“ಜಾಡಘಟ್ಟ” ದ ನಂತರ “ಕವಡೆ” ಆಡಲು ರಘು ಸಿದ್ದ

“ಕವಡೆ” ಆಟ ಪುರಾತನ ಆಟ. ಚದರಂಗ, ಚೌಕಾಬಾರ ಇತ್ಯಾದಿ ಹೆಸರುಗಳಿಂದ ಈ ಆಟ ಪ್ರಸಿದ್ಧಿ. ಇತ್ತೀಚೆಗೆ “ಕವಡೆ” ಚಿತ್ರದ ಮುಹೂರ್ತ ಸಮಾರಂಭ ಧರ್ಮಗಿರಿ ಶ್ರೀ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ನಡೆಯಿತು. ಲಕ್ಷ್ಮೀಕಾಂತ್ ಅವರು ಪ್ರಥಮ ಸನ್ನಿವೇಶಕ್ಕೆ ಆರಂಭಫಲಕ ತೋರಿದರು. ಲಕ್ಷ್ಮೀಪತಿ ಕ್ಯಾಮೆರಾ ಚಾಲನೆ ಮಾಡಿದರು.WhatsApp Image 2022 05 22 at 9.08.27 PM

ಕಳೆದ ತಿಂಗಳು ತೆರೆಕಂಡ “ಜಾಡಘಟ್ಟ” ಚಿತ್ರವನ್ನು ನಿರ್ದೇಶಿಸಿ, ನಟನೆಯನ್ನೂ ಮಾಡಿದ್ದ ರಘು ಎಸ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಜೊತೆಗೆ ನಾಯಕನಾಗೂ ನಟಿಸುತ್ತಿದ್ದಾರೆ. ಇನ್ಸ್ಟಾಗ್ರಾಮ್ ನಲ್ಲಿ ತಮ್ಮ ಪ್ರತಿಭಾ ಪ್ರದರ್ಶನದ ಮೂಲಕ ಹೆಸರಾಗಿರುವ ವಿದ್ಯಾ ಈ ಚಿತ್ರದ ನಾಯಕಿ.WhatsApp Image 2022 05 22 at 9.08.27 PM 1

ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಪ್ರತಿಭಾವಂತರು ಪ್ರದರ್ಶನ ನೀಡುತ್ತಿರುತ್ತಾರೆ. ಆದರೆ ಅವರಿಗೆ ಅವಕಾಶ ಸಿಗುವುದು ಕಡಿಮೆ.‌ ನಾವು ಅಂತಹ ಪ್ರತಿಭೆಗೆ ಅವಕಾಶ ನೀಡಲು ನಿಶ್ಚಯಿಸಿ ಈ ಚಿತ್ರಕ್ಕೆ ವಿದ್ಯಾ ಅವರನ್ನು ಆಯ್ಕೆ ಮಾಡಿರುವುದಾಗಿ ರಘು ತಿಳಿಸಿದರು.WhatsApp Image 2022 05 22 at 9.08.28 PM

ನಾಯಕ ಹಾಗೂ ನಾಯಕಿ ನಡುವೆ ಮೂರನೇ ವ್ಯಕ್ತಿಯ ಆಗಮನವಾಗುತ್ತದೆ. ಆಗ ಏನಾಗುತ್ತದೆ? ಎಂಬುದೇ ಕಥಾಹಂದರ. ಈ ಜೀವನ ಕೂಡ ಒಂದು ಚದುರಂಗದ ಆಟ. ಹಾಗಾಗಿ ನಮ್ಮ ಚಿತ್ರಕ್ಕೆ “ಕವಡೆ” ಅಂತ ಹೆಸರಿಟ್ಟಿದ್ದೀವಿ ಎನ್ನುತ್ತಾರೆ ರಘು.WhatsApp Image 2022 05 22 at 9.08.29 PM

ಬೆಂಗಳೂರಿನಲ್ಲೇ ಚಿತ್ರೀಕರಣ ನಡೆಯಲಿದೆ. ಶಶಿಮಣಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶಶಿಮಣಿ ಅವರು ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಈ ಹಿಂದೆ “ಜಾಡಘಟ್ಟ” ಚಿತ್ರ ಕೂಡ ಇವರೇ ನಿರ್ಮಿಸಿದ್ದರು.WhatsApp Image 2022 05 22 at 9.08.28 PM 2

ಸುಂದರ ಹಾಡುಗಳಿರುವ ಈ ಚಿತ್ರಕ್ಕೆ ಅಭಿಷೇಕ್ ಜಿ ರಾಯ್ ಸಂಗೀತ ನೀಡುತ್ತಿದ್ದಾರೆ. ಪ್ರದೀಪ್ ಜೈನ್ ಛಾಯಾಗ್ರಹಣ ಈ ಚಿತ್ರದ ಛಾಯಾಗ್ರಾಹಕರು.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…