ನವೀನ್ ಶಂಕರ್ ಈಗ “ಕ್ಷೇತ್ರಪತಿ”

ಫಸ್ಟ್ ಲುಕ್ ಬಿಡುಗಡೆ ಮಾಡಿ ಶುಭಕೋರಿದ ಡಾಲಿ.

“ಗುಲ್ಟು” ಮೂಲಕ ತಮ್ಮ ಅಮೋಘ ಅಭಿನಯದಿಂದ ಕನ್ನಡಿಗರ ಮನಗೆದ್ದ ನಟ ನವೀನ್ ಶಂಕರ್. ಪ್ರಸ್ತುತ ಇವರ ನಟನೆಯ “ಕ್ಷೇತ್ರಪತಿ” ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಡಾಲಿ ಧನಂಜಯ ಫಸ್ಟ್ ಲುಕ್ ಬಿಡುಗಡೆ ಮಾಡಿ ಶುಭ ಕೋರಿದರು. ನಿರ್ದೇಶಕ ಸಿಂಪಲ್ ಸುನಿ ಸಹ ಕಾರ್ಯಕ್ರಮಕ್ಕೆ ಆಗಮಿಸಿ ಹಾರೈಸಿದರು.WhatsApp Image 2022 05 27 at 7.38.39 PM

ನಾನು “ಜಯನಗರ 4ನೇ ಬ್ಲಾಕ್” ಕಿರುಚಿತ್ರ ಮಾಡುತ್ತಿದ್ದಾಗ ನವೀನ್, ನಾನು ಭೇಟಿಯಾಗುತ್ತಿದ್ದೆವು. ಯಾವುದೇ ಬ್ಯಾಗ್ರೌಂಡ್ ಇಲ್ಲದೆ ನವೀನ್ ಇಷ್ಟು ಬೆಳದಿರುವುದು ನಿಜಕ್ಕೂ ಹೆಮ್ಮೆ. ಚಿತ್ರದಲ್ಲಿ ನವೀನ್ ಬಸವ ಎಂಬ ಪಾತ್ರ ಮಾಡಿದ್ದಾರೆ. ಈ ಬಸವನಿಗೆ ನಮ್ಮ ಕ್ರಾಂತಿಕಾರಿ ಬಸವಣ್ಣನವರು ಆದರ್ಶವಾಗಲಿ. ಚಿತ್ರ ಜಯಭೇರಿ ಬಾರಿಸಲಿ ಎಂದು ಹಾರೈಸಿದ ಡಾಲಿ, ನಾನು ಹಾಗೂ ನವೀನ್ ಶಂಕರ್ “ಹೊಯ್ಸಳ” ಚಿತ್ರದಲ್ಲಿ ಒಟ್ಟಾಗಿ ನಟಿಸುತ್ತಿರುವುದಾಗಿ ತಿಳಿಸಿದರು.WhatsApp Image 2022 05 27 at 7.38.38 PM 1

ನವೀನ್ ನನಗೆ ಬಹಳ ದಿನಗಳಿಂದ ಪರಿಚಯ. ಇವತ್ತು ಅವರ ಹುಟ್ಟುಹಬ್ಬ ಕೂಡ. ಎಲ್ಲಾ ಕೆಲಸಗಳಿಗೆ ದೇವರ ಆಶೀರ್ವಾದ ಬೇಕು. ಕೆಲವೊಮ್ಮೆ ರಾಕ್ಷಸರ ಆಶೀರ್ವಾದ ಬೇಕಾಗುತ್ತದೆ. ಹಾಗಾಗಿ ನಮ್ಮ ನಟ ರಾಕ್ಷಸ ಡಾಲಿ ಧನಂಜಯ ಬಂದಿದ್ದಾರೆ. ಅವರ ಆಶೀರ್ವಾದ ಚಿತ್ರತಂಡಕ್ಕೆ ಇರಲಿ ಎಂದರು ಸಿಂಪಲ್ ಸುನಿ.WhatsApp Image 2022 05 27 at 7.38.38 PM

ನಾನು ಖಾಸಗಿ ಕಂಪನಿಯೊಂದರಲ್ಲಿ ಕಾರ್ಯ ನಿರ್ವಹಿಸುತ್ತಿದ್ದೆ. “ಗುಲ್ಟು” ಸಿನಿಮಾ ನೋಡಿ ಅಭಿಮಾನಿಯಾದೆ. ನಾನು ಯಾರ ಬಳಿಯೂ ಸಹ ನಿರ್ದೇಶಕನಾಗಿ ಕೆಲಸ ಮಾಡಿಲ್ಲ. ಇದು ಮೊದಲ ಚಿತ್ರ. ರೈತನಿಗೆ ಸಂಸ್ಕತದಲ್ಲಿ ೨೧ ಹೆಸರುಗಳಿದೆ. ಅದರಲ್ಲಿ “ಕ್ಷೇತ್ರಪತಿ” ಸಹ ಒಂದು. “ರೈತ” ನನ್ನು “ಕ್ಷೇತ್ರಪತಿ” ಎಂಬ ಹೆಸರಿನಿಂದಲೂ ಕರೆಯುತ್ತಾರೆ.
ಇದೊಂದು ಅಪ್ಪ-ಮಗನ ಭಾಂದವ್ಯದ ಚಿತ್ರವೂ ಹೌದು. ಗದಗಿನ ತಿಮ್ಮಾಪುರ ಎಂಬ ಊರಿನಲ್ಲೇ ಹೆಚ್ಚಿನ ಚಿತ್ರೀಕರಣ ಮಾಡಿದ್ದೇವೆ. ಸಹಕಾರ ನೀಡಿದ್ದ ಅಲ್ಲಿನ ಜನತೆಗೆ ಅಭಿನಂದನೆ. ನಿರ್ಮಾಣಕ್ಕೆ ಜೊತೆಯಾಗಿರುವ ಸ್ನೇಹಿತರಿಗೂ ಧನ್ಯವಾದ ಎಂದರು ನಿರ್ದೇಶಕ ಶ್ರೀಕಾಂತ್ ಕಟಗಿ.WhatsApp Image 2022 05 27 at 7.38.38 PM 2

ಧನಂಜಯ್ ಹಾಗೂ ನನ್ನ ಸ್ನೇಹ ತುಂಬಾ ವರ್ಷಗಳದ್ದು. ನನಗೆ ಅವರು ನೀಡುತ್ತಿರುವ ಸಹಕಾರ ಅಪಾರ. ಸುನಿ ಅವರು ಕೂಡ ನನ್ನ ಮೊದಲ ಕಿರುಚಿತ್ರದ ಪೋಸ್ಟರ್ ಬಿಡುಗಡೆ ಮಾಡಿಕೊಟ್ಟಿದ್ದರು. ಜನಾರ್ದನ ಚಿಕ್ಕಣ್ಣ ಅವರ ಸಹಕಾರ ಕೂಡ ಮರೆಯುವ ಹಾಗಿಲ್ಲ. ಇವರೆಲ್ಲ ಬಂದಿರುವುದು ತುಂಬಾ ಸಂತೋಷವಾಗಿದೆ. ಶ್ರೀಕಾಂತ್ ಅವರು ಈ ಚಿತ್ರದ ಕಥೆ ಹೇಳಿದಾಗ, ನಾನು ಮನಸ್ಸಿನಲ್ಲಿ ಈ ರೀತಿಯ ಚಿತ್ರ ಮಾಡಬೇಕೆಂದುಕೊಳ್ಳುತ್ತಿದ್ದೆ. ಇದು ಸಹ ಅದೇ ರೀತಿಯ ಕಥೆಯಾಗಿದ್ದು ಕಾಕತಾಳೀಯ. ನಂತರ ನಿರ್ಮಾಪಕರ ಹುಡುಕಾಟ. ಆನಂತರ ನಾವೇ ಕೆಲವು ಸ್ನೇಹಿತರು ಸೇರಿ ಒಂದು ನಿರ್ಮಾಣ ಸಂಸ್ಥೆ ಪ್ರಾರಂಭ‌ ಮಾಡಿ ಚಿತ್ರೀಕರಣ ಆರಂಭಿಸಿದ್ದೆವು. ಸಾಕಷ್ಟು ಜನ ಸ್ನೇಹಿತರು ನಿರ್ಮಾಣಕ್ಕೆ
ಜೊತೆಯಾದರು. ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರ್ ಕಥೆ ಕೇಳಿ ಸಂತೋಷಪಟ್ಟರು. ಸಂಗೀತ ನೀಡಲು ಒಪ್ಪಿದರು. ಇನ್ನೂ ಈ ಚಿತ್ರದ ಬಗ್ಗೆ ಹೇಳಬೇಕೆಂದರೆ ನಾನು ಬಸವ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದೀನಿ. ಬಸವ ಇಂಜಿನಿಯರಿಂಗ್ ವಿದ್ಯಾರ್ಥಿ. ‌ತನ್ನಿಷ್ಟಕ್ಕೆ ತಾನು ಇರುವಾತ. ಆತನ ಜೀವನದಲ್ಲಿ ನಡೆಯುವ ಅನಿರೀಕ್ಷಿತ ಘಟನೆಯೊಂದರ ಮೂಲಕ ಈತ ಹೋರಾಟದ ಹಾದಿ ಹಿಡಿಯಬೇಕಾಗುತ್ತದೆ.‌ ಈ ಬಸವ ನನ್ನೊಳಗೆ, ನಿಮ್ಮೊಳಗೆ ಇದ್ದಾನೆ.‌ ಕೆಲವರಿಗೆ ಅವನು ಜೀವಂತ. ಇನ್ನೂ ಕೆಲವರಿಗೆ ಆತ‌ ಇಲ್ಲ. ಚಿತ್ರ ನೋಡಿದ ಮೇಲೆ ಅದರ ಬಗ್ಗೆ ತಿಳಿಯುತ್ತದೆ ಎಂದು ಕಥೆಯ ಬಗ್ಗೆ ವಿವರಿಸಿದ ನವೀನ್ ಶಂಕರ್, ಚಿತ್ರದ ಚಿತ್ರೀಕರಣ ಪೂರ್ಣವಾಗಿದೆ.‌ ನಂತರದ ಚಟುವಟಿಕೆಗಳು ಬಿರುಸಿನಿಂದ ಸಾಗುತ್ತಿದೆ ಎಂದರು.

ಚಿತ್ರದಲ್ಲಿ ನಟಿಸಿರುವ ರಾಹುಲ್ ಐನಾಪುರ ತಮ್ಮ ಪಾತ್ರದ ಬಗ್ಗೆ ‌ಮಾಹಿತಿ ನೀಡಿದರು. ಅತಿಥಿಯಾಗಿ ಆಗಮಿಸಿದ್ದ ಗಣೇಶ್ ಪಾಪಣ್ಣ ಚಿತ್ರತಂಡಕ್ಕೆ ಶುಭ ಕೋರಿದರು. ನಿರ್ಮಾಪಕರ ಪರವಾಗಿ ಪ್ರವೀಣಾ ಕುಲಕರ್ಣಿ ಮಾತನಾಡಿದರು.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…