ಶಶಾಂಕ್ ನಿರ್ದೇಶನದ “ಮೊಗ್ಗಿನ ಮನಸ್ಸು” ಚಿತ್ರಕ್ಕೀಗ ಹದಿನಾಲ್ಕರ ಹರೆಯ

love 360 kannada movie songs

ಈ ಸುಂದರ ನೆನಪಿನೊಂದಿಗೆ ಬಿಡುಗಡೆಯಾಯಿತು “ಲವ್ 360” ಚಿತ್ರದ ಮತ್ತೊಂದು ಹಾಡು

ಕನ್ನಡ ಚಿತ್ರರಂಗಕ್ಕೆ ಸದಭಿರುಚಿ ಚಿತ್ರಗಳನ್ನು ನೀಡುತ್ತಾ ಬಂದಿರುವವರು ನಿರ್ದೇಶಕ ಶಶಾಂಕ್. ಅವರ ನಿರ್ದೇನದಲ್ಲಿ ಮೂಡಿಬಂದಿದ್ದ “ಮೊಗ್ಗಿನ ಮನಸ್ಸು” ಚಿತ್ರ‌ ಬಿಡುಗಡೆಯಾಗಿ ಹದಿನಾಲ್ಕು ವರ್ಷಗಳಾಗಿದೆ. ಈ ಸುಂದರ ನೆನಪಿನೊಂದಿಗೆ ಪ್ರಸ್ತುತ ಅವರು ನಿರ್ದೇಶಿಸಿರುವ “ಲವ್ 360” ಚಿತ್ರದ “ಭೋರ್ಗರೆದು” ಎಂಬ ಹಾಡು ಬಿಡುಗಡೆಯಾಗಿದೆ. ಶಶಾಂಕ್ ಅವರೆ ಬರೆದಿರುವ ಈ ಹಾಡನ್ನು ಕೀರ್ತನ್ ಹೊಳ್ಳ ಹಾಡಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ.love 360 kannada movie songs

ನಾನು “ಲವ್ 360” ಸಿನಿಮಾದ ಈ ಹಾಡನ್ನು ಇಂದು ಬಿಡುಗಡೆ ಮಾಡಲು ಪ್ರಮುಖ ಕಾರಣವಿದೆ. ಅದೇನೆಂದರೆ, ನನ್ನ ನಿರ್ದೇಶನದ “ಮೊಗ್ಗಿನ ಮನಸ್ಸು” ಚಿತ್ರ ತೆರೆಕಂಡು ಇಂದಿಗೆ(ಜಲೈ 18)ಹದಿನಾಲ್ಕು ವರ್ಷಗಳಾಗಿದೆ. ಹಾಗಾಗಿ ಇಂದು ಆ ಚಿತ್ರದ ನೆನಪುಗಳೊಂದಿಗೆ “ಲವ್ 360” ಚಿತ್ರದ ಮೂರನೇ ಹಾಡನ್ನು ಬಿಡುಗಡೆ ಮಾಡಿದ್ದೇವೆ. “ಮೊಗ್ಗಿನ ಮನಸ್ಸು” ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿದ್ದ ಗಂಗಾಧರ್ ಅವರಿಂದ ಈ ಹಾಡನ್ನು ಬಿಡುಗಡೆ ಮಾಡಿದ್ದಾರೆ. ಆ ಚಿತ್ರದ ನಿರ್ಮಾಪಕ ಇ.ಕೃಷ್ಣಪ್ಪ ಅವರನ್ನು ಆಹ್ವಾನಿಸಿದ್ದೆ. ಕಾರ್ಯದೊತ್ತಡದಿಂದ ಅವರಿಗೆ ಬರಲಾಗಲಿಲ್ಲ . ರಾಕಿಂಗ್ ಸ್ಟಾರ್ ಯಶ್, ರಾಧಿಕಾ ಪಂಡಿತ್, ಶುಭಾ ಪುಂಜಾ ಮುಂತಾದವರು ಅಭಿನಯಿಸಿದ್ದ ಸಿನಿಮಾವದು. ಚಿತ್ರ ಹಾಗೂ ಹಾಡುಗಳು ಈಗಲೂ ಜನಪ್ರಿಯ. ಮುಂದೊಂದು ದಿನ “ಮೊಗ್ಗಿನ ಮನಸ್ಸು ಭಾಗ 2” ಮಾಡುವ ಆಸೆಯಿದೆ. ಆ ಚಿತ್ರವನ್ನೂ ಹೊಸ ಕಲಾವಿದರೊಂದಿಗೆ ಮಾಡುತ್ತೇನೆ. ಇನ್ನು ಇಂದು ಬಿಡುಗಡೆಯಾಗಿರುವ “ಲವ್ 360” ಚಿತ್ರದ “ಭೋರ್ಗರೆದು” ಹಾಡನ್ನು ನಾನೇ ಬರೆದಿದ್ದೇನೆ. ಕೀರ್ತನ್ ಹೊಳ್ಳ ಹಾಡಿದ್ದಾರೆ. ಇನ್ನೊಂದು ಹಾಡಿದೆ. ಅದನ್ನು ಸದ್ಯದಲ್ಲೇ ಬಿಡುಗಡೆ ಮಾಡುತ್ತೇವೆ.love 360 kannada movie songs

ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಸೂಕ್ತ ಸಮಯದಲ್ಲಿ ಬಿಡುಗಡೆ ಮಾಡುತ್ತೇವೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಎರಡು ಹಾಡುಗಳು ಜನಪ್ರಿಯವಾಗಿದೆ. ಅದರಲ್ಲೂ ಸಿದ್ ಶ್ರೀರಾಮ್ ಹಾಡಿರುವ “ಜಗವೇ ನೀನು ಗೆಳತಿಯೆ” ಹಾಡಂತೂ ನಾವು ಅಂದುಕೊಂಡದಕ್ಕಿಂತ ದೊಡ್ಡ ಯಶಸ್ಸು ಕಂಡಿದೆ. ರೀಲ್ಸ್ ನಲ್ಲೂ ಈ ಹಾಡಿಗೆ ಹೆಜ್ಜೆ ಹಾಕುತ್ತಿರುವವರು ಹೆಚ್ಚಾಗಿದ್ದಾರೆ ಎಂದು ನಿರ್ದೇಶಕ ಶಶಾಂಕ್ ಮಾಹಿತಿ ನೀಡಿದರು.love 360 kannada movie songs

ನಮ್ಮ ಚಿತ್ರದ ಬಿಡುಗಡೆಗೆ ಕಾತುರದಿಂದ ಕಾಯುತ್ತಿದ್ದೇನೆ. “ಜಗವೇ ನೀನು” ಹಾಡಿನಿಂದ ಈಗಾಗಲೇ ಜನ ನನ್ನನ್ನು ಹೋದ ಕಡೆ ಎಲ್ಲಾ ಗುರುತಿಸುತ್ತಿದ್ದಾರೆ. ಚಿತ್ರದ ಗೆಲುವಿನ ಖುಷಿಯನ್ನು ಈ ಹಾಡು ನನಗೆ ಈಗಾಗಲೇ ನೀಡಿದೆ. ಇಂತಹ ಅದ್ಭುತ ಹಾಡು ಕೊಟ್ಟಿರುವ ನಿರ್ದೇಶಕರಿಗೆ ಹಾಗೂ ಮೆಚ್ಚಿಕೊಂಡಿರುವ ಕಲಾರಸಿಕರಿಗೆ ಧನ್ಯವಾದ. ಇಂದು ಬಿಡುಗಡೆಯಾಗಿರುವ ಹಾಡು ಕೂಡ ಜನರ ಮನಸ್ಸಿಗೆ ಹತ್ತಿರವಾಗಲಿದೆ ಎಂದರು ನಾಯಕ ಪ್ರವೀಣ್.love 360 kannada movie songs

ಬಿಡುಗಡೆಯಾಗಿರುವ ಎರಡು ಹಾಡುಗಳು ಗೆದ್ದಿದೆ. ಹಿರಿಯರು, ಕಿರಿಯರು ಎಲ್ಲಾ ವಯಸ್ಸಿನವರಿಗೂ “ಜಗವೇ ನೀನು ಗೆಳತಿಯೆ” ಹಾಡು ಇಷ್ಟವಾಗಿದೆ. ಚಿತ್ರ ಕೂಡ ಎಲ್ಲರ ಮನ ಗೆಲ್ಲುತ್ತದೆ ಎಂದರು ನಾಯಕಿ ರಚನಾ ಇಂದರ್.love 360 kannada movie songs

“ಲವ್ 360” ಹಾಡುಗಳು ದೊಡ್ಡ ಮಟ್ಟದಲ್ಲಿ ಹಿಟ್ ಆಗಿರುವುದಕ್ಕೆ ಆನಂದ್ ಆಡಿಯೋ ಶ್ಯಾಮ್ ಸಂತಸಪಟ್ಟರು. ಚಿತ್ರೀಕರಣದ ಅನುಭವಗಳನ್ನು ಛಾಯಾಗ್ರಾಹಕ ಅಭಿಲಾಷ್ ಕಲ್ಲತ್ತಿ ಮಾಧ್ಯಮದ ಮುಂದೆ ಹಂಚಿಕೊಂಡರು.love 360 kannada movie songs

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…