ನಂದಿ ಫಿಲ್ಮಂ ಅವಾರ್ಡ್-2023ರ ಕರ್ಟನ್ ರೈಸ್ ಗೆ ಕಿಚ್ಚ ಸುದೀಪ್ ಚಾಲನೆ

Kiccha Sudeep Nandi Film Award

ಕನ್ನಡದಲ್ಲಿ ಮೊಟ್ಟಮೊದಲ ಬಾರಿಗೆ ನಂದಿ ಪ್ರಶಸ್ತಿ ಆರಂಭವಾಗಿದೆ. ಡಿಸೆಂಬರ್ ಪ್ರಶಸ್ತಿ ಸಮಾರಂಭ ನಡೆಯುತ್ತಿದ್ದು, ಅದಕ್ಕಾಗಿ ಸಕಲ ಸಿದ್ದತೆ ನಡೆದಿದೆ. ನಂದಿ ಚಲನಚಿತ್ರ ಪ್ರಶಸ್ತಿ-2023ರ ಕರ್ಟನ್ ರೈಸ್ ಗೆ ಕಿಚ್ಚ ಸುದೀಪ್ ಚಾಲನೆ ನೀಡಿ ಹೊಸ ಪ್ರಶಸ್ತಿ ಸಮಾರಂಭಕ್ಕೆ ಶುಭ ಹಾರೈಸಿದರು. Kiccha Sudeep Nandi Film AwardKiccha Sudeep Nandi Film Award

ಕಿಚ್ಚ ಸುದೀಪ್ ಮಾತನಾಡಿ, ‌ಸಂಸ್ಥಾಪಕರಿಗೆ ಒಳ್ಳೆದಾಗಲಿ. ಅವಾರ್ಡ್ಸ್ ಕಾರ್ಯಕ್ರಮಕ್ಕೆ ಹೋಗುವುದು ಬಿಟ್ಟು 2003-2004 ಕೊನೆ.‌ಆ ಬಳಿಕ ಅವಾರ್ಡ್ಸ್ ಕಾರ್ಯಕ್ರಮಕ್ಕೆ ಹೋಗೇ ಇಲ್ಲ. ಅದಕ್ಕೆ ಬೇರೆ ಇತಿಹಾಸವಿದೆ. ‌ಆದರೆ ಇಲ್ಲಿ ಆ ಅವಾರ್ಡ್ಸ್ ಮಹತ್ವ ಬೇರೆ ಕಲಾವಿದರಿಗೆ ಆಗಲಿ. ಎಲ್ಲರಿಗೂ ಎಷ್ಟು ಮುಖ್ಯ ಎನ್ನುವುದನ್ನು ನೋಡಿದ್ದೇನೆ. ನನ್ನ ಮನವಿ ಏನೆಂದರೆ ಯಾರಿಗೆ ಹೋಗಬೇಕು ಅವರಿಗೆ ಹೋಗಲಿ. ಮಿಕ್ಕಿದವರೆಲ್ಲಾ ದುಡ್ಡು ಮಾಡುತ್ತಿದ್ದಾರೆ. ಅವಾರ್ಡ್, ದುಡ್ಡು ಅಂತಾ ನೋಡಿದಾಗ ಪ್ರಶಸ್ತಿ ಬಿಟ್ಟು ದುಡ್ಡಿಗೆ ಕೈ ಹಾಕುವವರು ಇದ್ದಾರೆ. ಪ್ರಶಸ್ತಿಗೆ ಗೌರವ ಕೊಟ್ಟು ಅದಕ್ಕಾಗಿ ಬಾಳಿ ಬದುಕುವವರಿಗೆ ಅವರಿಗೆ ನೀಡಿ. ನಂದಿ ಬಹಳ ಶ್ರೇಷ್ಠ. ಅದರ ಹೆಸರಲ್ಲಿ ನಡೆಸುತ್ತೀರಾ ಎಂದರೆ ಅಷ್ಟೇ ಶುದ್ಧವಾಗಿ ಇರಲಿ. ಕರ್ನಾಟಕದಲ್ಲಿ ಅವಾರ್ಡ್ಸ್ ಪ್ರೋಗ್ರಾಂ ನಡೆಸಲು ಬಹಳ ಕೊರತೆ ಇದೆ. ತಲೆ ಎತ್ತಿ ನೋಡುವ ಅವಾರ್ಡ್ಸ್ ಪ್ರೋಗ್ರಾಂ ಇಲ್ಲ. ಅಂತಹ ಪ್ರಶಸ್ತಿ ಕಾರ್ಯಕ್ರಮ ನಂದಿ ಆಗಲಿ ಎಂದು ಶುಭ ಹಾರೈಸಿದರು.Kiccha Sudeep Nandi Film Award

ನೆರೆಯ ಆಂಧ್ರಪ್ರದೇಶ ಮನರಂಜನಾ ಕ್ಷೇತ್ರದ ಸಾಧಕರಿಗೆ ಕೊಡುವ ರಾಜ್ಯ ಪ್ರಶಸ್ತಿಗೂ ನಂದಿ ಅವಾರ್ಡ್ಸ್ ಎಂದೇ ಹೆಸರಿದೆ. ಆದರೆ, ಆ ಪ್ರಶಸ್ತಿಗೂ ಈ ಪ್ರಶಸ್ತಿಗೂ ಸಮಬಂಧವಿಲ್ಲ. ಎರಡು ಬೇರೆ ಬೇರೆ. ಆಂಧ್ರಪ್ರದೇಶದಂತೆ ಕನ್ನಡದ ಪ್ರಶಸ್ತಿಗೂ ನಂದಿ ಅವಾರ್ಡ್ ಎಂದೇ ಕರೆಯಲಾಗುತ್ತಿದೆ. ಇದಕ್ಕೆ ಕಾರಣವೂ ಇದೆ. ನಂದಿ ಎನ್ನುವುದು ಕನ್ನಡದ ಪಾಲಿಗೂ ಒಂದು ಪವರ್‌ಫುಲ್ ಇಮೇಜ್ ಎನಿಸುವ ಲಾಂಛನ. ಆ ಕಾರಣದಿಂದಲೇ ‘ನಂದಿ’ ಎಂಬ ಹೆಸರನ್ನೇ ಕನ್ನಡದ ಪ್ರಶಸ್ತಿಗೂ ಇಡಲಾಗಿದೆ.

ನಂಬಿಕೆಗಿಂತ ಸಂದೇಹವೆ ಹೆಚ್ಚಾದರೆ ಯಾವ ಸಂಬಂಧವೂ ಉಳಿಯಲ್ಲ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಿಕಟಪೂರ್ವ ಅಧ್ಯಕ್ಷ ಭಾ.ಮಾ.ಹರೀಶ್, ನಿರ್ಮಾಪಕ ನಿತ್ಯಾನಂದ ಪ್ರಭು, ಪದ್ಮಾವತಿ ಚಂದ್ರಶೇಖರ್ ಹಾಗೂ ಅನಿತಾ ರೆಡ್ಡಿ ‘ನಂದಿ ಫಿಲ್ಮಂ ಅವಾರ್ಡ್’ ಸಂಸ್ಥಾಪರಾಗಿದ್ದಾರೆ. ಭಾ.ಮಾ.ಗಿರೀಶ್, ಹರ್ಷಿತಾ, ನಂದಿತಾ ಹಾಗೂ ಅಶೋಕ್ ಡೈರೆಕ್ಟರ್ಸ್ ಗಳಾಗಿದ್ದಾರೆ.Kiccha Sudeep Nandi Film Award

ನಂದಿ ಪ್ರಶಸ್ತಿಯಲ್ಲಿ ಕನ್ನಡ ಸಿನಿಮಾಗಳು, ಪ್ರಾದೇಶಿಕವಾಗಿ ಭಾಷೆಗಳಾದ ತುಳು, ಕೊಡವ, ಕೊಂಕಣಿ, ಬ್ಯಾರಿ ಹಾಗೂ ಬಂಜಾರ ಈ ಭಾಷೆಗಳಿಗೆ ಪ್ರಾಮುಖ್ಯತೆ ಕೊಡಲಾಗುತ್ತದೆ. ಸಾಹಿತ್ಯ, ಮುದ್ರಣ ಹಾಗೂ ದೃಶ್ಯ ಮಾಧ್ಯಮಗಳಿಗೂ ಪ್ರಶಸ್ತಿ ನೀಡಲಾಗುತ್ತದೆ. 50ಕ್ಕೂ ಹೆಚ್ಚು ವಿಭಾಗದ ಪ್ರತಿಭೆಗಳನ್ನು ಗುರುತಿಸಿ ಪ್ರಶಸ್ತಿ ನೀಡಲಾಗುತ್ತದೆ’ ಎಂದು ಮಾಹಿತಿ ನೀಡಿದ್ದಾರೆ.

ಥ್ರಿಲ್ಲರ್ ಚಿತ್ರ ‘ಕಣಂಜಾರು’ ಮೋಷನ್ ಪೋಸ್ಟರ್ ಶೀರ್ಷಿಕೆ ಬಿಡುಗಡೆ

ಕನ್ನಡ ಚಿತ್ರರಂಗಕ್ಕೆ ಅದರದ್ದೇ ಆದ ಸ್ವಂತ ಪ್ರಶಸ್ತಿ ನೀಡುವ ವೇದಿಕೆ, ಆ ಮೂಲಕ ಕನ್ನಡದ ಪ್ರತಿಭೆಗಳನ್ನು ನಾವೇ ಗುರುತಿಸಿ ಬೆನ್ನು ತಟ್ಟುವ ಪ್ರಯತ್ನ ಮಾಡಬೇಕಿದ್ದು, ನಂದಿ ಅವಾರ್ಡ್ ಘೋಷಣೆಯಾಗಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಬೆಂಗಳೂರಿನ ಒರಿಯನ್ ಮಾಲ್‌ನಲ್ಲಿ ಡಿಸೆಂಬರ್ 6 ರಂದು ನಡೆಯಲಿದೆ. ಕಾರ್ಯಕ್ರಮದಲ್ಲಿ ಚಿತ್ರರಂಗದ ಗಣ್ಯರು, ರಾಜಕಾರಣಿಗಳು ಭಾಗಿಯಾಗಲಿದ್ದಾರೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…