ವಿನೋದ್ ಪ್ರಭಾಕರ್ ನಿರ್ಮಾಣ ಹಾಗೂ ಅಭಿನಯದ “ಲಂಕಾಸುರ” ಚಿತ್ರದ ಚಿತ್ರೀಕರಣ ಪೂರ್ಣ.

ಸದ್ಯದಲ್ಲೇ ಟೀಸರ್ ಬಿಡುಗಡೆ


ವಿನೋದ್ ಪ್ರಭಾಕರ್ ಟೈಗರ್ ಟಾಕೀಸ್ ಎಂಬ ನಿರ್ಮಾಣ ಸಂಸ್ಥೆ ಪ್ರಾರಂಭ ಮಾಡಿದ್ದಾರೆ. ಅದರ ಮೂಲಕ ಮೊದಲ ಪ್ರಯತ್ನವಾಗಿ “ಲಂಕಾಸುರ” ಎಂಬ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.128411453 101240241851089 5781600571888512689 n

ಇತ್ತೀಚೆಗೆ ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು ಹಾಗೂ ಗೋವಾದಲ್ಲಿ ಸುಮಾರು 65 ದಿನಗಳ ಚಿತ್ರೀಕರಣ ನಡೆದಿದೆ. ಪೋಸ್ಟ್ ಪ್ರೊಡಕ್ಷನ್ಸ್ ಕೆಲಸ ಬಿರುಸಿನಿಂದ ಸಾಗಿದೆ. ಸದ್ಯದಲ್ಲೇ ಟೀಸರ್ ಸಹ ಬಿಡುಗಡೆಯಾಗಲಿದೆ ಎಂದು ನಿರ್ಮಾಪಕಿ ನಿಶಾ ವಿನೋದ್ ಪ್ರಭಾಕರ್ ತಿಳಿಸಿದ್ದಾರೆ.WhatsApp Image 2022 06 06 at 1.26.11 AM

ವಿನೋದ್ ಪ್ರಭಾಕರ್ ಹಾಗೂ ಲೂಸ್ ಮಾದ ಯೋಗಿ ಮೊದಲ ಬಾರಿಗೆ ಈ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದಾರೆ. ನಾಯಕಿಯಾಗಿ ಪಾರ್ವತಿ ಅರುಣ್ ಅಭಿನಯಿಸಿದ್ದಾರೆ. ಹಿರಿಯ ನಟರಾದ ದೇವರಾಜ್, ರವಿಶಂಕರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.WhatsApp Image 2022 06 06 at 1.26.11 AM 1

ಈ ಚಿತ್ರದ ಆಕ್ಷನ್ ಸನ್ನಿವೇಶಗಳು ಮೈನವಿರೇಳಿಸುವ ಹಾಗಿದೆ. ಐದು ಸಾಹಸ ಸನ್ನಿವೇಶಗಳಿದ್ದು, ಡಿಫರೆಂಟ್ ಡ್ಯಾನಿ, ವಿನೋದ್, ಚೇತನ್ ಡಿಸೋಜ, ಅರ್ಜುನ್ ರಾಜ್ , ಕುಂಗ್ಫು ಚಂದ್ರು ಸಾಹಸ ನಿರ್ದೇಶನ ಮಾಡಿದ್ದಾರೆ. ಒಂದು ಸಾಹಸ ಸನ್ನಿವೇಶಕ್ಕಾಗಿ ವಿನೋದ್ ಪ್ರಭಾಕರ್ ಹತ್ತು ಕೆಜಿ ತೂಕ ಇಳಿಸಿಕೊಂಡಿದ್ದಾರೆ. ಚಿತ್ರ ಬಿಡುಗಡೆಗಾಗಿ ಮರಿ ಟೈಗರ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.239657175 258162882825490 5673525128887152510 n

ಪ್ರಮೋದ್ ಕುಮಾರ್ ಈ ಚಿತ್ರದ ನಿರ್ದೇಶಕರು. ವಿಜೇತ್ ಕೃಷ್ಣ ಸಂಗೀತ ನಿರ್ದೇಶನ, ಸುಜ್ಞಾನ್ ಛಾಯಾಗ್ರಹಣ, ಮುರಳಿ, ಮೋಹನ್ ಅವರ ನೃತ್ಯ ನಿರ್ದೇಶನ ಹಾಗೂ ದೀಪು ಎಸ್ ಕುಮಾರ್ ಸಂಕಲನ ಈ ಚಿತ್ರಕ್ಕಿದೆ.241208906 264939615481150 1155701041936171315 n

ವಿನೋದ್ ಪ್ರಭಾಕರ್ ಅವರು ಟೈಗರ್ ಟಾಕೀಸ್ ಹೆಸರಿನಲ್ಲಿ ಯೂಟ್ಯೂಬ್ ಚಾನಲ್ ಆರಂಭ ಮಾಡಿದ್ದಾರೆ. “ಲಂಕಾಸುರ” ಚಿತ್ರದ ಕುರಿತಾದ ಎಲ್ಲಾ ಮಾಹಿತಿ ಈ ಯೂಟ್ಯೂಬ್ ಚಾನಲ್ ನಲ್ಲಿ ಲಭ್ಯವಿರುತ್ತದೆ.277520488 379724360669341 5220319324982329894 n

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…