ವಿಜಯ ದಶಮಿಯಂದು ಆರಂಭವಾಯಿತು “ಕೈಮರ”.

kaymara kannada movie

ಗೌತಮ್ ವಿಮಲ್ ನಿರ್ದೇಶನದ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಪ್ರಿಯಾಂಕ ಉಪೇಂದ್ರ, ಪ್ರಿಯಮಾಣಿ ಹಾಗೂ ಛಾಯಾಸಿಂಗ್ ನಟನೆ.


ವಿಜಯ ದಶಮಿಯ ಶುಭದಿನದಂದು ವಿ.ಮತ್ತಿಯಳಗನ್ ನಿರ್ಮಾಣದ, ಗೌತಮ್ ವಿಮಲ್ ನಿರ್ದೇಶನದ ಹಾಗೂ ಪ್ರಿಯಾಂಕ ಉಪೇಂದ್ರ, ಪ್ರಿಯಾಮಣಿ, ಛಾಯಾಸಿಂಗ್ ಪ್ರಮುಖಪಾತ್ರಗಳಲ್ಲಿ ನಟಿಸುತ್ತಿರುವ ” ಕೈಮರ” ಚಿತ್ರದ ಮುಹೂರ್ತ ಸಮಾರಂಭ ರಾಜರಾಜೇಶ್ವರಿ ನಗರದಲ್ಲಿ ನೆರವೇರಿತು.khaimara kannada movie

ವಿಜಯ ದಶಮಿ ಶುಭದಿನದಂದು “ಕೈಮರ” ಚಿತ್ರ ಆರಂಭವಾಗಿದೆ. ಖ್ಯಾತ ನಿರ್ದೇಶಕ ಪಿ.ವಾಸು ಅವರ ತಮ್ಮನ ಮಗ ಗೌತಮ್ ವಿಮಲ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಮತ್ತಿಯಳಗನ್ ಅವರು ನಿರ್ಮಾಣದೊಂದಿಗೆ ನಟನೆಯನ್ನು ಮಾಡುತ್ತಿದ್ದಾರೆ. ನಾನು ಈ ಹಿಂದೆ ಸಾಕಷ್ಟು ಹಾರಾರ್ ಚಿತ್ರಗಳಲ್ಲಿ ಅಭಿನಯಿಸಿದ್ದೇನೆ. “ಕೈಮರ” ಚಿತ್ರದಲ್ಲಿ‌ ನಾನು ಈ ತನಕ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ಪ್ರಿಯಾಮಣಿ, ಛಾಯಾಸಿಂಗ್ ಅವರೊಟ್ಟಿಗೆ ಅಭಿನಯಿಸುತ್ತಿರುವುದು ಖುಷಿಯಾಗಿದೆ. ಕನ್ನಡದಲ್ಲಿ “ಕೆ.ಜಿ.ಎಫ್”, “ಕಾಂತಾರ ” ದಂತಹ ಡಿಫರೆಂಟ್ ಜಾನರ್ ನ ಚಿತ್ರಗಳು ಜನರ ಮೆಚ್ಚುಗೆ ಪಡೆಯುತ್ತಿದೆ. ನಮ್ಮ “ಕೈಮರ” ಚಿತ್ರದ ಕಥೆ ಸಹ ಡಿಫರೆಂಟ್ ಆಗಿದ್ದು, ನೋಡುಗರ ಮನ ಗೆಲ್ಲುವ ವಿಶ್ವಾಸವಿದೆ ಎಂದು ನಟಿ ಪ್ರಿಯಾಂಕ ಉಪೇಂದ್ರ ತಿಳಿಸಿದರು.khaimara kannada movie

ಇದೊಂದು ಹಾರಾರ್ ಸೈಕಲಾಜಿಕಲ್ ಕಥಾಹಂದರ ಹೊಂದಿರುವ ಚಿತ್ರ. ನನ್ನ ನಿರ್ದೇಶನದ ಮೊದಲ ಚಿತ್ರ ಸಹ. ಕಳೆದ ಮೂರುವರ್ಷಗಳಿಂದ “ಕೈಮರ” ಕುರಿತಾದ ಕೆಲಸಗಳು ನಡೆಯುತ್ತಿದ್ದವು. ಕೊರೋನ ಕಾರಣದಿಂದ ಚಿತ್ರೀಕರಣ ಆರಂಭವಾಗುವು ಸ್ವಲ್ಪ ತಡವಾಯಿತು. ಈಗ ದಸರಾದ ಶುಭದಿನದಲ್ಲಿ ಮುಹೂರ್ತ ನಡೆದಿದೆ. ಅಕ್ಟೋಬರ್ ಹತ್ತರಿಂದ ಚಿತ್ರೀಕರಣ ಆರಂಭವಾಗಲಿದೆ. ಬೆಂಗಳೂರು, ಚಿಕ್ಕಮಗಳೂರಿನಲ್ಲಿ ಚಿತ್ರೀಕರಣ ನಡೆಯಲಿದೆ ಎಂದರು ನಿರ್ದೇಶನ ಗೌತಮ್ ವಿಮಲ್.khaimara kannada movie

“ಕೈಮರ” ಚಿತ್ರ ಮಾಮೂಲಿ ಚಿತ್ರಗಳಿಗಿಂತ ಸ್ವಲ್ಪ ಭಿನ್ನವಾಗಿರಲಿದೆ.‌ ನಿರ್ದೇಶಕ ಗೌತಮ್ ಈ ಚಿತ್ರ ಉತ್ತಮವಾಗಿ ಬರಲು ಸಾಕಷ್ಟು ಶ್ರಮ ಪಡುತ್ತಿದ್ದಾರೆ. ಪಿ. ವಿಮಲ್ ಕಥೆ ಬರೆದಿದ್ದಾರೆ. ಗುರುಕಿರಣ್ ಸಂಗೀತ ನಿರ್ದೇಶನ, ಮಣಿಕಂಠನ್ ಛಾಯಾಗ್ರಹಣ, ಮೋಹನ್ ಬಿ ಕೆರೆ ಕಲಾ ನಿರ್ದೇಶನ ಹಾಗೂ ವಿನೋದ್ ಅವರ ಸಾಹಸ ನಿರ್ದೇಶನ “ಕೈಮರ” ದಲ್ಲಿರಲಿದೆ.‌ ಪ್ರಿಯಾಂಕ ಉಪೇಂದ್ರ, ಪ್ರಿಯಾಮಣಿ, ಛಾಯಾಸಿಂಗ್ ಮುಖ್ಯಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ನಾನು ಹಾಗೂ ವಿನಯ್ ಗೌಡ ಅವರು ಈ ಚಿತ್ರದಲ್ಲಿ ನಟಿಸುತ್ತಿದ್ದೇವೆ. ಇದೇ ಹತ್ತನೇ ತಾರೀಖಿನಿಂದ ಚಿತ್ರೀಕರಣ ಆರಂಭಿಸುತ್ತಿದ್ದೇವೆ. “ಕೈಮರ” 2023 ರ ಉತ್ತಮ ಚಿತ್ರವಾಗಿ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಲಿದೆ ಎಂದು ನಿರ್ಮಾಪಕ ಹಾಗೂ ನಟ ವಿ.ಮತ್ತಿಯಳಗನ್ ತಿಳಿಸಿದ್ದಾರೆ.khaimara kannada movie

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…