ಸಿನಿರಸಿಕರ ಮನಗೆದ್ದ “ಕೌಸಲ್ಯ ಸುಪ್ರಜಾ ರಾಮ” .

"Kausalya Supraja Rama" was loved by critics.

ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಹಿಟ್ ಚಿತ್ರಗಳನ್ನು ನೀಡಿರುವ ನಿರ್ದೇಶಕ ಶಶಾಂಕ್ ನಿರ್ದೇಶನದ, ಡಾರ್ಲಿಂಗ್ ಕೃಷ್ಣ – ಮಿಲನ ನಾಗರಾಜ್ ಜೋಡಿಯ ” ಕೌಸಲ್ಯ ಸುಪ್ರಜಾ ರಾಮ” ಚಿತ್ರ ಕಳೆದವಾರ ಬಿಡುಗಡೆಯಾಗಿ, ರಾಜ್ಯಾದ್ಯಂತ ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ. ಈ ಯಶಸ್ಸಿನ ಖುಷಿಯನ್ನು ಚಿತ್ರತಂಡದ ಸದಸ್ಯರು ಮಾಧ್ಯಮದ ಮುಂದೆ ಹಂಚಿಕೊಂಡರು."Kausalya Supraja Rama" was loved by critics.

ನನಗೆ ಶಶಾಂಕ್, “ಕೌರವ” ಚಿತ್ರದ ಕಾಲದಿಂದಲೂ ಪರಿಚಯ. ಈ ಚಿತ್ರದ ಕಥೆ ಅವರು ಹೇಳಿದ ತಕ್ಷಣ ನನಗೆ ಇಷ್ಟವಾಯಿತು. ನಿರ್ಮಾಣಕ್ಕೆ ಮುಂದಾದೆ. ಈಗ ಚಿತ್ರ ಬಿಡುಗಡೆಯಾಗಿ ಎಲ್ಲರ ಮನ ಗೆಲ್ಲುತ್ತಿದೆ. ಮುಂದಿನವಾರ ವಿದೇಶಗಳಲ್ಲೂ ಈ ಚಿತ್ರ ಬಿಡುಗಡೆಯಾಗಲಿದೆ. ಜೀ ವಾಹಿನಿಗೆ ಟಿವಿ ರೈಟ್ಸ್ ಹಾಗೂ ವೂಟ್ ಗೆ ಓಟಿಟಿ ಹಕ್ಕು ಮಾರಾಟವಾಗಿದೆ. ಚಿತ್ರದ ಯಶಸ್ಸಿಗೆ ಕಾರಾಣರಾದ ಪ್ರತಿಯೊಬ್ಬರಿಗೂ ಧನ್ಯವಾದವೆಂದರು ನಿರ್ಮಾಪಕ ಬಿ.ಸಿ.ಪಾಟೀಲ್.
ಸೃಷ್ಟಿ ಪಾಟೀಲ್ ಅವರು ಚಿತ್ರತಂಡಕ್ಕೆ ಅಭಿನಂದನೆ ತಿಳಿಸಿದರು‌."Kausalya Supraja Rama" was loved by critics.

ಈ ಗೆಲವು ನನಗೆ ಬೇಕಿತ್ತು ಎಂದ ಮಾತು ಆರಂಭಿಸಿದ ನಿರ್ದೇಶಕ ಶಶಾಂಕ್, “ಕೌಸಲ್ಯ ಸುಪ್ರಜಾ ರಾಮ” ಚಿತ್ರದ ಕಥೆಯನ್ನು ಡಾರ್ಲಿಂಗ್ ಕೃಷ್ಣ ಅವರಿಗಾಗಿ ಮಾಡಿದ್ದು, ನಾನು ಸಾಮಾನ್ಯವಾಗಿ ಕಥೆ ಮಾಡಿಕೊಳ್ಳುತ್ತೇನೆ. ಆಮೇಲೆ ನಾಯಕರ ಬಳಿ ಚರ್ಚಿಸುತ್ತೇನೆ.
ಆದರೆ ಈ ಕಥೆ ಕೃಷ್ಣ ಅವರಿಗಾಗಿಯೇ ಮಾಡಿದ್ದೇನೆ. ಮಿಲನ ನಾಗರಾಜ್ ಅವರು ಮೊದಲು ಈ ಪಾತ್ರಕ್ಕೆ ಒಪ್ಪಲಿಲ್ಲ. ನಾನು ಹಾಗೂ ಕೃಷ್ಣ ಅವರನ್ನು ನಟಿಸಲು ಒಪ್ಪಿಸಲು ಬಹಳ ಶ್ರಮ ಪಟ್ಟೆವು. ಈಗ ಅವರ ಪಾತ್ರವನ್ನು ಎಲ್ಲರೂ ಮೆಚ್ಚಿಕೊಳ್ಳುತ್ತಿದ್ದಾರೆ. ಇನ್ನೂ ಈ ಚಿತ್ರ ಇಷ್ಟು ಅದ್ದೂರಿಯಾಗಿ ಮೂಡಿಬರಲು ಬಿ.ಸಿ.ಪಾಟೀಲ್ ಅವರು ಕಾರಣ. ನಮ್ಮ ಚಿತ್ರ ಕರ್ನಾಟಕ ಮಾತ್ರವಲ್ಲ. ಪಕ್ಕದ ಆಂದ್ರ ಪ್ರದೇಶ ಹಾಗೂ ತಮಿಳುನಾಡಿನಲ್ಲೂ ಬಿಡುಗಡೆಯಾಗಿತ್ತು. ಅಲ್ಲಿನ ಜನರು ನಮ್ಮ ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ. ಈ ಯಶಸ್ಸಿಗೆ ಕಾರಣರಾದ ನನ್ನ ಇಡೀ ತಂಡಕ್ಕೆ ಧನ್ಯವಾದ ತಿಳಿಸುತ್ತೇನೆ ಎಂದರು."Kausalya Supraja Rama" was loved by critics.

ಶಶಾಂಕ್ ಸರ್ ನನ್ನ ಬಳಿ ಬಂದು, ಆಕ್ಷನ್ ಜಾನರ್ ಸಿನಿಮಾ ಮಾಡೋಣವಾ? ಎಂದರು. ನಾನು ಬೇಡ ಸರ್ . “ಕೃಷ್ಣ ಲೀಲಾ” ತರಹ ಕೌಟುಂಬಿಕ ಚಿತ್ರ ಮಾಡೋಣ ಎಂದೆ. ಒಂದು ತಿಂಗಳಲ್ಲಿ ಶಶಾಂಕ್ ಅವರು ಕಥೆ ಸಿದ್ದ ಮಾಡಿಕೊಂಡು ಬಂದರು. ಚಿತ್ರ ಆರಂಭವಾಯಿತು. ನನ್ನ ಹತ್ತು ವರ್ಷಗಳ ಸಿನಿ ಜರ್ನಿಯಲ್ಲೇ ನಾನು ಕೇಳಿರುವ ಉತ್ತಮ ಕಥೆಯಿದು. ಚಿತ್ರ ಬಿಡುಗಡೆಯಾದ ಮೇಲೆ ಪ್ರೇಕ್ಷಕರುವ ತೋರಿಸುತ್ತಿರುವ ಪ್ರೀತಿಗೆ ಮನಸ್ಸು ತುಂಬು ಬಂದಿದೆ. ನನ್ನೊಡನೆ ನಟಿಸಿರುವ ಎಲ್ಲಾ ಕಲಾವಿದರ ಅದ್ಭುತ ಅಭಿನಯ, ತಂತ್ರಜ್ಞರ ಕಾರ್ಯವೈಖರಿ ಈ ಚಿತ್ರದ ಯಶಸ್ಸಿಗೆ ಕಾರಣ. ಎಲ್ಲರಿಗೂ ನನ್ನ ಧನ್ಯವಾದ. ಬಿ.ಸಿ.ಪಾಟೀಲ್ ಅವರಿಗೆ ವಿಶೇಷ ಧನ್ಯವಾದ ಎಂದರು ನಾಯಕ ಡಾರ್ಲಿಂಗ್ ಕೃಷ್ಣ."Kausalya Supraja Rama" was loved by critics.

ನಾನು ಮೊದಲು ಈ ಪಾತ್ರ ಮಾಡಲು ಒಪ್ಪಿರಲಿಲ್ಲ. ಕೃಷ್ಣ ಹಾಗೂ ಶಶಾಂಕ್ ಅವರು ಒಪ್ಪಿಸಿದರು. ಈಗ ನನ್ನ ಪಾತ್ರಕ್ಕೆ ಸಿಗುತ್ತಿರುವ ಪ್ರಶಂಸೆ ಕಂಡು ಸಂತೋಷವಾಗಿದೆ ಎಂದರು ಮಿಲನ ನಾಗರಾಜ್. ನಟ ನಾಗಭೂಷಣ್ ಹಾಗೂ ಚಿತ್ರದ ಮತ್ತೊಬ್ಬ ನಾಯಕಿ ಬೃಂದಾ ಆಚಾರ್ಯ ಚಿತ್ರದ ಕುರಿತು ಮಾತನಾಡಿದರು. ಬೃಂದಾ ಆಚಾರ್ಯ ಅವರೆ ನಿರೂಪಣೆ ಮಾಡಿದ್ದು ವಿಶೇಷವಾಗಿತ್ತು.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…