ಸುಂದರ ಶೀರ್ಷಿಕೆಯ “ಕೌಸಲ್ಯಾ ಸುಪ್ರಜಾ ರಾಮ” ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ.

kousalya supraja rama kannada movie

ಶಶಾಂಕ್ ನಿರ್ದೇಶನದ ಈ ಚಿತ್ರಕ್ಕೆ ಬೆಂಗಳೂರಿನಲ್ಲಿ ಬಿರುಸಿನ ಚಿತ್ರೀಕರಣ.

ಸದಭಿರುಚಿ ಚಿತ್ರಗಳನ್ನು ನಿರ್ದೇಶಿಸಿ ಕನ್ನಡಿಗರ. ಮನಗೆದ್ದಿರುವ ನಿರ್ದೇಶಕ ಶಶಾಂಕ್ ಹಾಗೂ ತಮ್ಮ ಅಭಿನಯದ ಮೂಲಕ ಜನಪ್ರಿಯರಾಗಿರುವ ಡಾರ್ಲಿಂಗ್ ಕೃಷ್ಣ ಕಾಂಬಿನೇಶನ್ ನಲ್ಲಿ ಬರುತ್ತಿರುವ ಚಿತ್ರಕ್ಕೆ “ಕೌಸಲ್ಯಾ ಸುಪ್ರಜಾ ರಾಮ” ಎಂಬ ಸುಂದರ ಶೀರ್ಷಿಕೆ ಇಡಲಾಗಿದೆ. ಇತ್ತೀಚಿಗೆ ಈ ಚಿತ್ರದ ಶೀರ್ಷಿಕೆ ಅನಾವರಣ ಸಮಾರಂಭ ನಡೆಯಿತು. ಒಂದು ವಿಭಿನ್ನ ವಿಡಿಯೋ ಮೂಲಕ ಶಶಾಂಕ್ ತಮ್ಮ ಚಿತ್ರದ ಟೈಟಲ್ ಬಿಡುಗಡೆ ಮಾಡಿರುವುದು ವಿಶೇಷ.kousalya supraja rama kannada movie

“ಕೌಸಲ್ಯಾ ಸುಪ್ರಜಾ ರಾಮ” ನಾವು ದಿನ ಬೆಳಗ್ಗೆ ಕೇಳುವ ಸುಮಧುರ ಸುಪ್ರಭಾತದ ಮೊದಲ ಸಾಲು. ಹೆಸರೆ ಹೇಳುವಂತೆ ಇದೊಂದು ತಾಯಿ ಮಗನ ಭಾವನಾತ್ಮಕ ಸನ್ನಿವೇಶಗಳನ್ನೊಳಗೊಂಡಿರುವ ಚಿತ್ರ. ಹಾಗಂತ ನಮ್ಮ ಚಿತ್ರದಲ್ಲಿ ಮನೋರಂಜನೆಗೆ ಕೊರತೆಯಿಲ್ಲ. ಉತ್ತಮ ಮನೋರಂಜನೆ ಹಾಗೂ ಸೆಂಟಿಮೆಂಟ್ ಎರಡು ಇರುವ, ಕುಟುಂಬ ಸಮೇತ ನೋಡಬಹುದಾದ ಸುಂದರ ಕೌಟುಂಬಿಕ ಚಿತ್ರ. ಈ ಚಿತ್ರದ ನಾಯಕರಾಗಿ ಡಾರ್ಲಿಂಗ್ ಕೃಷ್ಣ ನಟಿಸುತ್ತಿದ್ದು, ಅವರ ತಾಯಿ – ತಂದೆ ಪಾತ್ರದಲ್ಲಿ ಸುಧಾ ಬೆಳವಾಡಿ, ರಂಗಾಯಣ ರಘು ಅಭಿನಯಿಸುತ್ತಿದ್ದಾರೆ. ಅಚ್ಯತಕುಮಾರ್, ಗಿರಿರಾಜ್ ಸಹ ತಾರಾಬಳಗದಲ್ಲಿದ್ದಾರೆ. ಇಬ್ಬರು ನಾಯಕಿಯರಿರುತ್ತಾರೆ. ಅದರಲ್ಲಿ ಒಬ್ಬರು ಹೊಸಬರು. ಸದ್ಯದಲ್ಲೇ ನಾಯಕಿಯರ ಪರಿಚಯ ಮಾಡಿಸಲಾಗುವುದು. ಈಗಾಗಲೇ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆಯುತ್ತಿದೆ. ಐದು ಹಾಡುಗಳಿದೆ. ಅರ್ಜುನ್ ಜನ್ಯ ಸಂಗೀತ ನೀಡುತ್ತಿದ್ದಾರೆ. ಸುಜ್ಞಾನ್ ಈ ಚಿತ್ರದ ಛಾಯಾಗ್ರಾಹಕರು. ನಮ್ಮ ಶಶಾಂಕ್ ಸಿನಿಮಾಸ್ ಹಾಗೂ ಬಿ.ಸಿ.ಪಾಟೀಲ್ ಅವರ ಕೌರವ ಪ್ರೊಡಕ್ಷನ್ ಹೌಸ್ ಜಂಟಿಯಾಗಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. ನಾನು ಬಿ.ಸಿ.ಪಾಟೀಲ್ ಅಭಿನಯದ “ಕೌರವ” ಚಿತ್ರದಲ್ಲಿ ಎಸ್ ಮಹೇಂದರ್ ಅವರ ಬಳಿ ಕೆಲಸ ಮಾಡಿದ್ದೆ. ಆಗಿನಿಂದಲೂ ಬಿ.ಸಿ.ಪಾಟೀಲ್ ಅವರು ಪರಿಚಯ. ಈಗ ಅವರ ಜೊತೆ ನಿರ್ಮಾಣ ಮಾಡುತ್ತಿರುವುದು ಸಂತಸ ತಂದಿದೆ ಎನ್ನುತ್ತಾರೆ ಶಶಾಂಕ್.kousalya supraja rama kannada movie

ಸದಭಿರುಚಿ ಚಿತ್ರಗಳ ನಿರ್ದೇಶಕ ಶಶಾಂಕ್ ಅವರ ನಿರ್ದೇಶನದಲ್ಲಿ ನಟಿಸಬೇಕೆಂಬ ಆಸೆ ಈಗ ಈಡೇರಿದೆ. “ಕೌಸಲ್ಯಾ ಸುಪ್ರಜಾ ರಾಮ” ಸುಂದರ ಶೀರ್ಷಿಕೆ. “ಲವ್ ಮಾಕ್ಟೇಲ್”, ” ಲಕ್ಕಿ ಮ್ಯಾನ್” ಸೇರಿದಂತೆ ನನ್ನ ಅನೇಕ ಚಿತ್ರಗಳ ಶೀರ್ಷಿಕೆ ಇಂಗ್ಲಿಷ್ ನಲ್ಲಿದೆ‌. ಈಗ ಇಂಗ್ಲಿಷ್ ಇಲ್ಲದ ಶೀರ್ಷಿಕೆ ಸಿಕ್ಕಿದೆ. ಕಥೆ ಹಾಗೂ ನನ್ನ ಪಾತ್ರ ತುಂಬಾ ಚೆನ್ನಾಗಿದೆ ಎಂದರು ನಾಯಕ ಡಾರ್ಲಿಂಗ್ ಕೃಷ್ಣ.kousalya supraja rama kannada movie

ನಾನು ಶಶಾಂಕ್ ಅವರನ್ನು ಬಹಳ ದಿನಗಳಿಂದ ನಿಮ್ಮ ಚಿತ್ರದಲ್ಲಿ ನಟಿಸಬೇಕೆಂಬೆದು ಕೇಳುತ್ತಿದೆ‌. ಈಗ ಅವಕಾಶ ಕೊಟ್ಟಿದ್ದಾರೆ ಎಂದರು ನಿರ್ದೇಶಕ ಹಾಗೂ ನಟ ಗಿರಿರಾಜ್. ಸಹ ನಿರ್ಮಾಪಕ ಹನುಮಂತ ರಾವ್, ಛಾಯಾಗ್ರಾಹಕ ಸುಜ್ಞಾನ್, ಶಶಾಂಕ್ ಅವರೊಂದಿಗೆ ರೈಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಯದುನಂದನ್ ಹಾಗೂ ಟೈಟಲ್ ಅನಿಮೇಷನ್‌ ಮಾಡಿರುವ ಸಂತೋಷ್ ರಾಧಾಕೃಷ್ಣನ್ ಈ ಚಿತ್ರದ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡರು. ಗಿರಿ ಮಹೇಶ್ ಈ ಚಿತ್ರದ ಸಂಕಲನಕಾರರು.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…