ವಿಜಯ್​ ಹುಟ್ಟುಹಬ್ಬಕ್ಕೆ ‘ಲಿಯೋ’ ಚಿತ್ರದ ‘ನಾ ರೆಡಿದಾ ವರವಾ’ ಹಾಡು ಬಿಡುಗಡೆ

LEO - Naa Ready Lyric Video | Thalapathy Vijay

ಬಿಡುಗಡೆಯಾದ ಕೆಲವೇ ಗಂಟೆಗಳಲ್ಲೇ ಮೂರು ಮಿಲಿಯನ್ ಗೂ ಅಧಿಕ ವೀಕ್ಷಣೆ .

ಕಾಲಿವುಡ್​ನ ಜನಪ್ರಿಯ ನಟ ವಿಜಯ್​ ಗುರುವಾರ (ಜೂನ್​ 22) ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಹುಟ್ಟುಹಬ್ಬದ ಪ್ರಯುಕ್ತ ಬುಧವಾರ ಮಧ್ಯರಾತ್ರಿಯೇ ‘ಲಿಯೋ’ ಚಿತ್ರತಂಡದವರು ಫಸ್ಟ್​ಲುಕ್​ ಪೋಸ್ಟರ್​ ಬಿಡುಗಡೆ ಮಾಡುವ ಮೂಲಕ ವಿಜಯ್​ ಅವರಿಗೆ ಶುಭಾಶಯ ಕೋರಿದ್ದರು. ಈಗ ಚಿತ್ರದ ಮೊದಲ ಲಿರಿಕಲ್​ ಹಾಡು ಬಿಡುಗಡೆಯಾಗಿದೆ.LEO - Naa Ready Lyric Video | Thalapathy Vijay

‘ನಾ ರೆಡಿದಾ ವರವಾ’ ಎಂಬ ಲಿರಿಕಲ್​ ಹಾಡು ಬಿಡುಗಡೆಯಾಗಿದ್ದು, ಈ ಹಾಡಿಗೆ ವಿಜಯ್​ ಮತ್ತು ಸಂಗೀತ ನಿರ್ದೇಶಕ ಅನಿರುದ್ಧ್​ ರವಿಚಂದರ್​ ಧ್ವನಿಯಾಗಿರುವುದು ವಿಶೇಷ. ಈ ಹಾಡಿಗೆ ವಿಷ್ಣು ಎಡವನ್​ ಸಾಹಿತ್ಯ ರಚಿಸಿದ್ದು, ವಿಜಯ್​ ಸಖತ್​ ಸ್ಟೆಪ್​ ಹಾಕಿದ್ದಾರೆ. ಈ ಹಾಡು ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಮೂರು ಮಿಲಿಯನ್​ಗಳಿಗೂ ಹೆಚ್ಚು ವೀಕ್ಷಣೆ ಕಂಡಿದೆ.LEO - Naa Ready Lyric Video | Thalapathy Vijay

‘ಮಾಸ್ಟರ್’ ನಂತರ ನಿರ್ದೇಶಕ ಲೋಕೇಶ್​ ಕನಕರಾಜ್​ ಮತ್ತು ವಿಜಯ್ ಜೊತೆಯಾಗಿ ಕೆಲಸ ಮಾಡುತ್ತಿರುವ ‘ಲಿಯೋ’ ಚಿತ್ರವನ್ನು ಸೆವೆನ್​ ಸ್ಕ್ರೀನ್​ ಸ್ಟುಡಿಯೋಸ್​ ಬ್ಯಾನರ್​ನಲ್ಲಿ ಲಲಿತ್​ ಕುಮಾರ್​ ನಿರ್ಮಿಸುತ್ತಿದ್ದಾರೆ. ಇನ್ನು, ನಿರ್ದೇಶನದ ಜೊತೆಗೆ ಕಥೆ ಮತ್ತು ಚಿತ್ರಕಥೆಯನ್ನೂ ರಚಿಸಿದ್ದಾರೆ ವಿಜಯ್​.
‘ಲಿಯೋ’ ಒಂದು ಪ್ಯಾನ್​ ಇಂಡಿಯಾ ಚಿತ್ರವಾಗಿದ್ದು, ಅಕ್ಟೋಬರ್​ 19ರಂದು ಐದು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. ಬಾಲಿವುಡ್​ ನಟ ಸಂಜಯ್​ ದತ್​ ಈ ಚಿತ್ರದ ಮೂಲಕ ಕಾಲಿವುಡ್​ಗೆ ಎಂಟ್ರಿ ಕೊಡುತ್ತಿದ್ದು, ವಿಜಯ್​ ಮತ್ತು ಸಂಜಯ್​ ದತ್​ ಜೊತೆಗೆ ತ್ರಿಷಾ, ಅರ್ಜುನ್‌ ಸರ್ಜಾ, ಪ್ರಿಯಾ ಆನಂದ್, ಮನ್ಸೂರ್‌ ಅಲಿ ಖಾನ್‌, ಗೌತಮ್​ ಮೆನನ್​, ಮಿಸ್ಕಿನ್​ ಮುಂತದವರು ಅಭಿನಯಿಸುತ್ತಿದ್ದಾರೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…