಾರಿಯಾಗಿ ಹೇಳುವ ಪ್ರಯತ್ನವಿದು. ಇದೆ ೧೫ರಿಂದ ಆರಂಭಿಸಿ ಮಡಿಕೇರಿ, ಸಕಲೇಶಪುರ, ಚಿಕ್ಕಮಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಲಾಗುವುದು.kanunu astra kannada movie muhurtham

ಪುಟ್ಟೇಗೌಡ. ಎನ್. ಪ್ರೊಡಕ್ಷನ್ ಅಡಿಯಲ್ಲಿ ಪುಟ್ಟೇಗೌಡ ಎನ್. ಅವರು ಕಥೆ, ಸಂಭಾಷಣೆ ಬರೆದು ನಿರ್ಮಾಣ ಮಾಡುತ್ತಿದ್ದಾರೆ. ನಾಗರಾಜ್ ಎಂ.ಜಿ. ಗೌಡ ನಿರ್ದೇಶನ ಮಾಡುತ್ತಿದ್ದು, ವೆಂಕಿ ಯು.ಡಿ.ವಿ. ಅವರ ಸಂಕಲನ, ವಿನಯ್ ಗೌಡ ಅವರ ಛಾಯಾಗ್ರಹಣ, ಚಿತ್ರದ ೫ ಹಾಡುಗಳಿಗೆ ಮಂಜು ಮಹದೇವ್ ಅವರ ಸಂಗೀತ, ಚಂದ್ರು ಬಂಡೆ ಅವರ ಸಾಹಸ, ಬಾಲು ಮಾಸ್ಟರ್ ಅವರ ಕೊರಿಯೋಗ್ರಫಿ ಇದೆ.kanunu astra kannada movie muhurtham

ಅಲ್ಕದೆ ಪುಟ್ಟೇಗೌಡ. ಎನ್, ಜಗದೀಶ್. ಹೆಚ್.ಜಿ. ದೊಡ್ಡಿ, ಬಾಬು. ಬಿ.ಬಿ.ಆರ್, ಲಕ್ಷ್ಮಿನಾರಾಯಣ್, ಕವಿತ, ಸಾನ್ವಿ ಗೌಡ, ಯೋಗೇಶ್, ಮಂಜುನಾಥ್, ಶೈಲೇಶ್ ಮುಂರಾದವರು ಚಿತ್ರದ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ‌.kanunu astra kannada movie muhurtham

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…