ಇದು “ಕೊರಗಜ್ಜ ದೈವ”ದ ನಿಜಜೀವನದ ಕಥೆಯ ಚಿತ್ರವೇ….?

koragajja daiva story in kannada MOVIE

ದ್ರತಿ ಕ್ರಿಯೇಷನ್ಸ್ ಮತ್ತು ಸಕ್ಸಸ್ ಫಿಲ್ಮ್ಸ್ ಬ್ಯಾನರ್ ಅಡಿ ತ್ರಿವಿಕ್ರಮ್ ಸಪಲ್ಯ ನಿರ್ಮಿಸುತ್ತಿರುವ , ಸುಧೀರ್ ಅತ್ತಾವರ್ ನಿರ್ದೇಶನದಲ್ಲಿ “ಕರಿ ಹೈದ….ಕರಿ ಅಜ್ಜ …”.ಸಿನೆಮಾದ ಮುಹೂರ್ತ ಸಮಾರಂಭವು ಅದ್ದೂರಿಯಾಗಿ ನೆರವೇರಿತು. ಬೆಳ್ತಂಗಡಿ ತಾಲೂಕಿನ ಬಳ್ಳಮಂಜದ ಇತಿಹಾಸ ಪ್ರಸಿದ್ಧ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಸ್ಥಳಿಯ ಶಾಸಕ ಶ್ರೀ ಹರೀಶ್ ಪೂಂಜ ರವರು ಕ್ಯಾಮರ ಚಾಲನೆ ಮಾಡುವುದರ ಮೂಲಕ ಅದ್ದೂರಿ ಚಾಲನೆ ನೀಡಿದರು. ಮಾತ್ರಶ್ರೀ ಕಮಲ ಕೆ ಸಪಲ್ಯ ಆರಂಭ ಫಲಕ ತೋರಿಸಿದರು. ಇತ್ತೀಚಿನ ಹಲವಾರು ವರ್ಷಗಳಿಂದ ಕೊರಗಜ್ಜನ ಮಹಿಮೆ ಮತ್ತು ಕಾರ್ಣಿಕವನ್ನು ತೆರೆಯ ಮೇಲೆ ತರಬೇಕೆಂಬ ಸಹವಾಸವನ್ನು ಹಲವಾರು ನಿರ್ಮಾಪಕರು ಯತ್ನಿಸುತ್ತಿದ್ದರು.koragajja daiva story in kannada MOVIE

ಇದೀಗ ಸುಧೀರ್ ಅತ್ತಾವರ್ ಕೊರಗಜ್ಜ ನ ಜೀವನದ ಬಗ್ಗೆ ಸಾಕಷ್ಟು ಮಾಹಿತಿಗಳನ್ನು ಕಲೆ ಹಾಕಿ, ಕೊರಗಜ್ಜನ ಜನಾಂಗದ ಮಹನೀಯರೊಂದಿಗೆ ಚರ್ಚಿಸಿ, ಸುಮಾರು 12ನೇ ಶತಮಾನದಲ್ಲಿದ್ದ ಕೊರಗಜ್ಜನ ನಿಜ ಬದುಕಿನ ಯಾರಿಗೂ ತಿಳಿದಿರದಂತಹ ಸಾಕಷ್ಟು ವಿಷಯಗಳನ್ನು ಈ ಸಿನಿಮಾದ ಮೂಲಕ ಜಗತ್ತಿಗೆ ತೋರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇತ್ತೀಚೆಗೆ ಸುಧೀರ್ ನಿರ್ದೇಶನದ ಮರಾಠಿ -ಕನ್ನಡ ಸಿನಿಮಾ ಶೂಟಿಂಗ್ ಸಂಪೂರ್ಣ ಗೊಂಡು, ಅರೇಬಿಕ್- ಇಂಗ್ಲಿಷ್ ಸಿನೆಮ ಸಿನಿಮಾ “ಗುಲೇ ಬಕಾವಲಿ” ಮತ್ತು ಮರಾಠಿ-ಕನ್ನಡ ಸಿನಿಮಾ “ಅಗೋ ಳಿ ಮಂಜಣ್ಣ” ಫ್ಲೋರ್ ನಲ್ಲಿ ಇರುವ ಮಧ್ಯೆಯೇ ಇದೀಗ ಸುಧೀರ್ ಮತ್ತೊಂದು ಸಿನಿಮಾ ನಿರ್ದೇಶಿಸುತ್ತಿದ್ದಾರೆ. ಮುಹೂರ್ತ ನಡೆಸುವ ಮೊದಲು ಕೊರಗಜ್ಜನ ಸಮುದಾಯದ ಪ್ರಮುಖ ವ್ಯಕ್ತಿಗಳು ಡೊಳ್ಳು -ತಮಟೆಗಳ ಸ ವಿಶೇಷ ಪೂಜೆಯನ್ನು ಶ್ರೀ ಸುಂದರ ಬೆಳುವಾಯಿ, ಶ್ರೀ ಬಾಬು ಪಾಂಗಳ, ಶ್ರೀ ಬಲ್ ರಾಜ್, ಶ್ರೀ ರಮೇಶ್ ಮೊದಲಾದ ಮಹನೀಯರು ಮತ್ತು ಗುರಿಕಾರರು ಹಳೆಯ ಶೈಲಿಯ ಪೂಜಾ ಕಾರ್ಯಕ್ರಮವನ್ನು ನಡೆಸಿಕೊಟ್ಟು ಸಿನೆಮಾಕ್ಕೆ ಶುಭ ಹಾರೈಸಿದರು.koragajja daiva story in kannada MOVIE
ಖ್ಯಾತ ಹಾಲಿವೂಡ್-ಬಾಲಿವೂಡ್ ನಟ ಕಬೀರ್ ಬೇಡಿ ಯವರು ವಿಶೇಷ ಪಾತ್ರದಲ್ಲಿ ನಟಿಸುತ್ತಿರುವ ಈ ಚಿತ್ರದಲ್ಲಿ ಖ್ಯಾತ ನಾಟಿಯರಾದ ಭವ್ಯ ಮತ್ತು ಶ್ರುತಿ ಕೂಡಾ ಅಭಿನಯಿಸುತ್ತಿದ್ದಾರೆ. ಭರತ್ ಸೂರ್ಯ ಎನ್ನುವ ಹೊಸ ಕಲಾವಿದನನ್ನು ಈ ಚಿತ್ರದ ಮೂಲಕ ಪರಿಚಯಿಸುತ್ತಿದ್ದಾರೆ. ವಿದ್ಯಾಧರ್ ಶೆಟ್ಟಿ ಸಂಕಲನದ ಜೊತೆಗೆ ಎಂಟುನೂರು ವರ್ಷಗಳ ಇತಿಹಾಸದ ದಾಖಲೆ ಮತ್ತು ಪುರಾವೆಗಳನ್ನು ಕಲೆ ಹಾಕುವ ನಿಟ್ಟಿನಲ್ಲಿ ಶ್ರಮಿಸುತ್ತಿದ್ದಾರೆ. ಪವನ್ ವಿ ಕುಮಾರ್ ಮತ್ತು ಗಣೇಶ್ ಕೆಳಮನೆ ಕ್ಯಾಮರಾ, ಸುಧೀರ್- ಕ್ರಷ್ಣ ರವಿ ಸಂಗೀತ, ಸುಧೀರ್ ಅತ್ತಾವರ್ ಕಲೆ ಚಿತ್ರಕ್ಕಿದೆ. ತ್ರಿವಿಕ್ರಮ ಬೆಳ್ತಂಗಡಿ ನಿರ್ಮಾಣದ ನಾಲ್ಕನೆಯ ಸಿನೆಮಾ

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…