`ಕೆಂಡ’ದೊಳಗಿವೆ ಬೆಂಕಿನುಂಡೆಯಂತಾ ಕ್ಯಾರೆಕ್ಟರ್ ಗಳು!

Kenda Kannada Movie

ಒಂದೇ ಒಂದು ಮೋಷನ್ ಪೋಸ್ಟರ್ ಮೂಲಕ ಒಂದಷ್ಟು ಬಗೆಯ ಚರ್ಚೆ ಮತ್ತು ಕುತೂಹಲ ಹುಟ್ಟುಹಾಕಿದ್ದ ಚಿತ್ರ `ಕೆಂಡ’. Kenda Kannada Movie ಈ ಹಿಂದೆ `ಗಂಟುಮೂಟೆ’ ಎಂಬ ಭಿನ್ನ ಕಥಾನಕದ ಮೂಲಕ ಸೆಳೆದಿದ್ದ ತಂಡವೇ ಕೆಂಡದ ರೂವಾರಿಯಾಗಿರುವುದು ಕೂಡಾ ಅದಕ್ಕೊಂದು ಕಾರಣ. ಗಂಟುಮೂಟೆ ಮೂಲಕ ಬೆರಗೊಂದನ್ನು ತೆರೆದಿಟ್ಟಿದ್ದ ರೂಪಾ ರಾವ್ ಮತ್ತು ಛಾಯಾಗ್ರಾಹಕರಾಗಿದ್ದುಕೊಂಡು, ನಿರ್ಮಾಣದಲ್ಲಿಯೂ ಭಾಗಿಯಾಗಿದ್ದ ಸಹದೇವ್ ಕೆಲವಡಿ ಒಟ್ಟುಗೂಡಿ ಕೆಂಡವನ್ನು ರೂಪಿಸಿದ್ದಾರೆ. ಈ ಮೂಲಕ ಛಾಯಾಗ್ರಾಹಕ ಸಹದೇವ್ ಕೆಲವಡಿ ನಿರ್ದೇಶಕರಾಗಿಯೂ ಬಡ್ತಿ ಪಡೆದುಕೊಂಡಿದ್ದಾರೆ.Kenda Kannada Movie

ಮೋಷನ್ ಪೋಸ್ಟರ್ ಮತ್ತು ಅದರ ಸಲುವಾಗಿ ಚಿತ್ರತಂಡ ಹಂಚಿಕೊಂಡಿದ್ದ ಒಂದಷ್ಟು ವಿವರಗಳಿಂದಾಗಿಯೇ ಕೆಂಡ ಪ್ರೇಕ್ಷಕರನ್ನು ಸೆಳೆದುಕೊಂಡಿತ್ತು. ಇದೀಗ ಚಿತ್ರತಂಡ ಕೆಂಡದ ಒಡಲಲ್ಲಿರುವ ವಿಭಿನ್ನವಾದ ಒಂದಷ್ಟು ಪಾತ್ರಗಳನ್ನು ಪರಿಚಯ ಮಾಡಿಸಿದೆ. ಒಂದು ವೀಡಿಯೋ ಮೂಲಕ ಕೆಂಡದೊಳಗಿನ ಪಾತ್ರಗಳು ಅನಾವರಣಗೊಂಡಿವೆ.

ಭಗವದ್ಗೀತೆಯಲ್ಲಿ ಎಲ್ಲವೂ ಇದೆ ಆದರೆ ಸುಳ್ಳಿಲ್ಲ

Kenda Kannada Movie

ಸಚ್ಚಾ ನಿರ್ವಹಿಸಿರುವ ಲೋಕೇಶ್ ಎಂಬ ಪಾತ್ರ, ಜಯರಾಮ್ ಆಗಿ ನಟಿಸಿರುವ ಶರತ್ ಗೌಡ, ಪ್ರಣವ್ ಶ್ರೀಧರ್ ಅವರ ವಿನಾಯಕ ಎಂಬ ಪಾತ್ರ, ಕೇಶವನಾಗಿರುವ ಬಿ.ವಿ ಭರತ್ ಒಂದೇ ಸಲ..ಕ್ಕೆ ಸೆಳೆಯುವಂಥಾ ಲುಕ್ಕಿನಲ್ಲಿ ಕಂಗೊಳಿಸಿದ್ದಾರೆ. ಈ ಹಿಂದೆ ಒಂದಷ್ಟು ಸಿನಿಮಾಗಳಲ್ಲಿ ಕೆಲ ಪಾತ್ರಗಳೇ ಅಗಾಧವಾದ ಕ್ರೇಜ್ ಸೃಷ್ಟಿಸಿದ್ದವು. ಇಲ್ಲಿನ ಪಾತ್ರಗಳೂ ಕೂಡಾ ಅಂಥಾದ್ದರ ರೂವಾರಿಯಾಗುವ ಲಕ್ಷಣಗಳು ದಟ್ಟವಾಗಿವೆ.Kenda Kannada Movie

ಅಂದಹಾಗೆ, ಅಮೇಯುಕ್ತಿ ಸ್ಟುಡಿಯೋಸ್ ಮೂಲಕ ಈ ಚಿತ್ರ ನಿರ್ಮಾಣಗೊಂಡಿದೆ. ಪ್ರಸಕ್ತ ಸನ್ನಿವೇಷಗಳಿಗೆ ತಕ್ಕುದಾಗಿರುವ ಈ ಕಥನ ರಗಡ್ ಶೈಲಿಯಲ್ಲಿದೆ ಎಂಬುದನ್ನು ಶೀರ್ಷಿಕೆಯೇ ಸಾರಿ ಹೇಳಿತ್ತು. ಇದೀಗ ತೆರೆದುಕೊಂಡಿರುವ ಪಾತ್ರಗಳು ಆ ನಂಬಿಕೆಯನ್ನು ಮತ್ತಷ್ಟು ಗಟ್ಟಿಗೊಳಿಸಿವೆ. ಕೆಂಡದ ತಾರಾಗಣವೆಲ್ಲ ಹೊಸಬರಿಂದಲೇ ತುಂಬಿಕೊಂಡಿದೆ. ರಂಗಭೂಮಿ ಪ್ರತಿಭೆಗಳಿಲ್ಲಿ ಪ್ರಧಾನ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಬಿ.ವಿ ಭರತ್, ಪ್ರಣವ್ ಶ್ರೀಧರ್, ವಿನೋದ್ ರವೀಂದ್ರನ್, ಗೋಪಾಲ ದೇಶಪಾಂಡೆ ಮುಂತಾದವರ ತಾರಾಗಣ ಈ ಚಿತ್ರಕ್ಕಿದೆ.

ನಿಮ್ಮ ಆತ್ಮೀಯ ಸ್ನೇಹಿತರು ಮತ್ತು ಕುಟುಂಬ ಸದಸ್ಯರೊಂದಿಗೆ ಹಂಚಿಕೊಳ್ಳಿ

ಖ್ಯಾತ ಸಾಹಿತಿ ಜಯಂತ್ ಕಾಯ್ಕಿಣಿ ಅವರ ಪುತ್ರ ರಿತ್ವಿಕ್ ಕಾಯ್ಕಿಣಿ ಈ ಸಿನಿಮಾ ಮೂಲಕ ಸಂಗೀತ ನಿರ್ದೇಶಕರಾಗುತ್ತಿದ್ದಾರೆ. ಕಥೆಯೊಂದಿಗೇ ಹೊಸೆದುಕೊಂಡಂಥಾ ಎರಡು ಹಾಡುಗಳಿಗೆ ಖುದ್ದು ಜಯಂತ್ ಕಾಯ್ಕಿಣಿ ಸಾಹಿತ್ಯ ಬರೆದಿದ್ದಾರೆ. ಆಸ್ಕರ್ ಪ್ರಶಸ್ತಿ ವಿಜೇತ ಎಲಿಫೆಂಟ್ ವಿಸ್ಪರ್ಸ್ ಚಿತ್ರದ ಭಾಗವಾಗಿದ್ದ ಶ್ರೇಯಾಂಕ್ ನಂಜಪ್ಪ ಕೆಂಡ ಚಿತ್ರಕ್ಕೆ ಶಬ್ಧ ಸಂಯೋಜನೆ ಮಾಡಿದ್ದಾರೆ.Kenda Kannada Movie

ಗಂಟುಮೂಟೆಯಂಥಾ ಚೆಂದದ ಸಿನಿಮಾ ಕೊಟ್ಟಿದ್ದ ತಂಡವೇ ಕೆಂಡದ ಸಾರಥ್ಯ ವಹಿಸಿರೋದರಿಂದಾಗಿ, ಈ ಚಿತ್ರ ಒಂದಷ್ಟು ಕುತೂಹಲ ಮೂಡಿಸಿದೆ. ಯುವ ಸಮೂಹದ ಕನಸು, ನಿರಾಸೆ, ತವಕ ತಲ್ಲಣಗಳನ್ನು ಹೊಂದಿರುವ ಈ ಚಿತ್ರ ಈಗಾಗಲೇ ಚಿತ್ರೀಕರಣ ಮುಗಿಸಿಕೊಂಡಿದೆ. ಪೋಸ್ಟ್ ಪ್ರೊಡಕ್ಷನ್ ಕಾರ್ಯವೂ ಅಂತಿಮ ಘಟ್ಟದಲ್ಲಿದೆ. ಹೀಗೆ ಹಂತ ಹಂತವಾಗಿ ಕೆಂಡ ಪ್ರೇಕ್ಷಕರೊಳಗೆ ಕುತೂಹಲ ಮೂಡಿಸುತ್ತಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…