ಕೆಂಪುಸೀರೆಯಲ್ಲಿ ಹಾರರ್ ಕಥೆ

kempu seere kannada movie

ತಾಯಿ ಮಗಳ ಸಂಬಂಧದ ಸುತ್ತ ನಡೆಯುವ ಹಾರರ್, ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರವೊಂದು ಬಿಡುಗಡೆಗೆ ಸಿದ್ದವಾಗಿದೆ. ಕೆಂಪುಸೀರೆ ಎಂಬ ಕುತೂಹಲಕರ ಶೀರ್ಷಿಕೆ ಹೊಂದಿರುವ ಈ ಚಿತ್ರಕ್ಕೆ ಸುಮನ್ ಬಾಬು ಅವರು ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ.

kempuseere kannada movie ಸುಮನ್ ವೆಂಕಟಾದ್ರಿ ಪ್ರೊಡಕ್ಷನ್ ಮೂಲಕ ಸುಮನ್ ಬಾಬು ಅವರೇ ನಿರ್ಮಾಣ ಸಹ ಮಾಡಿದ್ದಾರೆ. ಕನ್ನಡದ ಜೊತೆಗೆ ತೆಲುಗು, ತಮಿಳು ಹಾಗೂ ಮಲಯಾಳಂ ಸೇರಿದಂತೆ 4 ಭಾಷೆಗಳಲ್ಲಿ ನಿರ್ಮಾಣವಾಗಿರುವ ಈ ಚಿತ್ರದಲ್ಲಿ ಕೆಂಪುಸೀರೆಯೊಂದು ಪ್ರಮುಖ ಪಾತ್ರ ವಹಿಸುತ್ತದೆ.WhatsApp Image 2022 07 18 at 9.35.49 PM 1

ತನ್ನ ಮಗಳ ಮೇಲೆ ಅಪಾರ ಪ್ರೀತಿ ಇಟ್ಟುಕೊಂಡಿದ್ದ ತಾಯಿ ಕೆಂಪು ಸೀರೆ ಉಟ್ಟುಕೊಂಡಿದ್ದಾಗಲೇ ಕೊಲೆಯಾಗುತ್ತಾಳೆ. ತಾಯಿಯ ನಂತರ ಆಕೆಯ ಮಗಳನ್ನೂ ಹಂತಕರು ಸಾಯಿಸುತ್ತಾರೆ. ಆನಂತರ ಮಗಳ ಆತ್ಮ ಕೆಂಪು ಸೀರೆ ಉಟ್ಟಿದ್ದ ತನ್ನ ತಾಯಿಯ ಆತ್ಮವನ್ನು ಹುಡುಕುತ್ತಿರುತ್ತದೆ. ಹೀಗೆ ಹಾರರ್ ಹಿನ್ನೆಲೆಯಲ್ಲಿ ನಡೆಯುವ ಸೆಂಟಿಮೆಂಟ್ ಕಥೆಯನ್ನು ನಿರ್ದೇಶಕರು ಈ ಚಿತ್ರದ ಮೂಲಕ ಹೇಳಹೊರಟಿದ್ದಾರೆ. ವಿಶೇಷವಾಗಿ ಈ ಚಿತ್ರದಲ್ಲಿ ೩೦ ನಿಮಿಷಗಳ ಗ್ರಾಫಿಕ್ಸ್ ಬಳಸಿಕೊಂಡು ಕೆಂಪುಸೀರೆ, ಅಘೋರಿ ಪಾತ್ರಗಳಿಗೆ ಬಳಸಿಕೊಳ್ಳಲಾಗಿದೆ. ದಸರಾ ಹಬ್ಬದ ವೇಳೆಗೆ ಈ ಚಿತ್ರವನ್ನು ತೆರೆಗೆ ತರುವ ಯೋಜನೆಯಿದೆ.kempuseere kannada movie

ಅಘೋರಿಯಾಗಿ ಸಾಯಿಕುಮಾರ್ ತಮ್ಮ ಅಯ್ಯಪ್ಪ ಶರ್ಮ ಅಭಿನಯಿಸಿದ್ದಾರೆ. ಉಳಿದ ಪಾತ್ರಗಳಲ್ಲಿ ಸುಮನ್ ಬಾಬು, ಕಾರುಣ್ಯ ಚೌದರಿ, ಸಂಜನಶೆಟ್ಟಿ, ಆಲಿ, ಶ್ರೀಕಾಂತ್ (ಶ್ರೀರಾಮ್), ಅಜಯ್, ಜೀವಾ, ಬೇಬು ಸಾಯಿ ತೇಜಸ್ವಿನಿ ನಟಿಸಿದ್ದಾರೆ.

kempuseere kannada movieಚಿತ್ರದ ೪ ಹಾಡುಗಳಿಗೆ ಪ್ರಮೋದ್ ಸಂಗೀತ ನೀಡಿದ್ದಾರೆ, ಚಿನ್ನು ಅವರ ಹಿನ್ನೆಲೆ ಸಂಗೀತ, ಚಂದ್ರು ಅವರ ಛಾಯಾಗ್ರಹಣ, ಸಂಗೋಪಿ ವಿಮಲ ಅವರ ಸಂಭಾಷಣೆ, ಅಜಯ್ ಶಿವಶಂಕರ್ ಅಕುಲ್ ಅವರ ನೃತ್ಯ, ವೆಂಕಟಪ್ರಭು ಅವರ ಸಂಕಲನ ಈ ಚಿತ್ರಕ್ಕಿದೆ.WhatsApp Image 2022 07 18 at 9.35.48 PM 1

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…