ಟ್ರೇಲರ್ ನಲ್ಲೇ ಗಮನ ಸೆಳೆದ “ಕ್ಷೇತ್ರಪತಿ” ಬಹು ನಿರೀಕ್ಷಿತ ಈ ಚಿತ್ರ ಆಗಸ್ಟ್ 18 ರಂದು ತೆರೆಗೆ .

"Kshetrapati" attracted attention in the trailer itself.

ಬಹು ನಿರೀಕ್ಷಿತ ಈ ಚಿತ್ರ ಆಗಸ್ಟ್ 18 ರಂದು ತೆರೆಗೆ .

ಖ್ಯಾತ ನಟ ನವೀನ್ ಶಂಕರ್ ಅಭಿನಯದ “ಕ್ಷೇತ್ರಪತಿ” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು‌. ಟ್ರೇಲರ್ ಈಗಾಗಲೇ ಜನಮನಸೂರೆಗೊಳ್ಳುತ್ತಿದ್ದು, ಚಿತ್ರ ಆಗಸ್ಟ್ 18 ರಂದು ತೆರೆಗೆ ಬರಲಿದೆ."Kshetrapati" attracted attention in the trailer itself.

ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ನಟ ನವೀನ್ ಶಂಕರ್, “ಗುಲ್ಟು” ಚಿತ್ರದ ನಂತರ ನಿರ್ದೇಶಕ ಶ್ರೀಕಾಂತ್ ಕಟಗಿ, ಈ ಚಿತ್ರದ ಕಥೆ ಹೇಳಿದರು. ನಾನು ಉತ್ತರ ಕರ್ನಾಟಕದವನೇ ಆಗಿರುವುದರಿಂದ ಅಲ್ಲಿನ ಪರಿಸರದ ಚಿತ್ರ ಮಾಡುವ ಆಸೆಯಿತ್ತು. ಹಾಗಾಗಿ ತಕ್ಷಣ ಒಪ್ಪಿಕೊಂಡೆ. ಆದರೆ ಹಣ ಹೂಡಲು ನಿರ್ಮಾಪಕರು ಇರಲಿಲ್ಲ. ನಾವೇ ಒಂದೊಂದು ಲಕ್ಷ ಹಾಕಿ ಸಿನಿಮಾ ಆರಂಭ ಮಾಡಿದ್ದೆವು. ಆನಂತರ ಸಾಕಷ್ಟು ನಿರ್ಮಾಪಕರು ನಮ್ಮ ಜೊತೆಯಾದರು. ಆಗಷ್ಟೇ “ಕೆ ಜಿ ಎಫ್” ಬಿಡುಗಡೆಯಾಗಿತ್ತು. ರವಿ ಬಸ್ರೂರ್ ಅವರ ಬಳಿ ಸಂಗೀತ ಸಂಯೋಜನೆ ಮಾಡಿಸಬೇಕೆಂಬ ಇರಾದೆ ಇತ್ತು. ಅವರು ಒಪ್ಪಿಕೊಂಡರು. ಹೀಗೆ ಆರಂಭವಾದ ಚಿತ್ರ ಈಗ ಬಿಡುಗಡೆ ಹಂತಕ್ಕೆ ಬಂದು ತಲುಪಿದೆ. ನನ್ನೊಂದಿಗೆ ಅಭಿನಯಿಸಿರುವ ಸಹ ಕಲಾವಿದರ ಅಭಿನಯ ಹಾಗೂ ತಂತ್ರಜ್ಞರ ಕಾರ್ಯವೈಖರಿ ಅದ್ಭುತವಾಗಿದೆ. ನಮ್ಮ ಚಿತ್ರ ನೋಡಿ ಹಾರೈಸಿ ಎಂದರು.

ನಾನು ಉತ್ತರ ಕರ್ನಾಟಕದ ಮೂಲದವನು. ಅಲ್ಲಿನ ಹಾಗೂ ಇಡೀ ದೇಶದಲ್ಲೇ ಇರುವ ಸಾಮಾಜಿಕ ಸಮಸ್ಯೆಗಳನ್ನ ಆಧರಸಿ ಕಥೆ ಮಾಡಿಕೊಂಡೆ. ನವೀನ್ ಶಂಕರ್ ಅವರಿಗೆ ಕಥೆ ಹೇಳಿದೆ. ಒಪ್ಪಿಕೊಂಡರು. ಉತ್ತರ ಕರ್ನಾಟಕದ ಭಾಗದಲ್ಲೇ ಹೆಚ್ಚು ಚಿತ್ರೀಕರಣ ಮಾಡಿದ್ದೇವೆ. ನಮ್ಮ ಚಿತ್ರ ಅಗಸ್ಟ್ 18 ತೆರೆಗೆ ಬರಲಿದೆ. ಚಿತ್ರ ಉತ್ತಮವಾಗಿ ಮೂಡಿಬರಲು ಸಹಕಾರ ನೀಡಿದ ನಮ್ಮ ತಂಡಕ್ಕೆ ಧನ್ಯವಾದ ಎಂದರು ನಿರ್ದೇಶಕ ಶ್ರೀಕಾಂತ್ ಕಟಗಿ."Kshetrapati" attracted attention in the trailer itself.

ಪತ್ರಕರ್ತೆಯಾಗಿ ಈ ಚಿತ್ರದಲ್ಲಿ ಕಾಣಿಸಿಕೊಂಡಿದ್ದೇನೆ ಎಂದು ನಾಯಕಿ ಅರ್ಚನಾ ಜೋಯಿಸ್ ಹೇಳಿದರು. ನಟರಾದ ರಾಹುಲ್ ಐನಾಪುರ, ಹರ್ಷ್ ಅರ್ಜುನ್ ತಮ್ಮ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ಸಹ ನಿರ್ಮಾಪಕರಾದ ಶ್ರೀನಿವಾಸ್, ದರ್ಶನ್ ಜಯಣ್ಣ, ವಿವೇಕ್ “ಕ್ಷೇತ್ರಪತಿ” ಬಗ್ಗೆ ಮಾಹಿತಿ ನೀಡಿದರು‌. ರವಿ ಬಸ್ರೂರ್ ಮ್ಯೂಸಿಕ್ & ಮೂವೀಸ್ ಅರ್ಪಿಸುತ್ತಿರುವ, ಆಶ್ರಗ ಕ್ರಿಯೇಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ “ಕ್ಷೇತ್ರಪತಿ” ಚಿತ್ರ ಪೊಲಿಟಿಕಲ್ ಡ್ರಾಮ ಕಥಾಹಂದರ ಹೊಂದಿದೆ. ದಿ ಇಮೋಷನ್ಸ್ ಫ್ಯಾಕ್ಟರಿ ಗ್ರೂಪ್ ಸಹ ನಿರ್ಮಾಣವಿರುವ ಈ ಚಿತ್ರವನ್ನು ಕೆ.ಆರ್.ಜಿ ಸ್ಟುಡಿಯೋಸ್ ಬಿಡುಗಡೆ ಮಾಡುತ್ತಿದೆ.

ಕೆ.ಜಿ.ಎಫ್ ಖ್ಯಾತಿಯ ರವಿ ಬಸ್ರೂರ್ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ವೈ ವಿ ಬಿ ಶಿವಸಾಗರ್ ಛಾಯಾಗ್ರಹಣ, ಮನು ಶೇಡ್ಗಾರ್ ಸಂಕಲನ, ನರಸಿಂಹ ಸಾಹಸ ನಿರ್ದೇಶನ ಹಾಗೂ ಜೀವನ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ನವೀನ್ ಶಂಕರ್ , ಅರ್ಚನಾ ಜೋಯಿಸ್, ಅಚ್ಯುತ್ ಕುಮಾರ್, ರಾಹುಲ್ ಐನಾಪುರ, ಕೃಷ್ಣ ಹೆಬ್ಬಾಳೆ, ಶೈಲಶ್ರೀ ಅರಸ್, ನಾಟ್ಯ ರಂಗ, ಹರ್ಷ ಅರ್ಜುನ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…