ಕಿಚ್ಚ ಸುದೀಪ್ ಬಿಡುಗಡೆ ಮಾಡಿದರು “ಕೌಸಲ್ಯ ಸುಪ್ರಜಾ ರಾಮ” ಚಿತ್ರದ ಟ್ರೇಲರ್ .

Kichcha Sudeep released the trailer of "Kausalya Supraja Rama".

ಶಶಾಂಕ್ ನಿರ್ದೇಶನದಲ್ಲಿ ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ “ಕೌಸಲ್ಯ ಸುಪ್ರಜಾ ರಾಮ” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಟ್ರೇಲರ್ ಅನಾವರಣ ಮಾಡಿದರು. ‌

ಈ ಟ್ರೇಲರ್ ನಲ್ಲಿ ಬಹಳ ಒಳ್ಳೆಯ ಕಥೆಯನ್ನು ಕಂಡೆ ಎಂದು ಮಾತು ಪ್ರಾರಂಭಿಸಿದ ಕಿಚ್ಚ ಸುದೀಪ್,ಇಲ್ಲಿ ನಂಬಿಕೆ ಮತ್ತು ಸಂಬಂಧಗಳ ಸಂಘರ್ಷ ಇದೆ. ಶಶಾಂಕ್ ಅವರು ಎಮೋಷನ್ ಗಳನ್ನು ಹಿಡಿದಿಡುವ ರೀತಿ ನನಗೆ ಇಷ್ಟ. ಚಿತ್ರದ ಹಾಡುಗಳು ಚೆನ್ನಾಗಿವೆ. ಈ ಚಿತ್ರ ಸಹ ಚೆನ್ನಾಗಿ ಮೂಡಿಬಂದಿರುತ್ತದೆ. ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು. Kichcha Sudeep released the trailer of "Kausalya Supraja Rama".

ನಾನು ಇದುವರೆಗೂ ಮಾಡಿರುವ ಸಿನಿಮಾಗಳಲ್ಲಿ ಬೆಸ್ಟ್ ಸಿನಿಮಾ ಇದು. ಕಾರಣ ಈ ಚಿತ್ರದ ಕಥೆ. ಈ ಕಥೆಗೆ ಯಾವುದೋ ಒಂದು ಆಯಾಮವಿಲ್ಲ, ಹಲವು ಆಯಾಮಗಳಿವೆ. ಸಿನಿಮಾ ನೋಡುವ ಪ್ರತಿಯೊಬ್ಬರಿಗೂ ರಿಲೇಟ್ ಆಗುವ ಕಥೆ ಇದು. ಪ್ರತಿಯೊಬ್ಬರೂ ಚಿತ್ರದಲ್ಲಿನ ಯಾವುದಾದರೊಂದು ಪಾತ್ರದ ಜೊತೆಗೆ ರಿಲೇಟ್ ಮಾಡಿಕೊಳ್ಳಬಹುದು. ಈ ತರಹದ ಕಥೆ ಸಿಗೋದು ಕಷ್ಟ. ಇದು ದೊಡ್ಡ ಮಟ್ಟದಲ್ಲಿ ಸದ್ದು ಮಾಡಬಹುದು ಎಂಬ ನಿರೀಕ್ಷೆ ಇದೆ. ಕೃಷ್ಣ ಅವರನ್ನು ಬೇರೆ ತರಹ ತೋರಿಸುವ ಪ್ರಯತ್ನ ಮಾಡಿದ್ದೇನೆ. ಮಿಲನಾ ಅವರನ್ನು ಚಿತ್ರಕ್ಕೆ ಆಯ್ಕೆ ಮಾಡಿದ್ದು ಬೇರೆ ಕಾರಣಕ್ಕಲ್ಲ, ಅವರ ಪ್ರತಿಭೆಗಾಗಿ. ಆ ಪಾತ್ರ ನಿಭಾಯಿಸುವುದು ಬಹಳ ಕಷ್ಟ. ಬಹಳ ನೈಜವಾಗಿ ಮತ್ತು ಸೆನ್ಸಿಬಲ್ ಆಗಿ ನಟಿಸಬೇಕಿತ್ತು. ನಿರೀಕ್ಷೆಗೂ ಮೀರಿ ಅವರು ನಟಿಸಿದ್ದಾರೆ. ಬೃಂದಾ ಅವರ ಅಭಿನಯ ಕೂಡ ಅದ್ಭುತವಾಗಿದೆ. ಜುಲೈ 28ಕ್ಕೆ ಚಿತ್ರ ಬಿಡುಗಡೆಯಾಗುತ್ತಿದೆ. ಇಷ್ಟವಾಗಬಹುದೆಂಬ ನಂಬಿಕೆ ಇದೆ ಎಂದು ನರ್ದೇಶಕ ಶಶಾಂಕ್ ತಿಳಿಸಿದರು. Kichcha Sudeep released the trailer of "Kausalya Supraja Rama".

ನಾನು ಇಷ್ಟು ವರ್ಷಗಳಲ್ಲಿ ಕೇಳಿರುವ ದಿ ಬೆಸ್ಟ್ ಕಥೆ ಇದು ಎಂದ ನಾಯಕ ಡಾರ್ಲಿಂಗ್ ಕೃಷ್ಣ, ಈ ಚಿತ್ರದಲ್ಲಿ ಸಾಕಷ್ಟು ವಿಷಯಗಳನ್ನು ಮನರಂಜನಾತ್ಮಕವಾಗಿ ಹೇಳಿದ್ದಾರೆ. ಶಶಾಂಕ್ ಅವರು ಬಂದಾಗ, ಕಥೆ ಇರಲಿಲ್ಲ. ನಿಮಗೆ ಯಾವ ತರಹದ ಸಿನಿಮಾ ಬೇಕು ಎಂದು ಕೇಳಿದರು. ನೀವು ನಿಮ್ಮ ಸ್ಟೈಲ್ ನಲ್ಲೇ ಮಾಡಿ ಎಂದು ಹೇಳಿದೆ. ಒಂದು ತಿಂಗಳ ನಂತರ ಈ ಕಥೆ ತಂದರು. ಬಹಳ ಸುಲಭವಾಗಿ ಮುಗಿದ ಚಿತ್ರ ಇದು. ನಟನೆ ಮಾಡಿದ್ದೇ ಗೊತ್ತಾಗಲಿಲ್ಲ. ಈ ಸಿನಿಮಾ ಎಲ್ಲರ ಮನಸ್ಸಿಗೂ ಹತ್ತಿರವಾಗಲಿದೆ ಎಂದು ತಿಳಿಸಿದರು. Kichcha Sudeep released the trailer of "Kausalya Supraja Rama".

ಶಶಾಂಕ್ ಅವರು ಬಂದು ಕಥೆ ಹೇಳಿದಾಗ ಬಹಳ ಇಷ್ಟವಾಯಿತು. ನಮ್ಮ ಕೌರವ ಪ್ರೊಡಕ್ಷನ್ ಹೌಸ್ ಹಾಗೂ ಶಶಾಂಕ್ ಸಿನಿಮಾಸ್ ಜೊತೆ ಸೇರಿ ಈ ಚಿತ್ರ‌ ನಿರ್ಮಾಣ ಮಾಡಿದ್ದೇವೆ.‌ ಅರ್ಜುನ್ ಜನ್ಯ ಸಂಗೀತ ನಿರ್ದೇಶನದಲ್ಲಿ ಮೂಡಿಬಂದಿರುವ ಹಾಡುಗಳು ಈಗಾಗಲೇ ಹಿಟ್ ಆಗಿದೆ. ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ಸುದೀಪ್ ಅವರಿಗೆ ಧನ್ಯವಾದ ಎಂದು ಬಿ.ಸಿ.ಪಾಟೀಲ್.

ಚಿತ್ರದಲ್ಲಿ ನಟಿಸಿರುವ ಮಿಲನ ನಾಗರಾಜ್, ಬೃಂದಾ ಆಚಾರ್ಯ, ನಾಗಭೂಷಣ್ ಸೇರಿದಂತೆ ಅನೇಕ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾತನಾಡಿದರು.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…