ಫೆಬ್ರವರಿ 23 ರಂದು ತೆರೆಗೆ ಬರಲಿದೆ “ಕಪ್ಪು ಬಿಳುಪಿನ ನಡುವೆ “

Kappu Bilupu Naduve Kannada Movie

ಚಿತ್ರ ಯಶಸ್ವಿಯಾಗಲೆಂದು ಹಾರೈಸಿದ ಖ್ಯಾತ ನಟ ವಿಜಯ್ ಸೇತುಪತಿ .

ವೃತ್ತಿಯಲ್ಲಿ ಪಾರಂಪರಿಕ ಆಯುರ್ವೇದ ವೈದ್ಯರಾಗಿರುವ ಧರ್ಮೇಂದ್ರ ಅವರು ನಿರ್ಮಿಸಿರುವ, ವಿಭಿನ್ನ ಕಥೆಯ ಹಾರಾರ್ ಚಿತ್ರ “ಕಪ್ಪು ಬಿಳುಪಿನ ನಡುವೆ” ಚಿತ್ರ ಇದೇ ಫೆಬ್ರವರಿ 23 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ವಸಂತ್ ವಿಷ್ಣು ಈ ಚಿತ್ರವನ್ನು ನಿರ್ದೇಶಿಸುವುದರೊಂದಿಗೆ, ನಾಯಕನಾಗೂ ಅಭಿನಯಿಸಿರುವ ಈ ಚಿತ್ರದ ಟ್ರೇಲರ್ ವೀಕ್ಷಿಸಿದ ತಮಿಳಿನ ಖ್ಯಾತ ನಟ ವಿಜಯ್ ಸೇತುಪತಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದ್ದಾರೆ. ಕನ್ನಡ ಹಾಗೂ ತಮಿಳಿನಲ್ಲಿ ಈ ಚಿತ್ರ ಬಿಡುಗಡೆಯಾಗುತ್ತಿದೆ.Kappu Bilupu Naduve Kannada Movie

“ಕಪ್ಪು ಬಿಳುಪಿನ ನಡುವೆ” ಹಾರಾರ್ ಚಿತ್ರವಾಗಿದ್ದು, “ಕಪ್ಪು ಬಿಳುಪನ್ನು” ಕತ್ತಲು, ಬೆಳುಕಿಗೆ ಹೋಲಿಸಬಹುದು. ಪಾಸಿಟಿವ್ ಹಾಗೂ ನೆಗಟಿವ್ ಎನರ್ಜಿ ಅಂತಲೂ ಎನ್ನಬಹುದು.ಯೂಟ್ಯೂಬರ್ ಗಳ ಸುತ್ತ ಈ ಚಿತ್ರದ ಕಥೆ ಸುತ್ತುತ್ತದೆ ಎಂದು ವಸಂತ್ ವಿಷ್ಣು ತಿಳಿಸಿದ್ದಾರೆ. ವಸಂತ್ ವಿಷ್ಣು ಅವರಿಗೆ ನಾಯಕಿಯಾಗಿ ವಿದ್ಯಾಶ್ರೀ ಗೌಡ ನಟಿಸಿದ್ದಾರೆ. ಬಿರಾದಾರ್, ಶರತ್ ಲೋಹಿತಾಶ್ವ, ಹಾಸ್ಯ ನಟ ಹರೀಶ್, ನವೀನ್ ರಘು, ಮಾಹೀನ್ ಭಾರದ್ವಾಜ್, ತೇಜಸ್ವಿನಿ ಮುಂತಾದವರು ತಾರಾಬಳಗದಲ್ಲಿದ್ದಾರೆ.Kappu Bilupu Naduve Kannada Movie

ಚಿತ್ರದಲ್ಲಿ ಮೂರು ಹಾಡುಗಳಿದ್ದು ಡಾ||ವಿ.ನಾಗೇಂದ್ರ ಪ್ರಸಾದ್ ಹಾಡುಗಳನ್ನು ಬರೆದಿದ್ದಾರೆ. ರಿಶಾಲ್ ಸಾಯಿ ಸಂಗೀತ ನೀಡಿದ್ದಾರೆ. ಕೆ.ಜಿ.ಎಫ್ ಖ್ಯಾತಿಯ ಸಂತೋಷ್ ವೆಂಕಿ, ಶ್ರೀಧರ್ ಕಶ್ಯಪ್ ಹಾಡುಗಳನ್ನು ಹಾಡಿದ್ದಾರೆ. ಪ್ರವೀಣ್ ಶೆಟ್ಟಿ ಛಾಯಾಗ್ರಹಣ ಹಾಗೂ ಅಮಿತ್ ಜಾವಲ್ಕರ್ ಸಂಕಲನ ಈ ಚಿತ್ರಕ್ಕಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…