ಬಿಡುಗಡೆಯಾಯ್ತು ಮಾಯಾನಗರಿಯ ಲಚ್ಚಿ ಹಾಡು

ವಿಭಿನ್ನ ಶೈಲಿಯ ಹಾರರ್, ಥ್ರಿಲ್ಲರ್ ಕಥಾಹಂದರ ಹೊಂದಿರುವ ಮಾಯಾನಗರಿ ಚಿತ್ರದ ಲಚ್ಚಿ ಲಚ್ಚಿ ಹಾಡಿನ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ರೀಲ್ಸ್ ನಲ್ಲೇ ಫೇಮಸ್ ಆಗಿ, ಲಕ್ಷಾಂತರ ಫಾಲೋವರ್ಸ್ ಹೊಂದಿರುವ 5 ವರ್ಷದ ಮಗು ನಿಶಿತಾ ಕೈಲಿ ಲಚ್ಚಿ ಹಾಡನ್ನು ಬಿಡುಗಡೆಗೊಳಿಸಲಾಯಿತು.Lachi song from Mayanagari released

ಅನೀಶ್ ತೇಜೇಶ್ವರ್, ತೇಜು ಹಾಗೂ ಶ್ರಾವ್ಯರಾವ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರಕ್ಕೆ ಶಂಕರ್ ಆರಾಧ್ಯ ಕಥೆ ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಚಿತ್ರರಂಗದಲ್ಲಿ ನಡೆಯುವ ಒಂದಷ್ಟು ಸತ್ಯ ಘಟನೆಗಳನ್ನಿಟ್ಟುಕೊಂಡು ಶಂಕರ್ ಆರಾಧ್ಯ ಈ ಚಿತ್ರವನ್ನು ನಿರೂಪಿಸಿದ್ದಾರೆ. ಮಾಯಾನಗರಿ ಇದೀಗ ಬಿಡುಗಡೆಗೆ ಸಿದ್ದವಾಗಿದ್ದು ಇತ್ತೀಚೆಗಷ್ಟೇ ಚಿತ್ರದ ಟ್ರೈಲರ್ ಬಿಡುಗಡೆಯಾಗಿ ವೈರಲ್ ಆಗಿದೆ.

MALAVIKA MOHANAN ಕೇರಳ ಬ್ಯೂಟಿಯ ಗ್ಲಾಮರ್ ಲುಕ್‌ಗೆ ಮನಸೋಲದವರು ಯಾರು?

ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕ ಶಂಕರ್, ಈ ಹಾಡು ನಮ್ಮ ಚಿತ್ರಕ್ಕೆ ಟ್ರಂಪ್ ಕಾರ್ಡ್ ಆಗುತ್ತೆ ಅಂತ ಕಲರ್ ಫುಲ್ ಆಗಿಯೇ ಶೂಟ್ ಮಾಡಿದ್ದೇವೆ. ಕಂಠೀರವ ಸ್ಟುಡಿಯೋ ಹಾಗೂ ಇನ್ನೋವೇಟಿವ್ ಫಿಲಂ ಸಿಟಿಯಲ್ಲಿ 6 ದಿನ ಇದನ್ನು ಚಿತ್ರೀಕರಿಸಿದ್ದೇವೆ. ಹಾರರ್, ಆ್ಯಕ್ಷನ್, ಫ್ಯಾಮಿಲಿ ಸೆಂಟಿಮೆಂಟ್ ಕಥೆ ಇದಾಗಿದ್ದು, ಚಿತ್ರದಲ್ಲಿ ನಾಯಕ ಶಂಕರ್ ನಾಗ್ ಅಭಿಮಾನಿ, ಚಿತ್ರರಂಗದಲ್ಲಿ ದೊಡ್ಡ ನಿರ್ದೇಶಕನಾಗಬೇಕೆಂದು ಹೋರಾಟ ನಡೆಸುವ ಆತನಿಗೆ ಕೊನೆಗೂ ಒಂದು ಅವಕಾಶ ಸಿಕ್ಕಿ, ಮಾಯಾನಗರಿ ಎಂಬ ಸ್ಥಳಕ್ಕೆ ಹೋಗಬೆಕಾಗುತ್ತದೆ. ಆ ಊರಿಗೆ ಬರುವ ಆತ ಅಲ್ಲಿ ತಾನೇ ಪಾತ್ರವಾಗಬೇಕಾಗುತ್ತದೆ. ಹೀಗೆ ಕುತೂಹಲಕಾರಿಯಾಗಿ ಸಾಗುವ ಈ ಚಿತ್ರಕ್ಕೆ ಬೆಂಗಳೂರು, ಶಿವಮೊಗ್ಗ, ಸಾಗರ, ಚಿಕ್ಕಮಗಳೂರು, ಭದ್ರಾವತಿ ಸುತ್ತಮುತ್ತ ಸುಮಾರು 65 ದಿನಗಳ‌ ಕಾಲ ಚಿತ್ರೀಕರಣ ಮಾಡಿದ್ದೇವೆ. ವಿಶೇಷವಾಗಿ ಹಿರಿಯ ನಟ ದ್ವಾರಕೀಶ್ ಅವರು ರಿಯಲ್ ಲೈಫ್ ಪಾತ್ರವನ್ನೇ ಮಾಡಿದ್ದಾರೆ ಎಂದು ಹೇಳಿದರು.Lachi song from Mayanagari released

ನಾಯಕ ಅನೀಶ್ ಮಾತನಾಡುತ್ತ ನಾನು ತುಂಬಾ ಇಷ್ಟಪಟ್ಟು ಮಾಡಿದಂಥ ಪಾತ್ರವಿದು. ದ್ವಾರಕೀಶ್ ರಂಥ ನಟರ ಜೊತೆ ಸ್ಕ್ರೀನ್ ಶೇರ್ ಮಾಡಿದ್ದು ನನ್ನ ಅದೃಷ್ಟ. ಡೈರೆಕ್ಟರ್ ಆಗಬೇಕೆಂದು ಕನಸು ಕಾಣೋ ಹುಡುಗನ ಪಾತ್ರ ಮಾಡಿದ್ದೇನೆ ಎಂದರು.

ನಂಬಿಕೆಗಿಂತ ಸಂದೇಹವೆ ಹೆಚ್ಚಾದರೆ ಯಾವ ಸಂಬಂಧವೂ ಉಳಿಯಲ್ಲ.

ನಟಿ ಶ್ರಾವ್ಯ ರಾವ್ ಮಾತನಾಡಿ ಚಿತ್ರದಲ್ಲಿ ನಾನು ಮಲ್ಲಿಕಾ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ ನನ್ನ‌ ಕರಿಯರ್ ನಲ್ಲೇ ಒಂದು ಬೆಸ್ಟ್ ಪಾತ್ರ. ತುಂಬಾ ಶೇಡ್ಸ್ ಇದೆ ಎಂದರು. ಮತ್ತೊಬ್ಬ‌ ನಟ ಭರತ್ ಮಾತನಾಡಿ ತನ್ನ ಪಾತ್ರ ಪರಿಚಯಿಸಿಕೊಂಡರು.
ಚಿತ್ರದಲ್ಲಿ ಇನ್ನೂ ಹಲವಾರು ವಿಶೇಷತೆಗಳಿದ್ದು, ಅದನ್ನು ಹಂತ ಹಂತವಾಗಿ ಪರಿಚಯಿಸುವ ಆಲೋಚನೆ ಶಂಕರ್ ಅವರಿಗಿದೆ. ಸ್ಯಾಂಡಲ್ ವುಡ್ ಪಿಕ್ಚರ್ಸ್ ಬ್ಯಾನರ್ ಅಡಿ, ನಿರ್ಮಾಣವಾಗಿರುವ ಈ ಚಿತ್ರಕ್ಕೆ ಶ್ವೇತಾ ಶಂಕರ್ ಸಹ ನಿರ್ಮಾಣವಿದೆ.Lachi song from Mayanagari released

ಥ್ರಿಲ್ಲರ್ ಚಿತ್ರ ‘ಕಣಂಜಾರು’ ಮೋಷನ್ ಪೋಸ್ಟರ್ ಶೀರ್ಷಿಕೆ ಬಿಡುಗಡೆ

ತಾಂತ್ರಿಕವಾಗಿ ಅದ್ಧೂರಿಯಾಗಿ ಮೂಡಿ ಬಂದಿರುವ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ವಿಕ್ರಮ್ ಮೋರ್ ಫೈಟ್ ಕಂಪೋಸ್ ಮಾಡಿದ್ದಾರೆ. ಮದನ್ – ಹರಿಣಿ ಹಾಗೂ ಮುರಳಿ ನೃತ್ಯ ನಿರ್ದೇಶನ, ವಿಜಯ್ ಎಂ ಕುಮಾರ್ ಸಂಕಲನ, ಶ್ರೀನಿವಾಸ್ ಕ್ಯಾಮೆರಾ ಕೈಚಳಕ ಈ ಚಿತ್ರಕ್ಕಿದೆ. ಶರತ್ ಲೋಹಿತಾಶ್ವ, ಅವಿನಾಶ್, ಸುಚೇಂದ್ರ ಪ್ರಸಾದ್, ಎಡಕಲ್ಲು ಗುಡ್ಡದ ಚಂದ್ರಶೇಖರ್, ಚಿಕ್ಕಣ್ಣ, ಗಿರಿ ದಿನೇಶ್ ಹಾಗೂ ನಿಹಾರಿಕಾ ಚಿತ್ರದ ತಾರಬಳಗದಲ್ಲಿದ್ದಾರೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…