ಖ್ಯಾತ ನಿರ್ದೇಶಕ ಆರ್ ಚಂದ್ರು ಬಿಡುಗಡೆ ಮಾಡಿದರು “ಕಿರಿಕ್ ಶಂಕರ್” ಚಿತ್ರದ ಟ್ರೇಲರ್.

ಸಿನಿಮಾ ಇದೇ 27ಕ್ಕೆ ರಾಜ್ಯಾದ್ಯಂತ ಬಿಡುಗಡೆ.

ಲೂಸ್ ಮಾದ ಯೋಗಿ ನಾಯಕರಾಗಿ ನಟಿಸಿರುವ “ಕಿರಿಕ್ ಶಂಕರ್” ಚಿತ್ರದ ಟ್ರೇಲರನ್ನು ಖ್ಯಾತ ನಿರ್ದೇಶಕ ಆರ್ ಚಂದ್ರು ಬಿಡುಗಡೆ ಮಾಡಿ ಶುಭ ಕೋರಿದರು.

ನಾನು “ತಾಜ್ ಮಹಲ್” ಚಿತ್ರ ಮಾಡಿದಾಗಿನಿಂದಲೂ ಎಂ ಎನ್ ಕುಮಾರ್ ಅವರು ನೀಡುತ್ತಿರುವ ಪ್ರೋತ್ಸಾಹ ಅಪಾರ. ಅವರು ಈಗ ಸಿನಿಮಾ ಮಾಡು ಅಂದರು, ನಾನು ಮಾಡಲು ಸಿದ್ದ. ಅವರ ನಿರ್ಮಾಣದಲ್ಲಿ ಮೂಡಿಬಂದಿರುವ ಈ ಚಿತ್ರಕ್ಕೆ ಹಾಗೂ ಇಡೀ ತಂಡಕ್ಕೆ ನನ್ನ ಶುಭಾಶಯ. ಚಿತ್ರ ಯಶಸ್ವಿಯಾಗಲಿ ಅಂದರು ಆರ್ ಚಂದ್ರು. ಮತ್ತೊಬ್ಬ ಅತಿಥಿ ALL OK ಕೂಡ ಚಿತ್ರತಂಡಕ್ಕೆ ಶುಭ ಕೋರಿದರು.WhatsApp Image 2022 05 23 at 7.52.02 PM 1

ಇಡೀ ತಂಡದ ಪರಿಶ್ರಮದಿಂದ ಈ ಚಿತ್ರ ಚೆನ್ನಾಗಿ ಮೂಡಿಬಂದಿದೆ. ಒಳ್ಳೆಯ ಮನಸ್ಸುಗಳು ಸೇರಿ ಮಾಡುವ ಕೆಲಸ ಒಳ್ಳೆಯದೆ ಆಗುತ್ತದೆ ಎಂಬ ಭರವಸೆ ಇದೆ. ನಮ್ಮ ಚಿತ್ರ ನೋಡಿ ಹಾರೈಸಿ ಎಂದರು ನಿರ್ದೇಶಕ ಅನಂತರಾಜ್.WhatsApp Image 2022 05 23 at 7.52.03 PM 2

ನಾನು‌ ಏಪ್ರಿಲ್ ನಲ್ಲಿ ಬಿಡುಗಡೆ ಮಾಡುವುದಾಗಿ ಹೇಳಿದ್ದೆ.‌ ತುಂಬಾ ಚಿತ್ರಗಳು ಬಿಡುಗಡೆಯಾಗಿದ್ದರಿಂದ ಈ 27ರಂದು 150 ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ “ಕಿರಿಕ್ ಶಂಕರ್” ಚಿತ್ರವನ್ನು ಬಿಡುಗಡೆ ಮಾಡುತ್ತಿದ್ದೇವೆ ಎಂದರು ನಿರ್ಮಾಪಕ ಎಂ.ಎನ್.ಕುಮಾರ್.WhatsApp Image 2022 05 23 at 7.52.02 PM

ನಾನು ಅಣ್ಣವ್ರ ಬ್ಯಾನರ್ ಬಿಟ್ಟರೆ ಇದೇ ದೊಡ್ಡ ಬ್ಯಾನರ್ ನಲ್ಲಿ ನಟನೆ ಮಾಡಿರುವುದು. ನಿರ್ದೇಶಕರು ಸಹ ಸಾಕಷ್ಟು ಹಿಟ್ ಚಿತ್ರಗಳನ್ನು ನೀಡಿರುವವರು. ಅವರ ಜೊತೆ ಕೆಲಸ ಮಾಡಿದ್ದು ಸಂತೋಷ ತಂದಿದೆ. ಎಲ್ಲರ ಪರಿಶ್ರಮದಿಂದ ಚಿತ್ರ ಚೆನ್ನಾಗಿ ಬಂದಿದೆ ಎಂದರು ನಾಯಕ ಲೂಸ್ ಮಾದ ಯೋಗಿ.WhatsApp Image 2022 05 23 at 7.52.03 PM 1

ನಾಯಕಿ ಅದ್ವಿಕ ಸಹ ಅಭಿನಯದ ಅನುಭವ ಹಂಚಿಕೊಂಡರು. ನಟ ರಿತೇಶ್, ನಟ ಹಾಗೂ ಸಂಕನಕಾರ ನಾಗೇಂದ್ರ ಅರಸ್ , ಸಂಗೀತ ನಿರ್ದೇಶಕ ವೀರ ಸಮರ್ಥ್, ಛಾಯಾಗ್ರಾಹಕ ಜೆ.ಜಿ ಕೃಷ್ಣ ಹಾಗೂ
ಕಾರ್ಯಕಾರಿ ನಿರ್ಮಾಪಕ ಯೋಗೀಶ್ ಹುಣಸೂರು “ಕಿರಿಕ್ ಶಂಕರ್” ಚಿತ್ರದ ಬಗ್ಗೆ ಮಾತನಾಡಿದರು.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…