’ಲೈನ್ ಮ್ಯಾನ್’ ಮೋಷನ್ ಪೋಸ್ಟರ್ ರಿಲೀಸ್..ಮಾ.15ಕ್ಕೆ ತೆರೆಗೆ ಬರ್ತಿದೆ ತ್ರಿಗುಣ್ ಸಿನಿಮಾ..

ಮತ್ತೆ ಬಂದರು ಟಕ್ಕರ್ ರಘು ಶಾಸ್ತ್ರೀ…’ಲೈನ್ ಮ್ಯಾನ್’ ಅವತಾರದಲ್ಲಿ ತ್ರಿಗುಣ್..ಮಾ.15ಕ್ಕೆ ಚಿತ್ರ ರಿಲೀಸ್..

ಕನ್ನಡ ಚಿತ್ರರಂಗದಲ್ಲಿ ರನ್ ಆಂಟೋನಿ ಹಾಗೂ ಟಕ್ಕರ್ ಚಿತ್ರಗಳಿಗೆ ಆ್ಯಕ್ಷನ್ ಕಟ್ ಹೇಳಿದ್ದ ನಿರ್ದೇಶಕ ರಘು ಶಾಸ್ತ್ರಿ ಇದೀಗ ಮತ್ತೊಂದು ವಿಭಿನ್ನ ಸಿನಿಮಾದೊಂದಿಗೆ ಬರುತ್ತಿದ್ದಾರೆ. ಈ ಚಿತ್ರಕ್ಕೆ ‘ಲೈನ್ ಮ್ಯಾನ್’ ಎಂಬ ಶೀರ್ಷಿಕೆ ಇಡಲಾಗಿದೆ. ಡಿಫ್ರೆಂಟ್ ಟೈಟಲ್ ಮೂಲಕ ಸಿನಿಮಾ ಪ್ರೇಕ್ಷಕರ ಗಮನ ಸೆಳೆಯುತ್ತಿದ್ದು, ಇದೀಗ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ.Line Man' Motion Poster Release

ಲೈನ್ ಮ್ಯಾನ್ ಮೋಷನ್ ಪೋಸ್ಟರ್ ಅನಾವರಣಗೊಂಡಿದೆ. ಸರಿಗಮ ಕನ್ನಡ ಯೂಟ್ಯೂಬ್ ನಲ್ಲಿ ಚಿತ್ರದ ಝಲಕ್ ರಿಲೀಸ್ ಆಗಿದ್ದು, ಹಳ್ಳಿ ಬ್ಯಾಕ್ ಡ್ರಾಪ್ ನಲ್ಲಿ ಮೂಡಿಬಂದಿದೆ. ಕದ್ರಿ ಮಣಿಕಾಂತ್ ಮ್ಯೂಸಿಕ್ ಕಿಕ್ ಕೊಡ್ತಿದೆ. ಯುವ ನಟ ತ್ರಿಗುಣ್ ಅವರು ಲೈನ್ ಮ್ಯಾನ್ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಆರ್.ಜಿ.ವಿ ನಿರ್ದೇಶನದ ‘ಕೊಂಡ’ ಚಿತ್ರ ಸೇರಿದಂತೆ ಕೆಲ ಸಿನಿಮಾಗಳಲ್ಲಿ ನಟಿಸಿರುವ ತ್ರಿಗುಣ್ ಅವರಿಗಿದು ನಾಯಕ ನಟನಾಗಿ ಚೊಚ್ಚಲ ಚಿತ್ರ. ಹಾಗಾಗಿ ಸಿನಿಮಾ ಕುರಿತು ಸಾಕಷ್ಟು ನಿರೀಕ್ಷೆ, ಭರವಸೆಯನ್ನಿಟ್ಟುಕೊಂಡಿದ್ದಾರೆ. ಚಿತ್ರದಲ್ಲಿ ಕಾಜಲ್ ಕುಂದರ್ ನಾಯಕಿಯಾಗಿ ಅಭಿನಯಿಸಿದ್ದಾರೆ. ಉಳಿದಂತೆ ಹಿರಿಯ ನಟಿ ಬಿ ಜಯಶ್ರೀ, ಮೈಕೋ ನಾಗರಾಜ್, ಹರಿಣಿ, ಅಂಜಲಿ, ಅಪೂರ್ವಶ್ರೀ ಸೇರಿದಂತೆ ದೊಡ್ಡ ತಾರಾಬಳಗ ಚಿತ್ರದಲ್ಲಿದೆ.Line Man' Motion Poster Release


ವಿದ್ಯುತ್ಗೆ ಸಂಬಂಧಿಸಿದ ಕೆಲಸ, ತೊಂದರೆ ಸರಿಪಡಿಸುವ ‘ಲೈನ್ ಮ್ಯಾನ್’ ಸುತ್ತ ಈ ಕಥೆ ಸುತ್ತುತ್ತದೆ. ಭಿನ್ನ, ಡಿಯರ್ ಸತ್ಯ ಸಿನಿಮಾಗಳನ್ನು ನಿರ್ಮಿಸಿರುವ ಪರ್ಪಲ್ ರಾಕ್ ಸಂಸ್ಥೆಯ ಮೂರನೇ ಚಿತ್ರವೇ ‘ಲೈನ್ ಮ್ಯಾನ್’. ಯತೀಶ್ ವೆಂಕಟೇಶ್, ಗಣೇಶ್ ಪಾಪಣ್ಣ, ಶ್ರೀನಿವಾಸ್ ಬಿಂಡಿಗನವಿಲೆ ಹಾಗೂ ಅಜಯ್ ಅಪರೂಪ್ ಸೇರಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.Line Man' Motion Poster Release
ಮೂರು ಹಾಡುಗಳಿರುವ ಈ ಚಿತ್ರಕ್ಕೆ ಮಣಿಕಾಂತ್ ಕದ್ರಿ ಸಂಗೀತ ನೀಡಿದ್ದಾರೆ. ಶಾಂತಿ ಸಾಗರ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಪ್ರಚುರ ಪಿ.ಪಿ, ಜ್ಯೋತಿ ರಘು ಶಾಸ್ತ್ರೀ ಹಾಗೂ ಮಣಿಕಾಂತ್ ಕದ್ರಿ ಅವರ ಸಹ ನಿರ್ಮಾಣವಿದೆ. ಚಾಮರಾಜನಗರದ ಚಂದಕವಾಡಿಯಲ್ಲಿ ಶೂಟಿಂಗ್ ನಡೆಸಲಾಗಿದ್ದು, ಕನ್ನಡ ಹಾಗೂ ತೆಲುಗು ಸೇರಿ ಎರಡು ಭಾಷೆಯಲ್ಲಿ ಚಿತ್ರ ತಯಾರಾಗಿದೆ. ಸೆನ್ಸಾರ್ ಪಾಸಾಗಿರುವ ಲೈನ್ ಮ್ಯಾನ್ ಸಿನಿಮಾ ಮಾರ್ಚ್ 15ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…